ಚಾಮರಾಜನಗರ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ 20 ವರ್ಷ ಶಿಕ್ಷೆ
Team Udayavani, Dec 30, 2022, 7:25 PM IST
ಚಾಮರಾಜನಗರ: ಎಂಟು ವರ್ಷದ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ ಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ ಪೋಕ್ಸೋ ಕಾಯ್ದೆಯಡಿ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ.
ಜಿಲ್ಲೆಯ ಯಳಂದೂರು ಪಟ್ಟಣದ ಮಹೇಶ (28) ಶಿಕ್ಷೆಗೆ ಗುರಿಯಾದ ಅಪರಾಧಿ. ಈತ 2019ರ ಸೆಪ್ಟೆಂಬರ್ 30 ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಯಳಂದೂರು ಪಟ್ಟಣ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಎ.ಕೆ. ರಾಜೇಶ್ ಅವರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೋಕ್ಸೋ ಕಾಯ್ದೆಯಡಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆದು ಆರೋಪಿ ಮಹೇಶನು ಕೃತ್ಯ ಎಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ನಗರದ ಮಕ್ಕಳ ಸ್ನೇಹಿ ನ್ಯಾಯಾಲಯ ಹಾಗೂ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರಾದ ನಿಶಾರಾಣಿಯವರು ಅಪರಾಧಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ್ದಾರೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 4 ಲಕ್ಷ ರೂ.ಗಳನ್ನು ನೊಂದ ಬಾಲಕಿಗೆ ಪರಿಹಾರ ರೂಪದಲ್ಲಿ 30 ದಿನಗಳ ಒಳಗೆ ನೀಡಬೇಕೆಂದು ತೀರ್ಪು ನೀಡಿದ್ದಾರೆ.ವಿಶೇಷ ಸರ್ಕಾರಿ ಅಭಿಯೋಜಕ ಕೆ. ಯೋಗೇಶ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ