ಚಾ.ನಗರ: ಸರಳ ದಸರಾ ಆಚರಣೆಗೆ ನಿರ್ಧಾರ


Team Udayavani, Sep 28, 2020, 3:12 PM IST

cn-tdy-1

ಚಾಮರಾಜನಗರ: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಭಾಗವಾಗಿ ಚಾಮರಾಜನಗರ ಜಿಲ್ಲೆಯಲ್ಲಿ ಆಚರಿಸಲಾಗುತ್ತಿದ್ದ ದಸರಾ ಮಹೋತ್ಸವವನ್ನು ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸಾಂಪ್ರದಾಯಕವಾಗಿ ಹಾಗೂ ಸರಳವಾಗಿ ಆಚರಿಸಲು ತೀರ್ಮಾನಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಚಿವ ಎಸ್‌.ಸುರೇಶ್‌ಕುಮಾರ್‌ ಅಧ್ಯಕ್ಷತೆಯಲ್ಲಿ ನಡೆದ ದಸರಾ ಆಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಸಭೆಯಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆಯು ಹೆಚ್ಚುತ್ತಿದೆ. ಹೀಗಾಗಿ ಸಾಮಾಜಿಕ ಅಂತರ, ಇನ್ನಿತರ ಕಾರಣಗಳಿಂದ ಈ ಹಿಂದಿನಂತೆ ಪೂಜೆ ಮತ್ತಿತರ ಸಾಂಪ್ರದಾಯಕ ಆಚರಣೆ ಮಾತ್ರ ಇರುವುದು ಒಳಿತು. ಆದರೆ ದೀಪಾಲಂಕಾರ ಮಾತ್ರ ಎಂದಿನಂತೆ ಇರಲಿ, ಬೇರೆ ಸಾಂಸ್ಕೃತಿಕ ಕಾರ್ಯಕ್ರಮಗಳು ಬೇಡ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪಿ.ಬಿ.ಶಾಂತಮೂರ್ತಿ ಕುಲಗಾಣ,ಈ ಬಾರಿ ಕೊರೊನಾಕಾರಣದಿಂದ ಜನಸಂದಣಿಗೆ ಅವಕಾಶ ಮಾಡಿಕೊಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದರು. ಜಿಪಂ ಸದಸ್ಯ ಕೆರೆಹಳ್ಳಿ ನವೀನ್‌ ಮಾತನಾಡಿ, 50 ರಿಂದ 100 ಜನರನ್ನು ಒಳಗೊಂಡಂತೆ ಸಾಂಪ್ರದಾಯಿಕವಾಗಿ ದಸರಾ ಆಚರಣೆಯಾಗಲಿ ಎಂದರು.

ಎಲ್ಲರ ಅಭಿಪ್ರಾಯ, ಸಲಹೆ ಆಲಿಸಿದ ಉಸ್ತುವಾರಿ ಸಚಿವ ಎಸ್‌. ಸುರೇಶ್‌ಕುಮಾರ್‌, ಈ ಬಾರಿ ಸಾಂಪ್ರದಾಯಕವಾಗಿ ದಸರಾ ಆಚರಿಸೋಣ, ಕೊರೊನಾ ಮುಕ್ತ ವಾದ ನಂತರವೈಭವದಿಂದಮುಂದಿನ ಬಾರಿ ದಸರಾ ನಡೆಸುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ ಎಂದರು.

ಮನೆ ಮನೆ ದಸರಾ ಮೂಲಕ ಬಹುಮಾನ, ಪ್ರಮಾಣ ಪತ್ರ ವಿತರಣೆ ಮಾಡಬಹುದೆ ಎಂಬ ಬಗ್ಗೆಯೂ ಚಿಂತಿಸಬಹುದು. ಆದರೆ, ನಗರದಲ್ಲಿ ದೀಪಾಲಂಕಾರ ಈ ಹಿಂದಿನಂತೆ ಇರಲಿ. ಎಲ್ಲರ ಅಭಿಪ್ರಾಯದಂತೆ ದಸರಾ ಸರಳ ಆಚರಣೆ ಇರಲಿ ಎಂದರು.

ಜಿಲ್ಲಾಧಿಕಾರಿ ಡಾ. ಎಂ.ಆರ್‌.ರವಿ ಆನ್‌ಲೈನ್‌ ಮೂಲಕ ಮಾತನಾಡಿ, ನಗರದ ಪ್ರಮುಖ ರಸ್ತೆ, ಉದ್ಯಾನವನಗಳಿಗೆ ದೀಪಾಲಂಕಾರಕ್ಕಾಗಿಮುಂದೆ ಬರುವ ಪ್ರಾಯೋಜಕರೊಂದಿಗೆ ಸಮಾಲೋಚಿಸಲಾಗುವುದು, ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ನವರಾತ್ರಿ ಸಂದರ್ಭದಲ್ಲಿ ಪೂಜೆ-ಪುನಸ್ಕಾರಕ್ಕಾಗಿ ತಿಳಿಸಲಾಗುವುದು ಎಂದರು.

ತಾಪಂ ಉಪಾಧ್ಯಕ್ಷ ಕೆ.ರವೀಶ್‌, ಜಿಪಂ ಸಿಇಒ ಹರ್ಷಲ್‌ ಬೋಯಲ್‌ ನಾರಾಯಣ್‌ ರಾವ್‌, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌, ಹೆಚ್ಚುವರಿ ಎಸ್ಪಿ ಅನಿತಾ ಹದ್ದಣ್ಣನವರ್‌, ಎಸಿ ಡಾ. ಗಿರೀಶ್‌ ದಿಲೀಪ್‌ ಬೋಡ್ಲೆ ಇತರರಿದ್ದರು.

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.