ವಾಣಿಜ್ಯ ಸಂಕೀರ್ಣ ಕಟ್ಟಡ, ಬಸ್‌ ನಿಲ್ದಾಣ ಲೋಕಾರ್ಪಣೆ

Team Udayavani, Sep 8, 2020, 3:20 PM IST

Cn-tdy-2

ಚಾಮರಾಜನಗರ: ನಗರದಲ್ಲಿ ನಗರಸಭೆ ವತಿಯಿಂದ ಮುಖ್ಯಮಂತ್ರಿಗಳ ನಗರೋತ್ಥಾನ ವಿಶೇಷ ಅನುದಾನದಲ್ಲಿ 2.90 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ವಾಣಿಜ್ಯ ಸಂಕೀರ್ಣ ಕಟ್ಟಡ ಹಾಗೂ 2.50 ಕೋಟಿ ರೂ.ವೆಚ್ಚದಲ್ಲಿ ನವೀಕೃತ ಗೊಂಡಿರುವ ಖಾಸಗಿ ಬಸ್‌ ನಿಲ್ದಾಣ ಸೋಮವಾರ ಲೋಕಾರ್ಪಣೆಗೊಂಡಿತು.

ಪ್ರಾಥಮಿಕ, ಪ್ರೌಢಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಸುರೇಶ್‌ಕುಮಾರ್‌ ಹಾಗೂ ಪೌರಾಡಳಿತ ಸಚಿವ ಡಾ. ನಾರಾಯಣಗೌಡ ಈ ಎರಡು ಕಾರ್ಯಕ್ರಮಗಳನ್ನು ಉದ್ಘಾಟಿಸಿದರು. ಜಿಲ್ಲಾಡಳಿತ, ನಗಾರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ನಗರಸಭೆ ವತಿಯಿಂದ ನಗರದ ಖಾಸಗಿ ಬಸ್‌ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಸುರೇಶ್‌ಕುಮಾರ್‌, ಸಾರ್ವಜನಿಕರ ಅನುಕೂಲಕ್ಕಾಗಿ ನಗರಸಭೆ ವತಿಯಿಂದ ವಾಣಿಜ್ಯ ಸಂಕೀರ್ಣ ಕಟ್ಟಡ ನಿರ್ಮಿಸಲಾಗಿದ್ದು ಕಟ್ಟಡದಲ್ಲಿ ವಾಹನ ನಿಲುಗಡೆ ಸ್ಥಳ, ಉಗ್ರಾಣ ಕೊಠಡಿ, ಶಾಪಿಂಗ್‌ ಮಳಿಗೆ ಹಾಗೂ ಶೌಚಾಲಯದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಖಾಸಗಿ ಬಸ್‌ ನಿಲ್ದಾಣದಲ್ಲಿ ಏಕಕಾಲದಲ್ಲಿ 22 ಬಸ್‌ ಗಳು ನಿಲ್ಲುವ ವ್ಯವಸ್ಥೆ ಮಾಡಲಾಗಿದೆ. ನಾಗರಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಕುಡಿಯುವ ನೀರು, ನಗರಾಭಿವೃದ್ಧಿ ಹಾಗೂ ಇತರೆ ಯೋಜನೆಗಳ ಬಗ್ಗೆ ಹೆಚ್ಚು ಗಮನ ವಹಿಸಲಾಗಿದೆ. ಇನ್ನುಳಿದ ಹಲವು ಹಂತದ ಕಾಮಗಾರಿ ಗಳನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುತ್ತದೆ.  ಮುಂದಿನ ದಿನಗಳಲ್ಲಿ ಕುಡಿಯುವ ನೀರು, ಯುಡಿಜಿ ಹಾಗೂ ಇತರೆ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿ ಸುವ ಕಾರ್ಯ ನಿರ್ವಹಿಸಲಾಗುತ್ತದೆ ಎಂದರು.

ಪೌರಾಡಳಿತ ಸಚಿವ ಡಾ. ನಾರಾಯಣಗೌಡ ಮಾತನಾಡಿ, ರಾಜ್ಯದಲ್ಲಿ ಲಾಕ್‌ಡೌನ್‌ ಸಂದರ್ಭದಲ್ಲಿ ರೇಷ್ಮೆ ಹಾಗೂ ತೋಟಗಾರಿಗೆ ಇಲಾಖೆಯಿಂದ ರೈತರ ಸಮಸ್ಯೆಗಳನ್ನು ಅರಿತು ರೈತರಿಗೆ ಬೆಂಬಲ ಬೆಲೆ ಹಾಗೂ ಪ್ರೋತ್ಸಾಹ ಧನ ನೀಡಲಾಗಿದೆ ಎಂದರು.

ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಮುಖ್ಯ ಮಂತ್ರಿ ಅವರನ್ನು ಜಿಲ್ಲೆಗೆ ಕರೆತಂದು ಅಭಿವೃದ್ಧಿಗೆಹೆಚ್ಚಿನ ಪ್ರಾಮುಖ್ಯತೆ ನೀಡಬೇಕು.ಕುಡಿಯುವ ನೀರಿನ ಕೆಲಸವನ್ನು ಪೌರಾಡಳಿತ ಸಚಿವರು ಅದಷ್ಟು ಬೇಗ ಕಲ್ಪಿಸಬೇಕು ಎಂದರು.

ಜಿಪಂ ಅಧ್ಯಕ್ಷೆ ಎಂ.ಅಶ್ವಿ‌ನಿ, ಶಾಸಕ ಸಿ.ಎಸ್‌. ನಿರಂಜನ್‌ಕುಮಾರ್‌, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕೆ.ಬಿ. ಶಾಂತಮೂರ್ತಿ, ಜಿ.ಪಂ. ಉಪಾಧ್ಯಕ್ಷೆ ಶಶಿಕಲಾ, ತಾ.ಪಂ. ಅಧ್ಯಕ್ಷೆ ಎಚ್‌.ಎಸ್‌. ಶೋಭಾ, ಉಪಾಧ್ಯಕ್ಷ ಕೆ. ರವೀಶ್‌, ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ, ಎಸ್ಪಿ ದಿವ್ಯಾ ಸಾರಾ ಥಾಮಸ್‌, ಜಿಪಂ ಸಿಇಒ ಭೋಯರ್‌ ಹರ್ಷಲ್‌ ರಾವ್‌ ಇತರರಿದ್ದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ddd

Gundlupet; ಕಾರು-ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

Karadi-savu

Gundlupet: ಸಿಡಿಮದ್ದು ಸಿಡಿದು ಕರಡಿ ಮೃತ್ಯು

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

Road Mishap ಖಾಸಗಿ ಬಸ್- ಆಟೋ ಮುಖಾಮುಖಿ ಡಿಕ್ಕಿ: ಓರ್ವ ಸಾವು; 10 ಮಂದಿಗೆ ಗಾಯ

rape

Yelandur; ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಯುವಕನ ಬಂಧನ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

Gundlupete ಕ್ವಾರಿಯೊಂದರಲ್ಲಿ ಕಾರ್ಮಿಕನ ಮೃತದೇಹ ಪತ್ತೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.