ಕಳಪೆ ರಸ್ತೆ, ಚರಂಡಿ ಕಾಮಗಾರಿಗೆ ಖಂಡನೆ

Team Udayavani, Jan 21, 2020, 3:00 AM IST

kalape

ಚಾಮರಾಜನಗರ: ಪಣ್ಯದಹುಂಡಿಯಿಂದ ಹೆಗ್ಗೊಠಾರ ಗ್ರಾಮಕ್ಕೆ ಹೋಗುವ ಮಾರ್ಗ ನಡೆಯುತ್ತಿರುವ ಸಿಮೆಂಟ್‌ ಕಾಂಕ್ರೀಟ್‌ ರಸ್ತೆ ಮತ್ತು ಚರಂಡಿ ಕಾಮಗಾರಿ ಕಳಪೆಯಾಗಿದೆ. ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಜನ ಹಿತ ಶಕ್ತಿ ಹೋರಾಟ ವೇದಿಕೆ ವತಿಯಿಂದ ತಾಲೂಕಿನ ಪಣ್ಯಡಿ ಗ್ರಾಮದ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಕ್ರಿಯಾ ಯೋಜನೆಯಂತೆ ಕಾಮಗಾರಿ ನಡೆದಿಲ್ಲ: ಜನ ಹಿತ ಶಕ್ತಿ ಹೋರಾಟ ವೇದಿಕೆಯ ಜಿಲ್ಲಾಧ್ಯಕ್ಷ ರಾಮಸಮುದ್ರ ಸುರೇಶ್‌ ಮಾತನಾಡಿ, ಲೋಕೋಪಯೋಗಿ ಇಲಾಖೆಯಿಂದ ಸುಮಾರು 3.50 ಕೋಟಿ ರೂ. ವೆಚ್ಚದಲ್ಲಿ 3.3 ಕಿಲೋ ಮೀಟರ್‌ಗಳಷ್ಟು ಪಣ್ಯದಹುಂಡಿ ಹಾಗೂ ಹೆಗ್ಗೊಠಾರ ಮಾರ್ಗವಾಗಿ ಸಿಮೆಂಟ್‌ ಕಾಂಕ್ರೀಟ್‌ ರಸ್ತೆ ಮತ್ತು ಚರಂಡಿ ಕಾಮಗಾರಿಯು ನಡೆಯುತ್ತಿದೆ. ಈ ಕಾಮಗಾರಿಯು ಕ್ರಿಯಾ ಯೋಜನೆಯಂತೆ ನಡೆಯದೆ ಸಂಪೂರ್ಣವಾಗಿ ಕಳಪೆ ಗುಣಮಟ್ಟದಿಂದ ಕೂಡಿದೆ.

ಇದುವರೆಗೂ ಕಾಮಗಾರಿ ನಡೆಯುವ ಸ್ಥಳಕ್ಕೆ ಗುತ್ತಿಗೆದಾರರಾಗಲೀ, ಇಲಾಖೆಯ ಅಧಿಕಾರಿಗಳಾಗಲೀ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ ಎಂದು ಆರೋಪಿಸಿದರು. ನಿರ್ಲಕ್ಷ್ಯ ವಹಿಸಿ ಕಾಮಗಾರಿಯನ್ನು ಹಾಳು ಮಾಡಿದ್ದಾರೆ. ಇದು ಇಲಾಖೆಯ ವೈಫ‌ಲ್ಯವನ್ನು ಎತ್ತಿತೋರಿಸುತ್ತದೆ. ಈ ಕ್ಷೇತ್ರದ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು, ಇಂತಹ ಕಳಪೆ ಕಾಮಗಾರಿಯ ಕಡೆ, ಗಮನ ಹರಿಸದೇ ಇರುವುದು ಶೋಚನೀಯವಾಗಿದೆ ಎಂದರು.

ಗುತ್ತಿಗೆದಾರನನ್ನು ಬದಲಾವಣೆ ಮಾಡಿ: ಕೂಡಲೇ ಕಳಪೆ ಕಾಮಗಾರಿಗೆ ಕಾರಣವಾಗಿರುವ ಗುತ್ತಿಗೆದಾರನನ್ನು ಬದಲಾವಣೆ ಮಾಡಬೇಕು. ಈತನ ಪರವಾನಗಿಯನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಈಗ ನಡೆದಿರುವ ಗುಣಮಟ್ಟವಿಲ್ಲದ ಕಾಮಗಾರಿಯನ್ನು ಸಂಪೂರ್ಣವಾಗಿ ತೆರವುಗೊಳಿಸಿ, ಉತ್ತಮ ಗುಣಮಟ್ಟ ವಿರುವ ಕಾಮಗಾರಿ ನಡೆಸಬೇಕು. ಕಳಪೆ ಕಾಮಗಾರಿ ನಡೆಯಲು ಗುತ್ತಿಗೆದಾರನಿಗೆ ಅವಕಾಶ ನೀಡಿದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಇಲಾಖೆಯ ಅಧಿಕಾರಿಗಳು ಆಗಮಿಸಿ ವೇದಿಕೆಯ ಮನವಿಗೆ ಸ್ಪಂದಿಸಿ, ಕಳಪೆ ಕಾಮಗಾರಿಯನ್ನು ಜೆಸಿಬಿ ಮುಖಾಂತರ ಧ್ವಂಸಗೊಳಿಸಿದರು. ನಂತರ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಯಿತು. ಪ್ರತಿಭಟನೆಯಲ್ಲಿ ನಿಜಧ್ವನಿ ಗೋವಿಂದರಾಜು. ಬದನಗುಪ್ಪೆ ಮಹೇಶ್‌, ಪಣ್ಯದಹುಂಡಿ ಸತೀಶ್‌, ರಾಜು, ಯಜಮಾನ್‌ ಶಿವಣ್ಣ, ಶಿವಸ್ವಾಮಿ, ಮುತ್ತಿಗೆ ದೊರೆಸ್ವಾಮಿ, ಮಧು, ದೇವರಾಜು, ಸಂತೋಷ್‌, ಬಣ್ಣಾರಿ ಮಹೇಶ್‌, ಶಿವರಾಜು, ಚಂದ್ರಕುಮಾರ್‌, ಮುತ್ತಿಗೆ ಮೂರ್ತಿ ಇನ್ನಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.