ಅರ್ಥಶಾಸ್ತ್ರದಲ್ಲಿ 4 ಚಿನ್ನದ ಪದಕ ಪಡೆದ ಮಹಿಳಾ ಪೇದೆ

ಮೈಸೂರು ವಿವಿ ಪದವಿ ಅರ್ಥಶಾಸ್ತ್ರ ವಿಷಯದಲ್ಲಿ ಪದಕ: ಶ್ಲಾಘನೆ

Team Udayavani, Oct 23, 2020, 4:30 PM IST

ಅರ್ಥಶಾಸ್ತ್ರದಲ್ಲಿ 4 ಚಿನ್ನದ ಪದಕ ಪಡೆದ ಮಹಿಳಾ ಪೇದೆ

ಚಾಮರಾಜನಗರ: ನಗರದ ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಮಹಿಳಾ ಪೇದೆ ಆಗಿರುವ ಕಾವೇರಿ ಅವರು ಮೈಸೂರು ವಿವಿ ಪದವಿ ಅರ್ಥಶಾಸ್ತ್ರ ವಿಷಯದಲ್ಲಿ 4 ಚಿನ್ನದ ಪದಕ ಹಾಗೂ 7 ನಗದು ಬಹುಮಾನ ಪಡೆದು ಇಲಾಖೆಗೆ ಹೆಮ್ಮೆ ತಂದಿದ್ದಾರೆ.

ಕಾವೇರಿ ಅವರು 2 ತಿಂಗಳ ಹಿಂದಷ್ಟೇ ಜಿಲ್ಲೆಯ ಪೊಲೀಸ್‌ ಪೇದೆ ಹುದ್ದೆಗೆ ಆಯ್ಕೆಯಾಗಿದ್ದು, ಸಿವಿಲ್‌ ಪೊಲೀಸ್‌ ಪೇದೆ ತರಬೇತಿ ಪಡೆಯುತ್ತಿದ್ದಾರೆ. ಎಸ್‌ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಾವೇರಿ ಅವರು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೂಡ್ಲಾಪುರ ಗ್ರಾಮದವರು. ಬೆಳ್ಳಶೆಟ್ಟಿ, ಮಲ್ಲಿಗಮ್ಮ ದಂಪತಿ ಪುತ್ರಿ. ಕಾವೇರಿ ನಂಜನಗೂಡಿನ ಸರ್ಕಾರಿ ಪ್ರಥಮ ದರ್ಜೆಕಾಲೇಜಿನ ವಿದ್ಯಾರ್ಥಿನಿಯಾಗಿದ್ದರು.2019ರ ಮೇ ನಲ್ಲಿ ನಡೆದ ಅಂತಿಮ ಬಿಎ ಅರ್ಥಶಾಸ್ತ್ರ ವಿಷಯದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಅಲ್ಲದೇ ಅರ್ಥಶಾಸ್ತ್ರ ವಿಷಯದಲ್ಲಿ 1000 ಅಂಕಗಳಿಗೆ 910 ಅಂಕ ಗಳಿಸಿ ಇಡೀ ವಿವಿಗೆ ಮೊದಲಿಗರಾಗಿದ್ದಾರೆ. ಕಳೆದ ಸೋಮವಾರ ನಡೆದ ಮೈಸೂರು ವಿವಿ ಘಟಿಕೋತ್ಸವದಲ್ಲಿ ಅವರಿಗೆ 4 ಚಿನ್ನದ ಪದಕ, 7 ನಗದು ಬಹುಮಾನ ನೀಡಲಾಯಿತು.

ಪ್ರಸ್ತುತ ಕಾವೇರಿ ಅವರು ಚಾ.ನಗರ ಜಿಲ್ಲಾ ಪೊಲೀಸ್‌ ಇಲಾಖೆಯಲ್ಲಿ ಪೇದೆ ಯಾಗಿ ನೇಮಕವಾಗಿದ್ದಾರೆ. ಚಿನ್ನದ ಪದಕ ಪಡೆದು ಕಾವೇರಿ ಅವರನ್ನು ಎಸ್ಪಿ ದಿವ್ಯಾ ಸಾರಾ ಥಾಮಸ್‌ ತಮ್ಮ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಿದರು. ಕಾವೇರಿ ಅವರ ಸಾಧನೆಯನ್ನು ಮುಕ್ತ ಕಂಠದಿಂದಪ್ರಶಂಸಿಸಿದರು.

“ಉದಯವಾಣಿ’ ಯೊಂದಿಗೆ ಮಾತನಾಡಿದ ಕಾವೇರಿ ಅವರು, ನನ್ನ ಆರ್ಥಿಕ ಪರಿಸ್ಥಿತಿಯಲ್ಲಿ ಉದ್ಯೋಗ ಮುಖ್ಯವಾಗಿರುವುದರಿಂದ ಪೊಲೀಸ್‌ ಹುದ್ದೆಯಲ್ಲೇ ಮುಂದುವರಿಯುತ್ತೇನೆ. ಹುದ್ದೆಯಲ್ಲಿದ್ದು ಕೊಂಡೇ ಇಲಾಖಾ ಪರೀಕ್ಷೆ ಎದುರಿಸಿ ಪಿಎಸ್‌ಐ ಆಗುವ ಗುರಿ ಹೊಂದಿದ್ದೇನೆ ಎಂದರು.

ನಾನು ಕಷ್ಟಪಟ್ಟಿದ್ದಕ್ಕೂ ಉತ್ತಮ ಪ್ರತಿಫ‌ಲ ಬಂದಿದೆ. ಪ್ರತಿ ಸೆಮಿಸ್ಟರ್‌ನಲ್ಲಿ ಅತ್ಯಧಿಕ ಅಂಕ ಪಡೆಯುತ್ತಿದ್ದೆ. ನನ್ನ ಆಸಕ್ತಿಯ ವಿಷಯ ಅರ್ಥ ಶಾಸ್ತ್ರ. ಇದರಲ್ಲಿ ವಿವಿಗೇ ಪ್ರಥಮ ಸ್ಥಾನ ಬಂದಿದ್ದು ಸಂತೋಷ ತಂದಿದೆ. ಇದಕ್ಕಾಗಿ ನಮ್ಮ ಇಲಾಖೆ ಉನ್ನತ ಅಧಿಕಾರಿಗಳು ಸನ್ಮಾನಿಸಿರುವುದು ಹೆಮ್ಮೆ ಮೂಡಿಸಿದೆ. – ಕಾವೇರಿ, ಪೊಲೀಸ್‌ ಪೇದೆ

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.