ಗಡಿ ಜಿಲ್ಲೆಯಲ್ಲಿ 2ನೇ ಅಲೆ ತಡೆಗೆ ಎಚ್ಚೆತ ಜಿಲ್ಲಾಡಳಿತ

ಕೋವಿಡ್‌ ಪರೀಕ್ಷೆ ಸಂಖ್ಯೆ ಹೆಚ್ಚಿಸಲು ಆರೋಗ್ಯ ಇಲಾಖೆ ಕ್ರಮ

Team Udayavani, Mar 22, 2021, 12:42 PM IST

01

ಚಾಮರಾಜನಗರ ನಗರಸಭೆ ಪರಿಸರ ಎಂಜಿನಿಯರ್‌ ಗಿರಿಜಾ ಅವರು ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್‌ ನಿರೋಧಕ ಲಸಿಕೆ ಪಡೆದುಕೊಂಡರು.

ಚಾಮರಾಜನಗರ: ರಾಜ್ಯಾದ್ಯಂತ ಕೋವಿಡ್‌ ಎರಡನೇ ಅಲೆ ಆರಂಭವಾಗುತ್ತಿದ್ದಂತೆಯೇ, ಹಾಗೆಯೇ ಜಿಲ್ಲೆಯಲ್ಲೂ ನಿಧಾನಗತಿಯಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಒಂದಂಕಿಯಷ್ಟಿದ್ದ ಸಕ್ರಿಯ ಪ್ರಕರಣಗಳು ಈಗ 25ರ ಗಡಿ ದಾಟಿವೆ. ಹೀಗಾಗಿ ಜಿಲ್ಲಾಡಳಿತ ವ್ಯಾಪಕ ಮುಂಜಾಗ್ರತಾ ಕ್ರಮ ವಹಿಸುತ್ತಿದೆ. ಆರೋಗ್ಯ ಇಲಾಖೆ ಲಸಿಕೆ ನೀಡಿಕೆಗೆ ಹೆಚ್ಚು ಒತ್ತು ನೀಡುತ್ತಿದೆ.

ಜಿಲ್ಲೆಯಲ್ಲಿ ಲಸಿಕೆ ಪಡೆಯುವಲ್ಲಿ ಹಿರಿಯ ನಾಗರಿಕರೇ ಮುಂದಿದ್ದಾರೆ. 19,194 ಮಂದಿ 60 ವರ್ಷದ ಮೇಲಿನ ಹಿರಿಯ ನಾಗರಿಕರು ಮೊದಲ ಡೋಸ್‌ ಪಡೆದಿದ್ದಾರೆ. ಆರೋಗ್ಯ ಸಮಸ್ಯೆ ಇರುವ 45ರಿಂದ 60 ವರ್ಷದೊಳಗಿನ 3,698 ಮಂದಿ ಮೊದಲ ಡೋಸ್‌ ಲಸಿಕೆ ಪಡೆದಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು ಕೋವಿಡ್‌ ಪ್ರಕರಣ‌ಗಳ ಸಂಖ್ಯೆ 7 ಸಾವಿರದ ಗಡಿ ದಾಟಿದೆ. ಸೋಂಕು ಹರಡುವುವಿಕೆಕ್ರಮೇಣ ಹೆಚ್ಚುತ್ತಿದ್ದಂತೆ, ಜಿಲ್ಲಾಡಳಿತ,ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿವೆ.

ಜಿಲ್ಲಾಧಿಕಾರಿ ಡಾ. ರವಿ ಅವರು ಜಿಲ್ಲೆಯ ಕೆಲವು ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲೆಯಲ್ಲಿ ಆರಂಭಿಸಲಾಗಿರುವ ಲಸಿಕಾ ಅಭಿಯಾನದಲ್ಲಿ ನಿಗದಿತ ಗುರಿ ಸಾಧಿಸಬೇಕೆಂದು ಜಿಲ್ಲಾಧಿಕಾರಿ ಆರೋಗ್ಯ ಇಲಾಖೆಗೆ ಸೂಚನೆನೀಡಿದ್ದಾರೆ. 60 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ 45 ರಿಂದ 59ರ ವಯೋಮಿತಿಯೊಳಗಿನನಾಗರಿಕರಿಗೆ ಉಚಿತವಾಗಿ ಕೋವಿಡ್‌ ಲಸಿಕೆನೀಡಲಾಗುತ್ತಿದೆ. ಈ ಉದ್ದೇಶಕ್ಕಾಗಿಯೇ ಜಿಲ್ಲೆಯಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ವ್ಯವಸ್ಥೆಕಲ್ಪಿಸಲಾಗಿದೆ. 2 ಖಾಸಗಿ ಆಸ್ಪತ್ರೆಗಳಲ್ಲೂ 250 ರೂ.ದರ ನಿಗದಿ ಮಾಡಿ ಲಸಿಕೆ ಪಡೆಯಲು ಅವಕಾಶ ಮಾಡಿಕೊಡಲಾಗಿದೆ.

ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು, ಜಿಲ್ಲಾ ಆಸ್ಪತ್ರೆಯಲ್ಲಿ ಇಂತಿಷ್ಟು ನಾಗರಿಕರಿಗೆ ಲಸಿಕೆನೀಡಲೇ ಬೇಕೆಂಬ ಗುರಿಯನ್ನು ನಿಗದಿ ಮಾಡಲಾಗಿದೆ. ಇದರ ಅನುಸಾರ ಯೋಜನಾ ಬದ್ಧವಾಗಿ ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಇಲಾಖೆಗಳ ನೆರವುಪಡೆದು ಹಿರಿಯ ನಾಗರಿಕರಿಗೆ ಹಾಗೂ ವಿವಿಧ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಲಸಿಕೆನೀಡುವ ಕಾರ್ಯವನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ.

ಜಿಲ್ಲೆಯ ಕೆಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನಿಗದಿಪಡಿಸಿರುವ ಗುರಿ ಅನುಸಾರ ಲಸಿಕೆ ನೀಡುವಕಾರ್ಯ ಪ್ರಗತಿಯಾಗಿರಲಿಲ್ಲ. ಇಂತಹ ನಿರ್ಲಕ್ಷ್ಯ ವಹಿಸುವುದನ್ನು ಸಹಿಸಲಾಗುವುದಿಲ್ಲ. ಲಸಿಕೆ ಅಭಿಯಾನವನ್ನು ಗಂಭೀರವಾಗಿ ಪರಿಗಣಿಸದೆ ಉದಾಸೀನ ತೋರಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುತ್ತದೆಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ಯಾವ ಪ್ರಾಥಮಿಕ ಆರೋಗ್ಯ ಕೇಂದ್ರ, ಆಸ್ಪತ್ರೆಗಳಲ್ಲಿಲಸಿಕೆ ನೀಡುವ ಗುರಿ ತಲುಪುತ್ತಿಲ್ಲವೋ ಅಂತಹ ಕಡೆ ತಾಲೂಕು ವೈದ್ಯಾಧಿಕಾರಿಗಳು ಭೇಟಿ ನೀಡಿ ಪ್ರಗತಿಪರಿಶೀಲಿಸಬೇಕು. ಪ್ರತಿ ದಿನ ಲಸಿಕೆ ನೀಡುವ ಕಾರ್ಯಹೆಚ್ಚಿನ ಪ್ರಮಾಣದಲ್ಲಿ ನಡೆಯುವಂತೆ ನೋಡಿಕೊಳ್ಳ ಬೇಕು ಎಂದು ಸೂಚಿಸಲಾಗಿದೆ.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಯಾ ಮುಖ್ಯಅಧಿಕಾರಿಗಳು, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳು ಲಸಿಕಾ ಅಭಿಯಾನವನ್ನುವಿಶೇಷವಾಗಿ ಪರಿಗಣಿಸಿ ಹೆಚ್ಚಿನ ಪ್ರಗತಿಯಾಗುವಂತೆನಿಗಾವಹಿಸಬೇಕು. ಜಾಗೃತಿ ಮೂಡಿಸುವಕಾರ್ಯಕ್ರಮಗಳು ಮುಂದುವರಿಯಬೇಕು.ವಾರ್ಡ್‌ ಸಭೆ ಇನ್ನಿತರ ವಿಧಾನಗಳ ಮೂಲಕ ಲಸಿಕೆಪಡೆಯಲು ಉತ್ತೇಜಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಪರೀಕ್ಷೆ ಹೆಚ್ಚಳ ಮಾಡಿದ ಆರೋಗ್ಯ ಇಲಾಖೆ :

ಜಿಲ್ಲೆಯಲ್ಲಿ ಗಂಟಲು ದ್ರವ ಮಾದರಿ ಪರೀಕ್ಷೆ ಕಡಿಮೆ ಪ್ರಮಾಣದಲ್ಲಿನಡೆಯುತ್ತಿತ್ತು. ಹೆಚ್ಚಿನ ಸಂಖ್ಯೆಯ ಪರೀಕ್ಷೆ ನಡೆಯದ ಬಗ್ಗೆ ಉದಯವಾಣಿ ಪತ್ರಿಕೆಯಮಾ. 16ರ ಸಂಚಿಕೆಯಲ್ಲಿ ವರದಿ ಪ್ರಕಟವಾಗಿತ್ತು. ಇದರಿಂದ ಎಚ್ಚೆತ್ತ ಆರೋಗ್ಯ ಇಲಾಖೆ ಈಗ ದಿನನಿತ್ಯದ ಪರೀಕ್ಷಾಸಂಖ್ಯೆಯನ್ನು 700ಕ್ಕಿಂತ ಹೆಚ್ಚು ನಡೆಸುತ್ತಿದೆ. ಇದಕ್ಕೂ ಮುಂಚೆ 225 ರಿಂದ 300 ಮಾದರಿಗಳನ್ನು ಪರೀಕ್ಷಿಸಲಾಗುತ್ತಿತ್ತು. ಮಾ. 17ರಂದು 775 ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 4 ಪಾಸಿಟಿವ್‌ ಆಗಿವೆ.ಮಾ.18ರಂದು 733 ಪರೀಕ್ಷೆ ನಡೆಸಲಾಗಿದ್ದು, 5 ಪಾಸಿಟಿವ್‌ ಆಗಿವೆ. ಮಾ. 19ರಂದು 750 ಪರೀಕ್ಷೆ ನಡೆಸಲಾಗಿದ್ದು, 8ಪ್ರಕರಣ ಪಾಸಿಟಿವ್‌ ಆಗಿವೆ. 20ರಂದು673 ಪರೀಕ್ಷೆ ನಡೆಸಲಾಗಿದ್ದು, 3 ಪಾಸಿಟಿವ್‌ ಆಗಿವೆ. ಜಿಲ್ಲೆಯಲ್ಲಿ ಇದುವರೆಗೆ 7035ಮಂದಿಗೆ ಕೋವಿಡ್‌ ಸೋಂಕು ತಗುಲಿದೆ. ಇವರಲ್ಲಿ 6878 ಮಂದಿ ಗುಣಮುಖರಾಗಿದ್ದಾರೆ. 26 ಸಕ್ರಿಯ ಪ್ರಕರಣಗಳಿವೆ. ಇವರಲ್ಲಿ 4 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 132 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಲಸಿಕೆ ಪ್ರಗತಿ ವಿವರ :

5417 ಮಂದಿ ಆರೋಗ್ಯ ಸೇವಾ ಸಿಬ್ಬಂದಿ  ಮೊದಲ ಡೋಸ್‌ ಲಸಿಕೆ ಪಡೆದಿದ್ದಾರೆ

2965 ಮಂದಿ ಆರೋಗ್ಯ ಸೇವಾ ಸಿಬ್ಬಂದಿ ಎರಡನೇ ಡೋಸ್‌ ಲಸಿಕೆ ಪಡೆದಿದ್ದಾರೆ

2618 ಮಂದಿ ಮುಂಚೂಣಿ ಕಾರ್ಯಕರ್ತರು ಮೊದಲ ಡೋಸ್‌ ಪಡೆದಿದ್ದಾರೆ

390 ಮಂದಿ ಮುಂಚೂಣಿ ಕಾರ್ಯಕರ್ತರು ಎರಡನೇ ಡೋಸ್‌ ಪಡೆದಿದ್ದಾರೆ

3,698 ಮಂದಿ ಆರೋಗ್ಯ ಸಮಸ್ಯೆ ಇರುವ 45 ರಿಂದ 60 ವರ್ಷದೊಳಗಿನ ವ್ಯಕ್ತಿಗಳು ಮೊದಲ ಡೋಸ್‌ ಪಡೆದಿದ್ದಾರೆ

19,194 ಮಂದಿ 60 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಮೊದಲ ಡೋಸ್‌ ಪಡೆದಿದ್ದಾರೆ.

ಕೋವಿಡ್‌ ಎರಡನೇ ಅಲೆ ತಡೆಯಲು ಜನರು ಸಮುದಾಯವಾಗಿ ಜವಾಬ್ದಾರಿ ವಹಿಸಬೇಕು. ಮಾಸ್ಕ್ಧರಿಸುವಿಕೆ, ಅಂತರ ಕಾಪಾಡುವಿಕೆ, ಗುಂಪುಸೇರದಿರುವಿಕೆ, ಸ್ಯಾನಿಟೈಸರ್‌ ಬಳಸಬೇಕು. ಲಸಿಕೆ ಹಾಕಿಸಿಕೊಳ್ಳಲು ಜನರು ಇತ್ತೀಚೆಗೆಸ್ವಯಂಪ್ರೇರಣೆಯಿಂದ ಬರುತ್ತಿದ್ದಾರೆ. ಲಸಿಕೆ ಪಡೆಯುವುದರಿಂದ ಕೋವಿಡ್‌ ತಡೆಗಟ್ಟಬಹುದು. ಬೇರೆಯವರಿಗೆ ಬರದಂತೆಯೂ ತಡೆಯಬಹುದು. ನೇರವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ,ಸಮುದಾಯ ಆರೋಗ್ಯ ಕೇಂದ್ರ,ತಾಲೂಕು ಮತ್ತು ಜಿಲ್ಲಾಸ್ಪತ್ರೆಗೆ ಬಂದರೆ ಲಸಿಕೆ ನೀಡಲಾಗುವುದು. -ಡಾ. ಎಂ.ಸಿ.ರವಿ, ಜಿಲ್ಲಾ ಆರೋಗ್ಯಾಧಿಕಾರಿ

 

-ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.