3ನೇ ಅಲೆ ವೇಳೆ ಕೋವಿಡ್‌ ಟಾಸ್ಕ್ ಪೋರ್ಸ್ ಗಳು ನಿಷ್ಕ್ರಿಯ

Team Udayavani, Jan 26, 2022, 1:33 PM IST

3ನೇ ಅಲೆ ವೇಳೆ ಕೋವಿಡ್‌ ಟಾಸ್ಕ್ ಪೋರ್ಸ್ ಗಳು ನಿಷ್ಕ್ರಿಯ

ಗುಂಡ್ಲುಪೇಟೆ: ಕೋವಿಡ್‌ 3ನೇ ಅಲೆ ವೇಳೆ ಟಾಸ್ಕ್ ಪೋರ್ಸ್ ಗಳು ನಿಷ್ಕ್ರಿಯಯವಾಗಿದೆ ಎಂಬ ದೂರುಗಳಿವೆ. ಈ ಬಗ್ಗೆ ಅಧಿಕಾರಿಗಳು ಕೂಡಲೇ ಕ್ರಮವಹಿಸಬೇಕೆಂದು ಶಾಸಕ ನಿರಂಜನ್‌ ಕುಮಾರ್‌ ತಾಕೀತು ಮಾಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಮ್ಮ ನೇತೃತ್ವದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿದ ಶಾಸಕರು, ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಪಿಡಿಒಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ಇಲ್ಲದಿದ್ದರೆ ಸ್ಥಳೀಯವಾಗಿ ಸಮಸ್ಯೆಗಳು ಇನ್ನಷ್ಟು ಹೆಚ್ಚಳವಾಗಲಿವೆ ಎಂದರು.

ಮಗಳು ಕೋವಿಡ್‌ನಿಂದ ಮೃತ ಪಟ್ಟಿದ್ದರು. ಆದರೆ ಸರ್ಕಾರ ನೀಡುವ 1 ಲಕ್ಷ ಪರಿಹಾರದಲ್ಲಿ ನಮ್ಮ ಹೆಸರು ಕೈಬಿಡಲಾಗಿದೆ ಎಂದು ಚಿಕ್ಕತುಪ್ಪೂರು ಗ್ರಾಮದ ಬಂಗಾರಾಚಾರಿ ಬೇಸರ ವ್ಯಕ್ತಪಡಿಸಿದರು. ಈ ವೇಳೆ ಪ್ರತಿಕ್ರಿಯಿಸಿದ ಶಾಸರು, ಪರಿಶೀಲಿಸಿ ಕೂಡಲೇ ಪರಿಹಾರ ದೊರಕಿಸುವಂತೆ ಕ್ರಮ ವಹಿಸಲಾಗುವುದು ಎಂದರು.

ದೇವರಹಳ್ಳಿ ದ ಮಹೇಶ್‌ ಮಾತನಾಡಿ, ವಾರ್ಡ್‌ ಹಾಗೂ ಗ್ರಾಮದ ಸಭೆ ನಡೆಸದೆ ಮನೆ ಮಂಜೂರಾತಿ ಫ‌ಲಾನುಭವಿಗಳ ಪಟ್ಟಿಯನ್ನು ಗ್ರಾಪಂ ಸದಸ್ಯರು ಸಿದ್ಧಪಡಿಸಿದ್ದಾರೆ ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಗ್ರಾಮ ಸಭೆ ನಡೆಸಿ ನಂತರ ಎಲ್ಲಾ ಸದಸ್ಯರನ್ನು ಗಣನೆಗೆ ತೆಗೆದುಕೊಂಡು ಫ‌ಲಾನುಭವಿಗಳ ಪಟ್ಟಿ ಸಿದ್ಧಪಡಿಸಬೇಕು. ಈಗಾಗಲೇ ಆಯ್ಕೆ ಮಾಡಿದ್ದರೂ ಸಹ ಅದನ್ನು ರದ್ದುಗೊಳಿಸಿ ಮತ್ತೆ ಗ್ರಾಮ ಸಭೆ ನಡೆಸಿ ಆಯ್ಕೆ ಮಾಡಬೇಕು ಎಂದು ತಾಪಂ ಇಒ ಶ್ರೀಕಂಠರಜೇ ಅರಸ್‌ ಅವರಿಗೆ ಸೂಚನೆ ನೀಡಿದರು.

ಏತ ನೀರಾವತಿ ಯೋಜನೆ ಮೂಲಕ ಸಾಗಡೆ ಗ್ರಾಮದ ಕೆರೆಗೆ ನೀರು ತುಂಬಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದರು. ಜಮೀನು ಸರ್ವೇ ಮಾಡಿಸಿಕೊಡುವಂತೆ ಎಲಚೆಟ್ಟಿ ವೃದ್ಧರೊಬ್ಬರು ಮನವಿ ಮಾಡಿದರು. ಗಂಗಾ ಕಲ್ಯಾಣ ಮಂಜೂರಾತಿಗೆ ರೈತರೊಬ್ಬರು ಆಗ್ರಹಿಸಿದ್ದರು.

ಜೊತೆಗೆ ಇಂಜಿನಿಯರ್‌ ಕಾಲೇಜು ಸೀಟು ಕೊಡಿಸುವಂತೆ ವಿದ್ಯಾರ್ಥಿನಿಯೊಬ್ಬಳು ಮನವಿ ನೀಡಿದರು. ಸಭೆಯಲ್ಲಿ ತಾಪಂ ಇಒ ಶ್ರೀಕಂಠರಾಜೇ ಅರಸ್‌, ಗ್ರೇಡ್‌-2 ತಹಶೀಲ್ದಾರ್‌ ಮಹೇಶ್‌, ಬಿಸಿಯೂಟ ಅಧಿಕಾರಿ ಮಂಜಣ್ಣ, ಪಿಡ್ಲ್ಯೂಡಿ ಎಇಇ ರವಿಕುಮಾರ್‌, ಸಿಡಿಪಿಒ ಚಲುವರಾಜು, ಪುರಸಭೆ ಮುಖ್ಯಾಧಿಕಾರಿ ಹೇಮಂತ್‌ ರಾಜ್‌, ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಮೋಹನ್‌ ಕುಮಾರ್‌, ಕೃಷಿ ಇಲಾಖೆ ಸಹಾಯ ನಿರ್ದೇಶಕ ಪ್ರವೀಣ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.