Udayavni Special

ಸಿಎಂ ಪ್ರವಾಸ: ಮ.ಬೆಟ್ಟದಲ್ಲಿ ಸಿದ್ಧತೆ ಪರಿಶೀಲನೆ

ನ.25ರಂದು ಮಹದೇಶರ ಬೆಟ್ಟದಲ್ಲಿ ಬಿಎಸ್‌ವೈ ವಾಸ್ತವ್ಯ

Team Udayavani, Nov 22, 2020, 3:27 PM IST

ಸಿಎಂ ಪ್ರವಾಸ: ಮ.ಬೆಟ್ಟದಲ್ಲಿ ಸಿದ್ಧತೆ ಪರಿಶೀಲನೆ

ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು ಮುಖ್ಯಮಂತ್ರಿಯವರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಸಂಬಂಧ ನಡೆಸಲಾಗಿರುವ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ಪರಿಶೀಲಿಸಿದರು.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನ.25ಹಾಗೂ 26ರಂದು ಮಲೆ ಮಹದೇಶ್ವರ ಬೆಟ್ಟಕ್ಕೆಆಗಮಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ, ಉದ್ಘಾಟನೆ ನಡೆಸಲಿದ್ದಾರೆ. ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಕ್ಷೇತ್ರಕ್ಕೆ ಶುಕ್ರವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ಅವರು ಇತರೆ ಇಲಾಖೆಯ ಅಧಿಕಾರಿಗಳೊಂದಿಗೆ ಸಿದ್ಧತೆಗಳನ್ನು ವ್ಯಾಪಕವಾಗಿ ಪರಿಶೀಲಿಸಿದರು.

ಮುಖ್ಯಮಂತ್ರಿ ಹಾಗೂ ಸಚಿವರು ವಾಸ್ತವ್ಯ ಹೂಡುವ ವಸತಿಗೃಹಗಳಿಗೆ ಭೇಟಿ ನೀಡಿ ಎಲ್ಲಾ ಅವಶ್ಯಕಕ್ರಮಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದರು. ಹೆಲಿಕಾಪ್ಟರ್‌ ಮೂಲಕ ಮುಖ್ಯಮಂತ್ರಿ ಆಗಮಿ ಸಲಿರುವ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಹೆಲಿಪ್ಯಾಡ್‌ಗೂ ಭೇಟಿ ನೀಡಿ ಅಲ್ಲಿ ಸಿದ್ಧತಾ ಕಾರ್ಯಗಳನ್ನು ವೀಕ್ಷಿಸಿ ಅಗತ್ಯ ಸೂಚನೆ ನೀಡಿದರು. ಮುಖ್ಯಮಂತ್ರಿ ಭೇಟಿ ನೀಡಲಿರುವ ಮಲೆ ಮಹದೇಶ್ವರ ಕ್ಷೇತ್ರದ ವಿವಿಧ ಸ್ಥಳಗಳ ಪರಿಶೀಲನೆ ನಡೆಸಿದರು.  ದೇವಾಲಯ, ದಾಸೋಹ ಭವನಕ್ಕೂ ಭೇಟಿ ನೀಡಿದರು. ಅಭಿವೃದ್ಧಿ ಕಾಮಗಾರಿಗಳ ಉದ್ಘಾ ಟನೆ ಹಾಗೂ ಶಂಕುಸ್ಥಾಪನೆ ಸಮಾರಂಭ ನಡೆಯುವ ರಂಗಮಂದಿರಕ್ಕೂ ಭೇಟಿಕೊಟ್ಟು ಕೈಗೊಳ್ಳಲಾಗಿರುವ ಸಿದ್ಧತೆಗಳನ್ನು ವೀಕ್ಷಿಸಿದರು.

ಬಳಿಕ ನಾಗಮಲೆ ಭವನದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ, ಮುಖ್ಯ ಮಂತ್ರಿಯವರಕಾರ್ಯಕ್ರಮದ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳು ನಿರ್ವಹಿಸಲಾಗಿರುವ ಜವಾಬ್ದಾರಿ ಹಾಗೂ ಇನ್ನಿತರ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದರು. ನ.25ರಂದು ಬಿಎಸ್‌ವೈ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಹೀಗಾಗಿ ಮುಖ್ಯಮಂತ್ರಿಯವರ ವಾಸ್ತವ್ಯ ಹಾಗೂ ಅವರು ಭೇಟಿಕೊಡುವ ಸ್ಥಳಗಳಲ್ಲಿ ಪೂರ್ವಭಾವಿಯಾಗಿ ಎಲ್ಲಾ ಸಿದ್ಧತಾ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. ಶಿಷ್ಟಾಚಾರವನ್ನು ಕಡ್ಡಾಯವಾಗಿ ಪಾಲಿಸಬೇಕು. ಯಾವುದೇ ಲೋಪಕ್ಕೆ ಅವಕಾಶವಾಗದ ಹಾಗೇ ಅಚ್ಚುಕಟ್ಟಾಗಿ ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲಾ ಅವಶ್ಯಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ಸೂಚಿಸಿದರು.

ಕಾರ್ಯಕ್ರಮ ನಡೆಯುವ ರಂಗಮಂದಿರದಲ್ಲಿ ಅಚ್ಚುಕಟ್ಟಾದವೇದಿಕೆ ನಿರ್ಮಾಣಕಾರ್ಯತ್ವರಿತವಾಗಿ ಪೂರ್ಣಗೊಳಿಸಬೇಕು. ಅಸನಗಳ ಅಳವಡಿಕೆ ವ್ಯವಸ್ಥೆ ಕಾರ್ಯವು ಸಮರ್ಪಕವಾಗಿರಬೇಕು. ಕೋವಿಡ್‌ ಹಿನ್ನೆಲೆಯಲ್ಲಿ ಮುಂಜಾಗ್ರತಾಕ್ರಮ ಅನುಸರಿಸಬೇಕು. ಗಣ್ಯರು, ಆಹ್ವಾನಿತರು, ಸಭಿಕರಿಗೆ ಪ್ರತ್ಯೇಕ ಪ್ರವೇಶದ್ವಾರ ನಿರ್ಮಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಸಾಲೂರು ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಮಲೆ ಮಹದೇಶ್ವರ ಕ್ಷೇತ್ರ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವ ಸ್ವಾಮಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್‌, ಹೆಚ್ಚುವರಿಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌,ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಅನಿತಾ ಹದ್ದಣ್ಣನವರ್‌, ಉಪ ವಿಭಾಗಾಧಿಕಾರಿ ಗಿರೀಶ್‌ ದಿಲೀಪ್‌ ಬಡೋಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಸಿ. ರವಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕಇಂಜಿನಿಯರ್‌ ಸುರೇಂದ್ರ,ಹನೂರು ತಹಶೀಲ್ದಾರ್‌ ನಾಗರಾಜು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಭಯ ಬೇಡ, ದೂರುದಾರರ ಹೆಸರನ್ನು ಗೌಪ್ಯವಾಗಿಡುವೆವು…

ಕುತೂಹಲ ಕೆರಳಿಸಿದ ಬಿ.ಎಲ್‌. ಸಂತೋಷ್‌ ಮಂಗಳೂರು ಭೇಟಿ

ವಿದ್ಯಾಗಮ ಪುನರಾರಂಭಿಸಿ: ಶಿಕ್ಷಕರ ಆಗ್ರಹ

ವಿದ್ಯಾಗಮ ಪುನರಾರಂಭಿಸಿ: ಶಿಕ್ಷಕರ ಆಗ್ರಹ

ದತ್ತು ಪರಿಕಲ್ಪನೆ ದೇಶಕ್ಕೆ ಪ್ರೇರಣೆ: ಯಡಿಯೂರಪ್ಪ

bsy

ಯಡಿಯೂರಪ್ಪ , ವಿಜಯೇಂದ್ರ ಆಪ್ತರಿಗೇ ನಿಗಮ, ಮಂಡಳಿ ಮಣೆ

ದಶಕದ ಶ್ರೇಷ್ಠ ಕ್ರಿಕೆಟಿಗ ಸ್ಪರ್ಧೆಯಲ್ಲಿ ಕೊಹ್ಲಿ, ಅಶ್ವಿ‌ನ್‌

ಎಸ್‌ಟಿಗೆ ಕುರುಬ ಸಮುದಾಯ ಸೇರ್ಪಡೆ; ಕೇಂದ್ರ ಸಚಿವರ ಭೇಟಿ ಮಾಡಿದ ಈಶ್ವರಪ್ಪ ನೇತೃತ್ವದ ನಿಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8 ತಿಂಗಳ ಬಳಿಕ ಬಾಗಿಲು ತೆರೆದರೂ ಬರುತ್ತಿಲ್ಲ

8 ತಿಂಗಳ ಬಳಿಕ ಬಾಗಿಲು ತೆರೆದರೂ ಬರುತ್ತಿಲ್ಲ

ಮತಾಂತರ ವಿರೋಧಿಸಿ ಸಂಘಟನೆಗಳ ಪ್ರತಿಭಟನೆ

ಮತಾಂತರ ವಿರೋಧಿಸಿ ಸಂಘಟನೆಗಳ ಪ್ರತಿಭಟನೆ

ತಾಲೂಕಿನಲ್ಲಿ ಮಿತಿ ಮೀರಿದ ಭ್ರಷ್ಟಾಚಾರ: ಗಣೇಶ್‌

ಗೋದಾಮಿನಿಂದ 50 ಲಕ್ಷ ಮೌಲ್ಯದ ಪಾನ್ ಮಸಾಲಾ ಕಳ್ಳತನ: 12 ಗಂಟೆಯೊಳಗೆ ಆರೋಪಿ ಬಂಧನ

ವರ್ಷ ಕಳೆದರೂ ಚಾ.ನಗರಕ್ಕೆ ಬಾರದ ಸಿಎಂ

ವರ್ಷ ಕಳೆದರೂ ಚಾ.ನಗರಕ್ಕೆ ಬಾರದ ಸಿಎಂ

MUST WATCH

udayavani youtube

ಮಂಗಳೂರು: ಉಪ್ಪುನೀರು ತಡೆ ಅಣೆಕಟ್ಟು ಕಾಮಗಾರಿ ವೀಕ್ಷಿಸಿದ ಸಚಿವ ಮಾಧುಸ್ವಾಮಿ

udayavani youtube

ಕರಾವಳಿಯಲ್ಲೂ ಪರಿಚಯವಾಯಿತು ಜಪಾನಿನ ಕೊಕೆಡಾಮ ಕಲೆ

udayavani youtube

ಕೊರೊನಾ ಪರಿಣಾಮ ಅಧ್ಯಯನಕ್ಕಾಗಿ ರೋಡ್ ಆಶ್ರಮ್ ಅಭಿಯಾನ

udayavani youtube

Auto Rickshaw driver feeds stray dogs in Surathkal | Umesh Devadiga | Udayavani

udayavani youtube

ಸುರತ್ಕಲ್ ನ ಪ್ರಥಮ ರಿಕ್ಷಾ ಚಾಲಕಿ

ಹೊಸ ಸೇರ್ಪಡೆ

ಕಾರ್ಯಕರ್ತೆಯರ ಕೈಗೆ ಬಂದ ಪೋಷಣ್‌ ಅಭಿಯಾನ್‌ ಮೊಬೈಲ್‌

ಕಾರ್ಯಕರ್ತೆಯರ ಕೈಗೆ ಬಂದ ಪೋಷಣ್‌ ಅಭಿಯಾನ್‌ ಮೊಬೈಲ್‌

ಭಯ ಬೇಡ, ದೂರುದಾರರ ಹೆಸರನ್ನು ಗೌಪ್ಯವಾಗಿಡುವೆವು…

ಭಯ ಬೇಡ, ದೂರುದಾರರ ಹೆಸರನ್ನು ಗೌಪ್ಯವಾಗಿಡುವೆವು…

ಕಚ್ಚಾ ತೈಲಾಗಾರದ 210 ಎಕರೆ ಭೂಸ್ವಾಧೀನಕ್ಕೆ “ಕ್ಯಾಡಸ್ಟ್ರಲ್‌ ಸರ್ವೇ’

ಮಂಗಳೂರಿನ 20 ಕಡೆ ಬೃಹತ್‌ ಜಲ ಸಂಗ್ರಹಾಗಾರ ಸ್ಥಾವರ

ಪ್ರತಿದಿನ ಗೊಬ್ಬರವಾಗುತ್ತಿದೆ 8 ಸಾವಿರ ಮನೆಗಳ ಹಸಿಕಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.