ಅಂಬೇಡ್ಕರ್‌ಗೆ ಅಗೌರವ: ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ


Team Udayavani, Nov 19, 2019, 3:00 AM IST

ambedkar-ago

ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ರಾಜ್ಯ ಸರ್ಕಾರ ಅಗೌರವ ತೋರಿದೆ ಎಂದು ಆರೋಪಿಸಿ ತಾಲೂಕಿನ ಚಂದಕವಾಡಿ ಹೋಬಳಿಯ ಡಾ.ಬಿ.ಆರ್‌. ಅಂಬೇಡ್ಕರ್‌ ಸಂಘಗಳ ಒಕ್ಕೂಟದ ವತಿಯಿಂದ ಚಂದಕವಾಡಿ ಬಸ್‌ ನಿಲ್ದಾಣದಲ್ಲಿ ರಸ್ತೆ ತಡೆ ನಡೆಸಲಾಯಿತು. ಚಂದಕವಾಡಿ ಗ್ರಾಮದ ಬಸ್‌ ನಿಲ್ದಾಣದ ವೃತ್ತದಲ್ಲಿ ಸಮಾವೇಶಗೊಂಡ ಅಂಬೇಡ್ಕರ್‌ ಸಂಘ ಒಕ್ಕೂಟದ ಕಾರ್ಯಕರ್ತರು, ರಾಜ್ಯ ಸರ್ಕಾರ, ಶಿಕ್ಷಣ ಇಲಾಖೆ ವಿರುದ್ಧ ಧಿಕ್ಕಾರ ಕೂಗಿ ಟೈರ್‌ಗೆ ಬೆಂಕಿ ಹಚ್ಚಿ ಅಕ್ರೋಶ ವ್ಯಕ್ತಪಡಿಸಿದರು. ಒಂದು ಗಂಟೆ ಕಾಲ ರಸ್ತೆತಡೆ ನಡೆಸಿದ ಹಿನ್ನಲೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಯಿತು.

ಸೇವೆಯಿಂದ ವಜಾಗೊಳಿಸಿ: ಬಿಎಸ್‌ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬ.ಮ.ಕೃಷ್ಣಮೂರ್ತಿ ಮಾತನಾಡಿ, ಶಿಕ್ಷಣ ಇಲಾಖೆಯು ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ದಿನಾಚರಣೆ ಆಚರಿಸುವಂತೆ ಹೊರಡಿಸಿರುವ ಸುತ್ತೋಲೆ ಕೈಪಿಡಿಯಲ್ಲಿ ಅಂಬೇಡ್ಕರ್‌ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ತಪ್ಪು ಸಂದೇಶ ಪ್ರಕಟಿಸಿದ್ದಾರೆ. ಈ ಮೂಲಕ ಡಾ.ಬಿ.ಆರ್‌.ಅಂಬೇಡ್ಕರ್‌ಗೆ ಅಗೌರವ ತೋರಿಸಿರುವ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್‌ ಅವರನ್ನು ಸೇವೆಯಿಂದ ವಜಾಗೊಳಿಸಿಬೇಕು. ಘಟನೆ ಕುರಿತು ಬೇಜಾವಾಬ್ದಾರಿ ಹೇಳಿಕೆ ನೀಡುತ್ತಿರುವ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ನೈತಿಕಹೊಣೆಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಸಂವಿಧಾನ, ಅಂಬೇಡ್ಕರ್‌ ಬೇರೆ ಮಾಡಲು ಅಸಾಧ್ಯ: ಡಾ.ಬಿ.ಆರ್‌.ಅಂಬೇಡ್ಕರ್‌ ದಿನಾಚರಣೆಯನ್ನು ವಿಶ್ವ ಜ್ಞಾನದಿನಾಚರಣೆಯನ್ನಾಗಿ ಆಚರಣೆ ಮಾಡಲಾಗುತ್ತದೆ. ಸಂವಿಧಾನ ರಚನೆ ಸಂದರ್ಭದಲ್ಲಿ ಅನೇಕ ಚರ್ಚೆಗಳು ಆಗಿದ್ದು, ಅಂಬೇಡ್ಕರ್‌ ಅವರೊಬ್ಬರೇ 3 ಸಾವಿರ ಪ್ರಶ್ನೆಗಳಿಗೆ ಸಮಂಜಸವಾಗಿ ಉತ್ತರಿಸಿದ್ದಾರೆ. ಅಂಬೇಡ್ಕರ್‌ ಅವರು ಸಂಪೂರ್ಣವಾಗಿ ಸಂವಿಧಾನ ಬರೆದಿದ್ದಾರೆ. ಸಂವಿಧಾನ ಮತ್ತು ಅಂಬೇಡ್ಕರ್‌ ಬೇರೆ ಮಾಡಲು ಸಾಧ್ಯವಿಲ್ಲ. ಕೇಂದ್ರ, ರಾಜ್ಯ ಸರ್ಕಾರ ಸಂವಿಧಾನವನ್ನು ತಿರುಚುವ ಪ್ರಯತ್ನ ಮಾಡುವ ಮೂಲಕ ಅಂಬೇಡ್ಕರ್‌ ಅವರಿಗೆ ಅಗೌರವ ನೀಡುವ ಕೆಲಸ ಮಾಡುತ್ತಿರುವುದು ಖಂಡನೀಯವಾದದ್ದು ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಬಿಎಸ್‌ಪಿ ಜಿಲ್ಲಾ ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ತಾಲೂಕು ಅಧ್ಯಕ್ಷ ಎಸ್‌.ಪಿ.ಮಹೇಶ್‌, ಪ್ರಧಾನ ಕಾರ್ಯದರ್ಶಿ ಅರಳೀಪುರ ಮಹದೇವಸ್ವಾಮಿ, ಅಂಬೇಡ್ಕರ್‌ ಸೇನೆ ತಾಲೂಕು ಅಧ್ಯಕ್ಷ ನಲ್ಲೂರು ಮಹದೇವಸ್ವಾಮಿ, ಆಲೂರು ನಾಗೇಂದ್ರ, ವಾಸು, ಗೂಳೀಪುರ ನಂಜುಂಡ ಸ್ವಾಮಿ, ರಾಜೇಂದ್ರ, ಕುಮಾರಸ್ವಾಮಿ, ಶಂಕರ್‌ ದಡದಹಳ್ಳಿ, ದೊಡ್ಡರಾಯಪೇಟೆ ಸಿದ್ದರಾಜು, ಸಿರಾಜ್‌, ಕುಮಾರ್‌, ಮಹದೇವ ಪ್ರಸಾದ್‌ ಹಾಗೂ ಚಂದಕವಾಡಿ, ನಲ್ಲೂರು, ಹುರುಳಿನಂಜಪುರ, ಸಗರೂರು, ಹೊಂಡರಬಾಳು, ದಡದಹಳ್ಳಿ, ನಾಗವಳ್ಳಿ, ಜ್ಯೋತಿಗೌಡನಪುರ ಗ್ರಾಮಗಳ ಅಂಬೇಡ್ಕರ್‌ ಸಂಘಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಯುವಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.