ಚಾಮರಾಜನಗರ ಎಸ್ಪಿಯಾಗಿ ದಿವ್ಯಾ ಸಾರಾ ಥಾಮಸ್ ಅಧಿಕಾರ ಸ್ವೀಕಾರ


Team Udayavani, Jul 10, 2020, 3:30 PM IST

ಚಾಮರಾಜನಗರ ಎಸ್ಪಿಯಾಗಿ ದಿವ್ಯಾ ಸಾರಾ ಥಾಮಸ್ ಅಧಿಕಾರ ಸ್ವೀಕಾರ

ಚಾಮರಾಜನಗರ: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ದಿವ್ಯಾ ಸಾರಾ ಥಾಮಸ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ದಿವ್ಯಾ ಅವರು ಜಿಲ್ಲೆಯ ಮೊದಲ ಮಹಿಳಾ ಎಸ್ಪಿಯಾಗಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಎಚ್.ಡಿ. ಆನಂದಕುಮಾರ್ ಅವರನ್ನು ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಎಸ್‌ಪಿಯಾಗಿ ಜೂನ್ 26ರಂದು ವರ್ಗಾವಣೆ ಮಾಡಲಾಗಿತ್ತು. ಆದರೆ ಇದುವರೆಗೂ ಮೂವ್‌ಮೆಂಟ್ ಆರ್ಡರ್ ನೀಡಿರಲಿಲ್ಲ. ಪೊಲೀಸ್ ಮಹಾ ನಿರ್ದೇಶಕರು ಗುರುವಾರ ಹೊರಡಿಸಿರುವ ಆದೇಶದಲ್ಲಿ ದಿವ್ಯಾ ಸಾರಾ ಥಾಮಸ್ ಹಾಗೂ ಆನಂದ್‌ಕುಮಾರ್ ಅವರಿಗೆ ಸೂಚಿಸಿರುವ ಸ್ಥಳದಲ್ಲಿ ಅಧಿಕಾರ ವಹಿಸಿಕೊಳ್ಳುವಂತೆ ಮೂವ್‌ಮೆಂಟ್ ಆರ್ಡರ್ ಹೊರಡಿಸಿದ್ದರು.

ಹಾಗಾಗಿ ದಿವ್ಯಾ ಸಾರಾ ಥಾಮಸ್ ಅವರು ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಗೆ ಆಗಮಿಸಿ ಅಧಿಕಾರ ವಹಿಸಿಕೊಂಡರು. ದಿವ್ಯಾ ಅವರು ಇದುವರೆಗೆ ಬೆಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ದಿವ್ಯಾ ಅವರು ಕೇರಳದ ತಿರುವನಂತಪುರ ಮೂಲದವರಾಗಿದ್ದು, 21 ತಿಂಗಳ ಹೆಣ್ಣು ಮಗುವಿನ ತಾಯಿಯಾಗಿದ್ದಾರೆ. ಪತಿ ನಿಶಾಂತ್ ಅವರು ಬೆಂಗಳೂರಿನಲ್ಲಿ ಆದಾಯ ತೆರಿಗೆ ಜಂಟಿ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ದಿವ್ಯಾ, ಚಾಮರಾಜನಗರ ಜಿಲ್ಲೆ ಶಾಂತಿಯುತ ಪ್ರದೇಶ. ಇಲ್ಲಿ ಕೆಲಸ ಮಾಡಲು ಉತ್ತಮ ಅವಕಾಶ ದೊರೆತಿದೆ. ಜಿಲ್ಲೆಯ ಜನರ ಸಹಕಾರ ನನಗೆ ಅತ್ಯಗತ್ಯವಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನ ಹರಿಸುತ್ತೇನೆ ಹಾಗೂ ಅಕ್ರಮ ಗಣಿಗಾರಿಕೆ ಕುರಿತು ನಿಗಾ ವಹಿಸಲಾಗುವುದು ಎಂದರು. 2016ರಲ್ಲಿ ನೆರೆ ಜಿಲ್ಲೆ ಮೈಸೂರಿನ ನಂಜನಗೂಡು ಉಪವಿಭಾಗದಲ್ಲಿ ಎಎಸ್‌ಪಿಯಾಗಿ ಕೆಲಸ ನಿರ್ವಹಿಸಿದ್ದು, ಈ ಪ್ರದೇಶ ನನಗೆ ಹೊಸದೇನಲ್ಲ ಎಂದು ಅವರು ತಿಳಿಸಿದರು.

ಇದುವರೆಗೆ ಜಿಲ್ಲಾ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆನಂದಕುಮಾರ್ ಅವರು ಜೂ. 26ರಂದು ವರ್ಗಾವಣೆಯಾಗಿದ್ದರು. ಜಿಲ್ಲೆಯ ಜನಪ್ರತಿನಿಧಿಯೊಬ್ಬರು ಅವರ ವರ್ಗಾವಣೆ ರದ್ದುಪಡಿಸುವಂತೆ ಸರ್ಕಾರಕ್ಕೆ ಒತ್ತಡ ತಂದಿದ್ದರು. ಹೀಗಾಗಿ ಆನಂದಕುಮಾರ್ ಅವರ ವರ್ಗಾವಣೆ ರದ್ದುಗೊಂಡಿದೆ ಎನ್ನಲಾಗಿತ್ತು. ಆದರೆ ಇಂದು ದಿವ್ಯಾ ಅವರು ಅಧಿಕಾರ ವಹಿಸಿಕೊಳ್ಳುವ ಮೂಲಕ ಊಹಾಪೋಹಗಳಿಗೆ ತೆರೆಬಿದ್ದಿದೆ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.