ಪೌರತ್ವ ತಿದ್ದುಪಡಿ ಕಾನೂನಿಗೆ ಬೆಂಬಲ ನೀಡಬೇಡಿ

Team Udayavani, Jan 14, 2020, 3:00 AM IST

powratva-kann

ಯಳಂದೂರು: ಜಾತಿ, ಧರ್ಮದ ಆಧಾರದ ಮೇಲೆ ಅಲ್ಪಸಂಖ್ಯಾತರ, ದಲಿತರ, ಹಿಂದುಳಿದ ವರ್ಗಗಳನ್ನು ಗುಲಾಮರಾಗಿ ರೂಪಿಸುವ ಸರ್ಕಾರದ ಪೌರತ್ವ ತಿದ್ದುಪಡಿ ಕಾನೂನಿಗೆ ಯಾವುದೇ ಕಾರಣಕ್ಕೂ ಬೆಂಬಲ ನೀಡಬಾರದು ಎಂದು ಮೈಸೂರು ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು.

ಪಟ್ಟಣದಲ್ಲಿ ತಾಲೂಕು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಸೋಮವಾರ ಪೌರತ್ವ ತಿದ್ದುಪಡಿ ಕಾನೂನು ಹಿಂಪಡೆಯುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿ, ನಾವು ಭಾರತೀಯರೆಂಬ ನಂಬಿಕೆ ಇಟ್ಟು ಜಾತಿ, ಧರ್ಮವನ್ನು ಬದಿಗಿಟ್ಟು ಹೋರಾಟ ನಡೆಸುವ ಅವಶ್ಯವಿದೆ.

ಅಂಬೇಡ್ಕರ್‌ ನೀಡಿದ್ದ ಕರೆಯನ್ನು ಪಾಲಿಸುವ ಅಗತ್ಯ ಹೆಚ್ಚಾಗಿದೆ. ಸರ್ಕಾರ ನಿರುದ್ಯೋಗ, ಬಡತನ, ಆರ್ಥಿಕ ಸಮಸ್ಯೆಗೆ ಪರಿಹಾರ ನೀಡಿಲ್ಲ. ತಮ್ಮ ಸ್ವಾರ್ಥಕ್ಕಾಗಿ ಕಾನೂನು ಜಾರಿಗೆ ತರಲು ಹೊರಟಿದ್ದಾರೆ. ಇದರಿಂದ ಅಪಾಯವಿದೆ. ಮುಂದಿನ ದಿನಗಳಲ್ಲಿ ಪ್ರಜಾಪ್ರಭುತ್ವ ಆಳಿಸುವ ಸಾಧ್ಯತೆ ಹೆಚ್ಚಾಗಿದೆ. ಯಾವುದೇ ಕಾರಣಕ್ಕೂ ಸಿಎಎಗೆ ಬೆಂಬಲ ನೀಡಬಾರದು ಎಂದು ಸಲಹೆ ನೀಡಿದರು.

ಪಾತಾಳಕ್ಕೆ ಆರ್ಥಿಕ ಪರಿಸ್ಥಿತಿ: ಮಾಜಿ ಶಾಸಕ ಎ.ಆರ್‌. ಕೃಷ್ಣಮೂರ್ತಿ ಮಾತನಾಡಿ, ದೇಶದ ಅಭಿವೃದ್ಧಿಯನ್ನು ಮಾಡದ ಕೇಂದ್ರ ಸರ್ಕಾರ, ಪೌರತ್ವ ತಿದ್ದುಪಡಿ ಕಾನೂನು ಜಾರಿಗೆ ತಂದು ಸಾಮರಸ್ಯ ಕದಡುತ್ತಿದ್ದಾರೆ. ದೇಶದ ಆರ್ಥಿಕ ಪರಿಸ್ಥಿತಿ ಪಾತಾಳಕ್ಕೆ ಇಳಿದಿದೆ. ಇದನ್ನು ಸರಿಪಡಿಸದೇ ಸಾರ್ವಜನಿಕರ ಗಮನವನ್ನು ಬೇರೆಡೆ ಸೆಳೆಯಲು ಇಂತಹ ಕುತಂತ್ರಗಳನ್ನು ದೇಶದಲ್ಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಶಿಕ್ಷಣಕ್ಕೆ ಆದ್ಯತೆ ನೀಡಿ: ವಿಚಾರವಾದಿ ಗುರುರಾಜ್‌ ಮಾತನಾಡಿ, ಮುಸ್ಲಿಂ ಸಮುದಾಯ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ನಮ್ಮ ಸಮಸ್ಯೆಗಳಿಗೆ ಸ್ಪಂದಿಸುವ ಎಲ್ಲರಿಗೂ ಸಹಾಯ ಮಾಡುವ ಮನೋಭಾವವನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದ ನಂತರ ಅಂಬೇಡ್ಕರ್‌ ಭವನದಿಂದ ತಹಶೀಲ್ದಾರ್‌ ಕಚೇರಿಗೆ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಈ ವೇಳೆ ತಹಶೀಲ್ದಾರ್‌ ಮಹೇಶ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಜಿಪಂ ಸದಸ್ಯ ಜೆ.ಯೋಗೇಶ್‌, ಪಪಂ ಸದಸ್ಯರಾದ ಮಹೇಶ್‌, ವೈ.ಜಿ. ರಂಗನಾಥ, ಮಹಾದೇವ ನಾಯಕ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ವಿ.ಚಂದ್ರು, ಎಸ್‌ಡಿಪಿಐನ ಅಬ್ರಾರ್‌ ಅಹಮ್ಮದ್‌, ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್‌, ನಯಾಜ್‌ಖಾನ್‌, ಇರ್ಫಾನ್‌, ರಿಜ್ವಾನ್‌, ಶಬ್ಬೀರ್‌, ದಾವೂದ್‌, ದಸಂಸ ಮುಖಂಡ ಸಿ.ರಾಜಣ್ಣ, ಕಂದಹಳ್ಳಿ ನಾರಾಯಣ, ಕೆ.ಎಂ. ನಾಗರಾಜು, ಡಿ.ಪರಶಿವಮೂರ್ತಿ, ದೊಡ್ಡಿಂದವಾಡಿ ಸಿದ್ಧರಾಜು, ಮಲ್ಲು ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳ ಸದಸ್ಯರು, ಮುಸ್ಲಿಂ ಮುಖಂಡರು ಹಾಜರಿದ್ದರು.

ಟಾಪ್ ನ್ಯೂಸ್

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.