ಕಾಂಗ್ರೆಸ್‌ ನಿರ್ವಾತ ತುಂಬಲು ಧ್ರುವ ಆಗಮನ


Team Udayavani, Jan 22, 2021, 1:32 PM IST

druva arrival to Congress

ಚಾಮರಾಜನಗರ: ಹಳೆ ಮೈಸೂರು ಭಾಗದಲ್ಲಿ ಪಕ್ಷವನ್ನು ಸಂಘಟಿಸಲು ಹಾಗೂ ದಲಿತ ನಾಯಕರೊಬ್ಬರನ್ನು ಪ್ರಬಲವಾಗಿ ಬೆಳೆಸಲು ಆರ್‌. ಧ್ರುವನಾರಾಯಣ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ನೀಡಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಹಳೆ ಮೈಸೂರು ಭಾಗದಲ್ಲಿ ಬಿಜೆಪಿಯ ವಿ. ಶ್ರೀನಿವಾಸಪ್ರಸಾದ್‌ ಪ್ರಬಲ ದಲಿತ ನಾಯಕರು. ಅವರು ಕಾಂಗ್ರೆಸ್‌ನಲ್ಲಿದ್ದಾಗ ಪಕ್ಷಕ್ಕೆ ಈ ಭಾಗದಲ್ಲಿ ಪ್ರಬಲ ದಲಿತ ನಾಯಕರೊಬ್ಬರ ನಾಯಕತ್ವ ಪಕ್ಷಕ್ಕಿತ್ತು. ಇನ್ನೊಂದೆಡೆ ಕಾಂಗ್ರೆಸ್‌ಗೆ ಹೆಗಲಾಗಿ ಎಚ್‌ .ಸಿ.ಮಹದೇವಪ್ಪ ಇದ್ದರು. ಆದರೆ, ಕಳೆದ ವಿಧಾನಸಭಾ ಚುನಾವಣೆಯ ನಂತರ ಎಚ್‌ಸಿಎಂ ಪಕ್ಷದ ಕಾರ್ಯಕ್ರಮಗಳಲ್ಲಿ, ಸಂಘಟನೆಯಲ್ಲಿ ಸಕ್ರಿಯವಾಗಿ ಕಾಣಿಸಿಕೊಳ್ಳುತ್ತಿಲ್ಲ. ಒಂದು ರೀತಿಯ ಅಸಮಾಧಾನ ಅವರಲ್ಲಿದೆ. ಇಂಥ ಸನ್ನಿವೇಶದಲ್ಲಿ ಮೈಸೂರು ಚಾಮರಾಜನಗರ ಭಾಗದಲ್ಲಿ ಕಾಂಗೆಸ್‌ಗೆ ಪ್ರಬಲ ದಲಿತ ನಾಯಕತ್ವದ ಕೊರತೆಯಿದೆ. ಅಷ್ಟು ಮಾತ್ರವಲ್ಲ, ಎಚ್‌.ಎಸ್‌.ಮಹದೇವಪ್ರಸಾದ್‌ ನಿಧನದ ನಂತರ ಚಾಮರಾಜನಗರ ಜಿಲ್ಲೆಯಲ್ಲೇ ಪಕ್ಷಕ್ಕೆ ಪ್ರಭಾವಿ ನಾಯಕತ್ವದ ಕೊರತೆಯಿದೆ.

ಈ ಎಲ್ಲ ಕೊರತೆಗಳನ್ನೂ ಸರಿದೂಗಿಸಲು ಧ್ರುವನಾರಾಯಣಗೆ ಕಾರ್ಯಾಧ್ಯಕ್ಷ ಸ್ಥಾನ ನೀಡಿದೆ ಎಂಬುದು ಹೊರ ನೋಟಕ್ಕೇ ಗೊತ್ತಾಗುವ ಸಂಗತಿ. ಕಾಂಗ್ರೆಸ್‌ ನಿರ್ವಾತ ತುಂಬಲು ಪಕ್ಷಕ್ಕೆ ಇದೀಗ ಧ್ರುವ ಬಲ ಸಿಕ್ಕಿದೆ. ಧ್ರುವನಾರಾಯಣ ಪಕ್ಷದೊಳಗೆ ಎಲ್ಲ ನಾಯಕರ ಜೊತೆ ವಿಶ್ವಾಸದಿಂದಿದ್ದು, ಎಲ್ಲರೂ ಒಪ್ಪುವ ಮೃದು ಸ್ವಭಾವದ ವ್ಯಕ್ತಿ. ಅವರು 2 ಬಾರಿ ಶಾಸಕರಾಗಿ, 2 ಬಾರಿ ಸಂಸದರಾಗಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಈ ಭಾಗದಲ್ಲಿ ಜನಜನಿತ. ಸಂಸದರಾಗಿದ್ದ ಅವಧಿಯಲ್ಲಿ ಅವರು ತಮ್ಮ ಲೋಕಸಭಾ ಕ್ಷೇತ್ರಕ್ಕೆ ಕೇಂದ್ರದಿಂದ ತರಬಹುದಾದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಹಗಲು ರಾತ್ರಿಯೆನ್ನದೆ ಶ್ರಮಿಸಿರುವುದು ಈ ಭಾಗದ ಜನರಿಗೆ ಚೆನ್ನಾಗಿ ಗೊತ್ತು.

ಸಂಸದರೊಬ್ಬರು ಇಷ್ಟೊಂದು ಕೆಲಸ ಮಾಡಲು ಸಾಧ್ಯವೆಂಬುದನ್ನು ಧ್ರುವ ತೋರಿಸಿಕೊಟ್ಟಿದ್ದಾರೆ ಎಂದು ಪ್ರತಿಪಕ್ಷ ನಾಯಕರು ಸಹ ಒಪ್ಪುತ್ತಾರೆ. ಚಾಮರಾಜನಗರದ ಕೇಂದ್ರೀಯ ವಿದ್ಯಾಲಯದ ಉದ್ಘಾಟನೆಗೆ ಆಗಮಿಸಿದ್ದ ಅಂದಿನ ಕೇಂದ್ರ ಸಚಿವ ದಿ. ಅನಂತಕುಮಾರ್‌ ಅವರು, ಅಂದಿನ ತಮ್ಮ ಭಾಷಣದಲ್ಲಿ ವಿರೋಧ ಪಕ್ಷದವರು ಎಂಬ ಭೇದ ತೋರದೆ ಧ್ರುವ ಅತ್ಯುತ್ತಮ ಸಂಸದ ಎಂದು ಬಣ್ಣಿಸಿದ್ದರು. ಸಂಸ್ಥೆಯೊಂದು ನಡೆಸಿದ ಸಂಸದರ ಅಭಿವೃದ್ಧಿ ಕಾರ್ಯಗಳ ಮೌಲ್ಯಮಾಪನದಲ್ಲಿ ಧ್ರುವ, ದೇಶದ ನಾಲ್ಕನೇ ಹಾಗೂ ಕರ್ನಾಟಕದ ಮೊದಲ ಸಂಸದರಾಗಿದ್ದರು.

ಧ್ರುವನಾರಾಯಣ ದಲಿತ ವರ್ಗದೊಡನೆ ಮಾತ್ರವಲ್ಲ, ಇತರ ವರ್ಗಗಳೊಡನೆಯೂ ವಿಶ್ವಾಸ ಹೊಂದಿದ್ದಾರೆ. ಬೇರೆ ಸಮುದಾಯದ ನಾಯಕರೊಡನೆ ಒಡನಾಟ ಇಟ್ಟುಕೊಂಡಿದ್ದಾರೆ. ಶಾಸಕ, ಸಂಸದರಾಗಿದ್ದಾಗ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳು ಎಲ್ಲ ವರ್ಗಗಳಿಗೂ ಪ್ರಯೋಜನಕಾರಿಯಾಗಿವೆ. ಹೀಗಾಗಿ ಎಲ್ಲ ಸಮುದಾಯದ ಜನರ ವಿಶ್ವಾಸ ಗಳಿಸಿಕೊಂಡಿದ್ದಾರೆ. ಕ್ರಿಯಾಶೀಲ, ಮೃದು ಸ್ವಭಾವದ ವ್ಯಕ್ತಿತ್ವ, ಪಕ್ಷದಲ್ಲಿ ಎಲ್ಲರೊಡನೆ ಹೊಂದಿಕೊಂಡು ಹೋಗುವ ಗುಣ ಇವೆಲ್ಲವನ್ನೂ ಪರಿಗಣಿಸಿದ ಕಾಂಗ್ರೆಸ್‌ ಪಕ್ಷ ಮೈಸೂರು ಭಾಗದ ಸಂಘಟನೆಗಾಗಿ ಹಾಗೂ ಕೆಪಿಸಿಸಿಯ ಉನ್ನತ ಹುದ್ದೆಯಲ್ಲಿ ದಲಿತ ನಾಯಕರೊಬ್ಬರನ್ನು ಪ್ರತಿನಿಧಿಸಲು ಧ್ರುವನಾರಾಯಣ ಅವರನ್ನೇ ಆಯ್ಕೆ ಮಾಡಿದೆ. ಈ ಜವಾಬ್ದಾರಿಯನ್ನು ಅವರು ಯಾವ ರೀತಿ ನಿಭಾಯಿಸಿಕೊಂಡು ಹೋಗುತ್ತಾರೆ ಎಂಬುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕಾಗಿದೆ.

 ಕೆ.ಎಸ್‌.ಬನಶಂಕರ ಆರಾಧ್ಯ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.