ಮಾದಪ್ಪನ ಬೆಟ್ಟದ ರಸ್ತೆಯಲ್ಲಿ ಗುಂಡಿಗಳದ್ದೇ ಕಾರುಬಾರು


Team Udayavani, Jan 5, 2020, 3:00 AM IST

madappana

ಚಾಮರಾಜನಗರ: ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಅತಿ ಹೆಚ್ಚು ಆದಾಯ ತರುವ ಕ್ಷೇತ್ರವಾಗಿರುವ ಮಲೆ ಮಹದೇಶ್ವರ ಬೆಟ್ಟದ ರಸ್ತೆ ತೀವ್ರ ಹದಗೆಟ್ಟು ಪ್ರಯಾಣಿಕರು ಪ್ರಯಾಸ ಪಡುವಂತವಾಗಿದೆ. ಕೊಳ್ಳೇಗಾಲದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ 80 ಕಿ.ಮೀ. ಅಂತರವಿದ್ದು, ಕೊಳ್ಳೇಗಾಲದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವವರೆಗೂ ರಸ್ತೆ ಗುಂಡಿ ಬಿದ್ದಿದೆ. ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟಕ್ಕೆ ಹೋಗುವ ರಸ್ತೆಗೆ ವಾಹನ ತಿರುಗಿಸಿದರೆ ಗುಂಡಿಗಳ ರಸ್ತೆ ಆರಂಭವಾಗುತ್ತದೆ.

ಸಾವಿರಾರು ಪ್ರಯಾಣಿಕರು ಭೇಟಿ: ರಾಜ್ಯ ಹೆದ್ದಾರಿಯಾದ ಈ ರಸ್ತೆ ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೊಳಪಡುತ್ತದೆ. ಕೊಳ್ಳೇಗಾಲದಿಂದ ಕೌದಳ್ಳಿತನಕ ಕೊಳ್ಳೇಗಾಲ ಉಪ ವಿಭಾಗಕ್ಕೆ, ಕೌದಳ್ಳಿಯಿಂದ ಪಾಲರ್‌ ತನಕ ಮಲೆ ಮಹದೇಶ್ವರ ಉಪ ವಿಭಾಗಕ್ಕೆ ಸೇರಿದೆ. ರಾಜ್ಯದ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲೊಂದಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರತಿನಿತ್ಯ ಸಾವಿರಾರು ಪ್ರಯಾಣಿಕರು ಭೇಟಿ ನೀಡುತ್ತಾರೆ. ಹಾಗಾಗಿ ಈ ರಸ್ತೆಯಲ್ಲಿ ಪ್ರತಿ ದಿನ ಸಾವಿರಾರು ವಾಹನಗಳು ಸಂಚರಿಸುತ್ತವೆ.

ಶಿವರಾತ್ರಿ, ಯುಗಾದಿ, ದಸರಾ, ದೀಪಾವಳಿ, ಅಮಾವಾಸ್ಯೆ ಮುಂತಾದ ದಿನಗಳಲ್ಲಿ ವಾಹನಗಳ ಸಂಖ್ಯೆ ಲಕ್ಷ ದಾಟುತ್ತದೆ. ಕೇವಲ ವಾಹನಗಳು ಮಾತ್ರವಲ್ಲ ಅನೇಕ ಭಕ್ತರು ಬೆಟ್ಟಕ್ಕೆ ಕಾಲ್ನಡಿಗೆಯಲ್ಲೂ ತೆರಳುತ್ತಾರೆ. ಇಂತಹ ಪುಣ್ಯ ಕ್ಷೇತ್ರದ ರಸ್ತೆ ಸಹಜವಾಗಿ ಉತ್ತಮ ಗುಣಮಟ್ಟದಿಂದ ಕೂಡಿರಬೇಕಿತ್ತು. ಬೇರೆ ರಾಜ್ಯಗಳಿಂದ, ಜಿಲ್ಲೆಗಳಿಂದ ಬರುವ ಜನರಿಗೆ ಮಲೆ ಮಹದೇಶ್ವರ ಬೆಟ್ಟದ ರಸ್ತೆ ಉತ್ತಮವಾಗಿರುತ್ತದೆ ಎಂಬ ಭಾವನೆ ಇರುತ್ತದೆ. ಆದರೆ, ಕೊಳ್ಳೇಗಾಲ ದಾಟುತ್ತಿದ್ದಂತೆಯೇ ಅವರ ಅನಿಸಿಕೆ ಸುಳ್ಳು ಎಂಬುದು ಅರಿವಾಗುತ್ತದೆ.

ರಸ್ತೆಗೆ ತೇಪೆ ಹಚ್ಚುವ ಕೆಲಸ: ಗುಂಡಿ ಬಿದ್ದ ರಸ್ತೆ, ಜಲ್ಲಿ ಕಲ್ಲುಗಳು ಮೇಲೆದ್ದು ಬಂದ ರಸ್ತೆಯಲ್ಲಿ ವಾಹನ ಚಲಿಸುತ್ತಿದ್ದರೆ, ವಾಹನದ ಕುಲುಕಾಟದಿಂದ ಪ್ರಯಾಣಿಕರು ಪ್ರಯಾಸ ಪಡಬೇಕಾಗಿದೆ. ಆಗಾಗ ಈ ರಸ್ತೆಗೆ ತೇಪೆ ಹಚ್ಚುವ ಕೆಲಸ ನಡೆಯುತ್ತದೆ. ತೇಪೆ ಹಾಕಿದ ಕೆಲ ದಿನಗಳ ಬಳಿಕ ರಸ್ತೆ ಮತ್ತೆ ಗುಂಡಿ ಬೀಳುತ್ತದೆ. ಗುಂಡಿ ಬಿದ್ದ ರಸ್ತೆಗೆ ಮತ್ತೆ ತೇಪೆ ಹಾಕಲಾಗುತ್ತದೆ. ಈಗಂತೂ ತೇಪೆ ಹಾಕಿದ ಅಕ್ಕಪಕ್ಕದಲ್ಲಿ ಉದ್ದಕ್ಕೂ ಗುಂಡಿ ಬಿದ್ದು, ರಸ್ತೆ ಪ್ರಯಾಣಿಕರಿಗೆ ಪ್ರಯಾಸ ಮೂಡಿಸುತ್ತದೆ.

ಕಿರಿದಾಗಿಯೇ ಇದೆ ರಸ್ತೆ: ಇನ್ನು, ತಾಳ ಬೆಟ್ಟದಿಂದ ಮಹದೇಶ್ವರ ಬೆಟ್ಟದ ವರೆಗಿನ ರಸ್ತೆ ಅನಾದಿ ಕಾಲದಿಂದಲೂ ಅಗಲೀಕರಣವಾಗಿಲ್ಲ. ದಶಕಗಳಿಂದಲೂ ರಸ್ತೆ ಕಿರಿದಾಗಿಯೇ ಇದೆ. ಆದರೆ, ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಕೆಲವು ತಿರುವುಗಳಲ್ಲಿ ವಾಹನ ಸವಾರರು ಆತಂಕದಿಂದಲೇ ಚಲಿಸಬೇಕಾದ ಸ್ಥಿತಿ ಇದೆ. ಭದ್ರತೆಗಾಗಿ ನಿರ್ಮಾಣ ಮಾಡಿರುವ ತಡೆ ಗೋಡೆಗಳು ಕುಸಿದು ಬೀಳಬಹುದೆಂಬ ಆತಂಕ ಪ್ರಯಾಣಿಕರಲ್ಲಿ ಮೂಡುತ್ತದೆ. ರಂಗಸ್ವಾಮಿ ಒಡ್ಡು, ಆನೆ ತಲೆದಿಂಬದಿಂದ ಆಣೆಹೊಲದ ತನಕ ರಸ್ತೆ ಇಕ್ಕಟ್ಟಾಗಿದೆ. ಜಾತ್ರಾ ಸಮಯದಲ್ಲಿ ಟ್ರಾಫಿಕ್‌ ಜಾಮ್‌. ಆದರೆ ಎರಡು ಮೂರು ಗಂಟೆ ರಸ್ತೆ ಬಂದ್‌ ಆಗಿ ಯಾತ್ರಿಕರು ಪರದಾಡುವ ಸ್ಥಿತಿ ನಿರ್ಮಾಣವಾಗುತ್ತದೆ.

ರಸ್ತೆ ಅಭಿವೃದ್ಧಿಪಡಿಸಲು ಆಗ್ರಹ: ತಾಳ ಬೆಟ್ಟದಿಂದ ಮಹದೇಶ್ವರ ಬೆಟ್ಟದವರಗೆ ಎಲ್ಲಿ ಯಾವಾಗ ಏನಾಗುತ್ತದೆ ಎಂಬುದೆ ಗೊತ್ತಾಗುವುದಿಲ್ಲ, ಮೃತ್ಯು ಕೂಪವಾಗಿರವ ಈ ರಸ್ತೆಯನ್ನು ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಪಡಿಸಿ ಯಾತ್ರಿಕರು ನೆಮ್ಮದಿಯಿಂದ ಹೋಗಿ ಬರಲು ಅನುವು ಮಾಡಬೇಕು ಎಂದು ಭಕ್ತರು ಆಗ್ರಹಿಸಿದ್ದಾರೆ. ಈ ರಸ್ತೆಯನ್ನು ಕೆಶಿಪ್‌ಗೆ ಸೇರಿಸಲಾಗಿದೆ. ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭವಾಗಲಿದೆ ಎಂದು ವರ್ಷಗಳಿಂದ ಹೇಳುತ್ತಲೇ ಬರಲಾಗಿದೆ. ಆದರೆ, ಅಭಿವೃದ್ಧ ಕಾಮಗಾರಿ ಮಾತ್ರ ಇನ್ನೂ ಆರಂಭವಾಗಿಲ್ಲ ಎಂಬ ದೂರು ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ಸೌಲಭ್ಯವಿದ್ದರೂ ಸಮರ್ಪಕ ರಸ್ತೆ ಇಲ್ಲ: ರಾಜ್ಯದ ಪ್ರಸಿದ್ಧ ಯಾತ್ರಸ್ಥಳ ಹಾಗೂ ಹೆಚ್ಚು ಆದಾಯ ಹೊಂದಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ರಸ್ತೆ ಹೀಗಾಗಿರುವುದು ಪ್ರಯಾಣಿಕರಲ್ಲಿ ಬೇಸರ ಮೂಡಿಸುತ್ತದೆ. ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿಗೊಳ್ಳುತ್ತಿದ್ದಂತೆ ಯಾತ್ರಿಕರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹಾಗೆಯೇ ಪ್ರತಿ ತಿಂಗಳು ಹುಂಡಿಯ ಆದಾಯ ಹೆಚ್ಚುತ್ತಲೇ ಇದೆ. ಬೆಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳು ಉತ್ತಮವಾಗಿ ನಡೆಯುತ್ತಿವೆ. ಯಾತ್ರೆಗೆ ಬರುವ ಜನರಿಗೆ ಹೆಚ್ಚಿನ ಅನುಕೂಲಗಳನ್ನು ಮಾಡಿಕೊಡಲಾಗುತ್ತಿದೆ. ಮೂಲ ಸೌಕರ್ಯಗಳು ಸಮರ್ಪಕವಾಗಿದೆ. ಭಕ್ತರಿಗೆ ನಿರಂತರ ದಾಸೋಹ ವ್ಯವಸ್ಥೆ ಸೇರಿದಂತೆ ಇತರೆ ಅನುಕೂಲಗಳನ್ನು ಮಾಡಿಕೊಡಲಾಗುತ್ತಿದೆ. ಆದರೆ, ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೇ ಚೆನ್ನಾಗಿಲ್ಲದಂತಹ ಪರಿಸ್ಥಿತಿ ತಲೆದೋರಿದೆ.

ಮಲೆ ಮಹದೇಶ್ವರ ಬೆಟ್ಟ ನಮ್ಮ ಜಿಲ್ಲೆಯ ಹೆಮ್ಮೆಯ ಪುಣ್ಯ ಕ್ಷೇತ್ರ. ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾದ ಇಲ್ಲಿಗೆ ನಿತ್ಯ ಸಾವಿರಾರು ಪ್ರಯಾಣಿಕರು ಬರುತ್ತಾರೆ. ಆದರೆ, ಇಲ್ಲಿನ ರಸ್ತೆ ತೀರಾ ಹದಗೆಟ್ಟಿದ್ದು, ಪ್ರಯಾಸ ಪಡುವಂತಾಗಿದೆ. ಇದರಿಂದ ಪ್ರಯಾಣದ ಅವಧಿ ಸಹ ಹೆಚ್ಚಾಗುತ್ತಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಈ ರಸ್ತೆ ಅಭಿವೃದ್ಧಿಪಡಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕು.
-ಸಿದ್ದಲಿಂಗಸ್ವಾಮಿ, ಭಕ್ತ, ರಾಮಸಮುದ್ರ

ಸಿದ್ದರಾಮಯ್ಯ ಸರ್ಕಾರದಲ್ಲಿ ಎಚ್‌.ಸಿ.ಮಹದೇವಪ್ಪ ಅವರು ಲೋಕೋಪಯೋಗಿ ಸಚಿವರಾಗಿದ್ದಾಗ ಕೊಳ್ಳೇಗಾಲದಿಂದ ಹನೂರುವರೆಗಿನ 24 ಕಿ.ಮೀ. ರಸ್ತೆಯನ್ನು ಕೆ ಶಿಪ್‌ಗೆ ಸೇರಿಸಲಾಗಿದೆ. ಈ ರಸ್ತೆ ಅಭಿವೃದ್ಧಿಗೆ ಆ ಸಂದರ್ಭದಲ್ಲಿ 108 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಟೆಂಡರ್‌ ಕೂಡ ಮುಗಿದಿದ್ದು, ಇನ್ನೊಂದು ತಿಂಗಳಲ್ಲಿ ರಸ್ತೆ ಕಾಮಗಾರಿ ಆರಂಭವಾಗಲಿದೆ. ಹನೂರಿನಿಂದ ಮಲೆ ಮಹದೇಶ್ವರಬೆಟ್ಟ, ಮೆಟ್ಟೂರು ವರೆಗಿನ ರಸ್ತೆಯನ್ನು ರಾಷ್ಟ್ರಿಯ ಹೆದ್ದಾರಿಗೆ ಸೇರಿಸಬೇಕೆಂದು ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ.
-ಆರ್‌. ನರೇಂದ್ರ, ಶಾಸಕ, ಹನೂರು

* ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.