ವಸತಿ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ

Team Udayavani, Jan 8, 2023, 4:30 PM IST

ವಸತಿ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ

ಚಾಮರಾಜನಗರ: ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ವಸತಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸು ವಂತೆ ವಸತಿ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ, ಜಿಲ್ಲೆಯ ಗ್ರಾಪಂ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ವಸತಿ ಯೋಜನೆ ಗಳ ಅನುಷ್ಠಾನ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಮನೆಗಳ ಪಟ್ಟಿ ತಯಾರಿಸಿ: ಜಿಲ್ಲೆಯಲ್ಲಿ ಮನೆ ಅಗತ್ಯವಿರುವವರನ್ನು ಗುರುತಿಸಬೇಕು. ಜಿಲ್ಲೆಯ ಎಲ್ಲಾ 130 ಗ್ರಾಪಂ ಹಾಗೂ ನಗರ, ಸ್ಥಳೀಯ ಸಂಸ್ಥೆಗಳಲ್ಲಿನ ವ್ಯಾಪ್ತಿಯಲ್ಲಿ ಅಗತ್ಯವಿರುವವರಿಗೆ ಮನೆಗಳನ್ನು ನಿರ್ಮಿಸಿಕೊಡಲು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಕಂದಾಯ ಇಲಾಖೆಗಳ ಅಧಿಕಾರಿಗಳು ಅಲ್ಲದೆ ನಗರ, ಸ್ಥಳೀಯ ಸಂಸ್ಥೆಗಳಲ್ಲಿನ ನಗರಸಭೆ ಆಯುಕ್ತರು, ಪುರಸಭೆ ಹಾಗೂ ಪಪಂ ಮುಖ್ಯಾಧಿಕಾರಿಗಳು ಅರ್ಹ ಫ‌ಲಾನುಭವಿಗಳ ಪಟ್ಟಿ ಮಾಡಬೇಕು. ಮುಂದಿನ 15 ದಿನದೊಳಗೆ ಅಗತ್ಯವಿರುವ ಮನೆಗಳ ಪಟ್ಟಿ ತಯಾರಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿರುವ ಬಡವರಿಗೆ ಮನೆಗಳ ನಿರ್ಮಿಸಿಕೊಳ್ಳಲು ನೀಡಲಾಗುವ ಅನುದಾನದ ಮೊತ್ತವನ್ನು ಹೆಚ್ಚಿಸಲು ಮುಖ್ಯಮಂತ್ರಿ ಯವರೊಂದಿಗೆ ಚರ್ಚೆ ನಡೆಸಲಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿಯವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಉಪವಿಭಾಗಾಧಿಕಾರಿ, ಎಲ್ಲಾ ತಾಲೂಕುಗಳ ತಹಶೀಲ್ದಾರ್‌, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಎಲ್ಲರಿಗೂ ಸೂರು ಕಲ್ಪಿಸುವ ನಿಟ್ಟಿನಲ್ಲಿ ಸಂಕಲ್ಪ ಮಾಡಬೇಕು ಎಂದರು.

ಸರ್ಕಾರಿ ಜಾಗಗಳನ್ನು ಗುರುತಿಸಿ ಅರ್ಹರಿಗೆ ನಿವೇಶನ ಹಂಚಿಕೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂದಾಗಬೇಕು ಸೆಸ್ಕ್ ಅಧಿಕಾರಿಗಳು ತೋಟದ ಮನೆಗಳಿಗೆ ವಿದ್ಯುತ್‌ ಕಡಿತಗೊಳಿಸಬಾರದು. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಪ್ರಯಾಣಿಕರಿಗೆ, ವಿದ್ಯಾರ್ಥಿಗಳಿಗೆ ಸಾರಿಗೆ ಬಸ್‌ಗಳ ಕೊರತೆ ನೀಗಿಸಿ ಹೆಚ್ಚುವರಿ ಬಸ್‌ಗಳ ಓಡಾಟಕ್ಕೆ ಕ್ರಮವಹಿಸಬೇಕು. ಈ-ಸ್ವತ್ತು, ವಿಧವಾ ವೇತನ, ಮಾಸಾಶನ ಪಡೆಯಲು ಜನರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ ಸಕಾಲಕ್ಕೆ ಸೌಲಭ್ಯಗಳನ್ನು ಒದಗಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದರು.

ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಆರ್‌. ನರೇಂದ್ರ, ಸಿ.ಎಸ್‌. ನಿರಂಜನಕುಮಾರ್‌, ಡೀಸಿ ಡಿ.ಎಸ್‌. ರಮೇಶ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್‌, ಎಡೀಸಿ ಕಾತ್ಯಾಯಿನಿ ದೇವಿ, ಬಿ.ಆರ್‌.ಟಿ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿ ದೀಪಾ ಇದ್ದರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.