ಜಿಲ್ಲಾದ್ಯಂತ ಈದ್‌ ಉಲ್‌ ಫಿತರ್ ಸಂಭ್ರಮ

Team Udayavani, Jun 6, 2019, 3:00 AM IST

ಚಾಮರಾಜನಗರ: ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲೆಯಾದ್ಯಂತ ಈದ್‌ ಉಲ್‌ ಫಿತರ್ ಹಬ್ಬವನ್ನು ಮುಸ್ಲಿಮರು ಸಡಗರ ಸಂಭ್ರಮದಿಂದ ಬುಧವಾರ ಆಚರಿಸಿದರು.

ಜಿಲ್ಲಾ ಕೇಂದ್ರ, ತಾಲೂಕು ಕೇಂದ್ರದ ಪಟ್ಟಣಗಳಲ್ಲಿ ಮಾತ್ರವಲ್ಲದೇ ಹಲವಾರು ಗ್ರಾಮಗಳ ಈದ್ಗಾ ಮೈದಾನಗಳಲ್ಲಿ ಮುಸಲ್ಮಾನರು ಸಮಾವೇಶಗೊಂಡು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ನಗರದ ಸೋಮವಾರಪೇಟೆ ಬಳಿ ಇರುವ ಈದ್ಗಾ ಮೈದಾನ, ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜು ಹಿಂಭಾಗದ ಈದ್ಗಾ ಮೈದಾನದಲ್ಲಿ ಸಾವಿರಾರು ಮಂದಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆಗಾಗಿ ಬೃಹತ್‌ ಶಾಮಿಯಾನ ಹಾಕಲಾಗಿತ್ತು.

ಒಂದು ತಿಂಗಳ ರಂಜಾನ್‌ ಉಪವಾಸ ಅಂತ್ಯಗೊಳಿಸಿದ ನಂತರ ಈದ್‌ ಉಲ್‌ ಫಿತರ್ ಆಚರಿಸಲಾಯಿತು. ಧಾರ್ಮಿಕ ಗುರುಗಳು ಹಬ್ಬದ ಮಹತ್ವ, ಆಚರಣೆ, ಉದ್ದೇಶ ಕುರಿತು ಧಾರ್ಮಿಕ ಪ್ರವಚನ ನೀಡಿದರು.

ನಂತರ ವಿಶೇಷ ಸಾಮೂಹಿಕ ನಮಾಜ್‌ ಮಾಡಿ, ದುವಾ (ಪ್ರಾರ್ಥನೆ) ಸಲ್ಲಿಸಲಾಯಿತು. ಇದಾದ ಮೇಲೆ ಪರಸ್ಪರರು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಚಿಣ್ಣರು ಸೇರಿ ಎಲ್ಲರೂ ಹೊಸ ಬಟ್ಟೆ ಧರಿಸಿದ್ದರು.

ಈದ್‌ ಉಲ್‌ ಫಿತರ್ ಹಬ್ಬವನ್ನು ಉಪವಾಸದ ಹಬ್ಬವೆಂದು ಕರೆಯಲಾಗುತ್ತದೆ. ಈ ಹಬ್ಬದಲ್ಲಿ ಅಶಕ್ತರು ಬಡವರಿಗೆ ದಾನ ಮಾಡುವುದು ಕಡ್ಡಾಯ. ಅದರಂತೆಯೇ ಮುಸ್ಲಿಮರು ವಯೋವೃದ್ಧರು, ಅಶಕ್ತರಿಗೆ ತಮ್ಮ ಕೈಯ್ಯಲ್ಲಿ ಸಾಧ್ಯವಾದಷ್ಟು ದಾನ ಮಾಡಿ ಕೃತಾರ್ಥರಾದರು.

ಚಾಮರಾಜನಗರ, ಕೊಳ್ಳೇಗಾಲ, ಹನೂರು, ಗುಂಡ್ಲುಪೇಟೆ, ಯಳಂದೂರು, ಹನೂರು ತಾಲೂಕು ಕೇಂದ್ರಗಳಲ್ಲಿ ರಂಜಾನ್‌ ಹಬ್ಬದ ಸಂಭ್ರಮ ಮನೆ ಮಾಡಿತ್ತು.

ಸಚಿವರಿಂದ ಪ್ರಾರ್ಥನೆ: ನಗರದ ಪಾಲಿಟೆಕ್ನಿಕ್‌ ಕಾಲೇಜು ಹಿಂಭಾಗದ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಭಾಗವಹಿಸಿ ಮುಸ್ಲಿಮರಿಗೆ ಶುಭ ಕೋರಿದರು.

ಪರಮ ಪವಿತ್ರವಾದ ರಂಜಾನ್‌ ಹಬ್ಬದಂದು ಎಲ್ಲರಿಗೂ ಶುಭವಾಗಲಿ. ಭಾವೈಕ್ಯತೆ, ಸಮೃದ್ಧಿ ನೆಲೆಸಲಿ ಎಂದು ಹಾರೈಸಿದರು. ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸುವ ಜೊತೆಗೆ ಧರ್ಮಗುರುಗಳಿಗೆ ಶಾಲು ಹೊದಿಸಿ, ಹಾರ ಹಾಕಿ ಅಭಿನಂದಿಸಿದರು. ಈದ್ಗಾ ಮೈದಾನದಲ್ಲಿ ಧರ್ಮ ಗುರುಗಳು ಎಲ್ಲರಿಗೂ ಉಪದೇಶ ನೀಡಿದರು. ಬೆಳಗ್ಗೆ 10 ಗಂಟೆಗೆ ಆರಂಭವಾದ ಪ್ರಾರ್ಥನೆ ಸುಮಾರು 1 ಗಂಟೆ ಕಾಲ ನಡೆಯಿತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ