ಪ್ರತಿಯೊಬ್ಬರೂ ಕನಕದಾಸರ ತತ್ವ, ಆದರ್ಶ ಪಾಲಿಸಿ

Team Udayavani, Nov 16, 2019, 3:00 AM IST

pratiyobbaru

ಗುಂಡ್ಲುಪೇಟೆ: ಸರ್ವ ಸಮುದಾಯದ ಭಕ್ತ ಶ್ರೇಷ್ಠ ಹಾಗೂ ಸಂತ ಶ್ರೇಷ್ಠ ಕನಕದಾಸರ ಸಾಮಾಜಿಕ ಕಳಕಳಿ ಇಂದಿಗೂ ಪ್ರಸ್ತುತವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಅವರ ತತ್ವ, ಆದರ್ಶಗಳನ್ನು ಪಾಲಿಸಬೇಕು ಎಂದು ಶಾಸಕ ಸಿ.ಎಸ್‌.ನಿರಂಜನ ಕುಮಾರ್‌ ಹೇಳಿದರು.

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆದ ಕನಕದಾಸ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿ, ಕನಕದಾಸರು ಸಮಾಜ ಸುಧಾರಕರಾಗಿದ್ದು, ಅವರ ಜೀವನದ ಪ್ರತಿಘಟ್ಟವೂ ಒಂದೊಂದು ತತ್ವಗಳನ್ನು ಆದರ್ಶಿಸುವ ಅಧ್ಯಾಯವಾಗಿದೆ. ಇಂತಹ ವ್ಯಕ್ತಿ ಒಂದು ವರ್ಗಕ್ಕೆ ಮಾತ್ರ ಸೀಮಿತವಾಗದೇ ಎಲ್ಲಾ ಸಮುದಾಯದವರಿಗೂ ಇವರು ಹಾಕಿಕೊಟ್ಟ ಮಾರ್ಗ ಬುನಾದಿಯಾಗಬೇಕು. ಸಮಾನತೆಯ ತಳಹದಿಯಲ್ಲಿನ ಇವರ ಮಾರ್ಗದರ್ಶನ ಅತ್ಯಂತ ಪ್ರಮುಖವಾಗಿದೆ ಎಂದರು.

ಸಾಮಾಜಿಕ ನ್ಯಾಯಕ್ಕಾಗಿ ಶ್ರಮ: ಸರ್ಕಾರವು ಸಮಾಜಿಕ ನ್ಯಾಯವನ್ನು ಒದಗಿಸುವ ದೃಷ್ಟಿಯಿಂದ ಈಗಾಗಲೇ ಎಲ್ಲಾ ಸಮುದಾಯಗಳ ಅಭಿವೃದ್ಧಿಗಾಗಿ ಅವಿರತವಾಗಿ ಶ್ರಮಿಸುತ್ತಿದೆ. ಆರೋಗ್ಯ ಶಿಕ್ಷಣ ಸೇರಿದಂತೆ ಮೂಲಸೌಕರ್ಯವನ್ನು ನೀಡುವಲ್ಲಿ ಎಲ್ಲಾ ವರ್ಗದವರ ಮೇಲೆ ಕಾಳಜಿಯನ್ನು ಇಟ್ಟು ದುಡಿಯುತ್ತಿದೆ ಎಂದು ಹೇಳಿದರು.

ಎಲ್ಲರೂ ಒಂದೇ: ಸಾಹಿತಿ ಕೆಂಪರಾಜು ಮಾತನಾಡಿ, ಕೇವಲ ಸಾಹಿತ್ಯದಿಂದ ಅಲ್ಲದೇ ವಿಶ್ವಕ್ಕೆ ಅದರ್ಶ ನೀಡುವ ಗುಂಪಿನಲ್ಲಿ ಕನಕದಾಸರು ಸೇರುತ್ತಾರೆ. ಅವರೊಬ್ಬ ಮಾನವತಾವಾದಿ ಅವರ ದಾಸ ಸಾಹಿತ್ಯದಲ್ಲಿಯೇ ಹೇಳುವಂತೆ ಎಲ್ಲರೂ ಒಂದೇ. ಎಲ್ಲರೂ ದೇವರನ್ನು ನಂಬಿ ಎಂದು ಜಗತ್ತಿಗೆ ಸಾರಿದರು. ಆ ಮೂಲಕ ಭಕ್ತಿಭಾವವನ್ನು ಜನರಲ್ಲಿ ತುಂಬುವಲ್ಲಿ ಯಶಸ್ಸು ಕೊಂಡರು ಎಂದು ಹೇಳಿ ಸಂತ ಶ್ರೇಷ್ಠ ಕನಕದಾಸರ ವಿಚಾರಧಾರೆಗಳನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕಾಗಿದೆ ಎಂದರು.

ದೇಶದಲ್ಲಿ ಹೆಚ್ಚುತ್ತಿದೆ ಜಾತಿಯತೆ: ದೇಶದಲ್ಲಿ ಜಾತಿಯತೆ ಹೆಚ್ಚುತ್ತಿದೆ. ಜಾತಿಗೊಂದು ಸಮಾಜ ನಿರ್ಮಾಣವಾಗುತ್ತಿದೆ. ಜಾತಿಯತೆಯ ಪ್ರಭಾವದಿಂದ ನಮ್ಮ ದೇಶ ಅಭಿವೃದ್ಧಿ ಅಸಾಧ್ಯ. ಇತರೇ ರಾಷ್ಟ್ರಗಳು ಸಾಮಾಜಿಕ ನ್ಯಾಯದಡಿ ಅಭಿವೃದ್ಧಿ ಸಾಧಿಸುತ್ತಿವೆ. ಅಸಮಾನತೆ ವಿರುದ್ಧ ಹೋರಾಡಿದ ದಾರ್ಶನಿಕರ ಪಟ್ಟಿಗೆ ಕನಕದಾಸರು ಸೇರುತ್ತಾರೆ. ಇವರು ದೇಶ ಕಂಡ ಹರಿಭಕ್ತರಲ್ಲಿ ಒಬ್ಬರಾಗಿದ್ದಾರೆ. ದೇಶದಲ್ಲಿ ತಾಂಡವವಾಡುತ್ತಿರುವ ಜಾತಿಯತೆಗೆ ಕನಕದಾಸರ ಕೀರ್ತನೆಗಳೇ ಅಸ್ತ್ರವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಾಪಂ ಅಧ್ಯಕ್ಷ ಸೋಮಹಳ್ಳಿ ಮಧುಶಂಕರ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಎಂ.ಮುನಿರಾಜು, ಮುಖಂಡರಾದ ಪಿ.ಚಂದ್ರಪ್ಪ, ಪಿ.ಬಿ.ರಾಜಶೇಖರ್‌, ತಾಪಂ ಮಾಜಿ ಅಧ್ಯಕ್ಷ ಎಚ್‌.ಎನ್‌.ಬಸವರಾಜು, ಪುರಸಭಾ ಮಾಜಿ ಸದಸ್ಯರಾದ ಹೊಸೂರು ಬಸವರಾಜು, ಜಿ.ಎಲ್‌.ರಾಜು, ತಹಶೀಲ್ದಾರ್‌ ನಂಜುಂಡಯ್ಯ ಹಾಜರಿದ್ದರು.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.