ಪ್ರತಿಯೊಬ್ಬರೂ ಸ್ಥಳೀಯ ಪ್ರದೇಶದ ಇತಿಹಾಸ ತಿಳಿಯಿರಿ

ವಿಚಾರ ಸಂಕಿರಣ ಆಯೋಜಿಸಿರುವುದು ಇದೇ ಪ್ರಥಮವಾಗಿದ್ದು ತುಂಬ ವಿಶೇಷವಾಗಿದೆ.

Team Udayavani, Jun 10, 2022, 6:06 PM IST

ಪ್ರತಿಯೊಬ್ಬರೂ ಸ್ಥಳೀಯ ಪ್ರದೇಶದ ಇತಿಹಾಸ ತಿಳಿಯಿರಿ

ಚಾಮರಾಜನಗರ: ಪ್ರತಿಯೊಬ್ಬರು ಸ್ಥಳೀಯ ಪ್ರದೇಶದ ಇತಿಹಾಸದ ಕುರಿತು ಚಾರಿತ್ರಿಕ ದಾಖಲೆಯ ಮಹತ್ವ ತಿಳಿದುಕೊಂಡಿರಬೇಕು ರಾಜ್ಯ ಪತ್ರಾಗಾರ ಇಲಾಖೆಯ ನಿರ್ದೇಶಕ ಡಾ. ಗವಿಸಿದ್ದಯ್ಯ ಸಲಹೆ ನೀಡಿದರು. ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್‌. ಪಟೇಲ್‌ ಸಭಾಂಗಣದಲ್ಲಿ, ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ ಹಾಗೂ ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಹಯೋಗಲ್ಲಿ ಗುರುವಾರ ನಡೆದ ಚಾರಿತ್ರಿಕ ದಾಖಲೆಗಳಲ್ಲಿ
ಚಾಮರಾಜನಗರ ಜಿಲ್ಲೆಯ ಇತಿಹಾಸ ವಿಷಯ ಕುರಿತ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಪತ್ರಾಗಾರವು ಸ್ಥಳೀಯ ಇತಿಹಾಸದ ಅಧಿಕೃತ ದಾಖಲೆಗಳನ್ನು ಸಂರಕ್ಷಿಸುತ್ತಾ ಬಂದಿದೆ. ತಮ್ಮ ಸ್ಥಳೀಯ ಪ್ರದೇಶದ ಹಿನ್ನಲೆಯನ್ನು ತಿಳಿದು ಕೊಳ್ಳುವುದು ಅತ್ಯಗತ್ಯವಾಗಿದೆ. ಇಂದಿನ ತಂತ್ರಜ್ಞಾನದಿಂದ ಮಾಹಿತಿಗಳನ್ನು ಇಲಾಖೆ ವೆಬ್‌ಸೈಟ್‌ಗಳಲ್ಲಿಯೂ ಸಹ ಅಳವಡಿಸಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಚಾಮರಾಜನಗರವು ಇತಿಹಾಸವುಳ್ಳ ಪ್ರದೇಶವಾಗಿದ್ದು ಹಲವಾರು ಕಡತಗಳು ಯಳಂದೂರು ಕಚೇರಿಯಲ್ಲಿ ಸಿಕ್ಕಿದ್ದು ಅವು ಮೋಡಿ ಲಿಪಿಯಲ್ಲಿವೆ. ಮೋಡಿ ಲಿಪಿಯನ್ನು ಓದುವವರ ಸಂಖ್ಯೆ ವಿರಳವಾಗಿದ್ದು ಭಾಷೆ ಕೊರತೆಯಿಂದ ಕೆಲವು ಕಡತಗಳ ಅನ್ವೇಷಣೆ ಆಗದೇ ಉಳಿದುಕೊಂಡಿವೆ. ಇದನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕಾಗಿದೆ. ಹಾಗಾಗಿ ಇತಿಹಾಸ ಸಂಶೋಧನೆ‌ ಮಾಡುವ ವಿದ್ಯಾರ್ಥಿಗಳು ಇಂತಹ ವಿಷಯ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಡಾ.
ಗವಿಸಿದ್ದಯ್ಯ ಸಲಹೆ ಮಾಡಿದರು.

ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಎಂ.ಆರ್‌. ಸುಮತಿ ಮಾತನಾಡಿ, ಜಿಲ್ಲೆಯ ಇತಿಹಾಸ ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣ ಆಯೋಜಿಸಿರುವುದು ಇದೇ ಪ್ರಥಮವಾಗಿದ್ದು ತುಂಬ ವಿಶೇಷ ವಾಗಿದೆ. ಜಿಲ್ಲೆಯ ಜನತೆ ಇಲ್ಲಿನ ನೆಲ, ಜಲ, ಇತಿಹಾಸವನ್ನು ತಿಳಿದು ಕೊಳ್ಳುವುದು ಕರ್ತವ್ಯವೆಂದೇ ಭಾವಿಸಬೇಕು ಎಂದರು.

ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಬಿ.ಆರ್‌. ಜಯಣ್ಣ ಮಾತನಾಡಿ ಇತಿಹಾಸದ ದಾಖಲೆ ಗಳನ್ನು ಸಂರಕ್ಷಿಸುವುದು ಪ್ರಮುಖವಾಗಿದೆ. ಇತಿಹಾಸದ ದಾಖಲೆಗಳಿಂದಲೇ ನಮ್ಮ ದೇಶದ ನಾಗರಿಕತೆ ಗಳು, ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಯಬಹುದು. ನಮ್ಮ ಜಿಲ್ಲೆಯ ಇತಿಹಾಸದಿಂದ ಜಿಲ್ಲೆ ಬೆಳೆದು ಬಂದ ದಾರಿ ತಿಳಿದುಕೊಳ್ಳಬಹುದು ಎಂದರು.

ಮೈಸೂರಿನ ಸಿದ್ದಾರ್ಥನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಬೇಬಿ ಬಿ. ಪ್ರೇಮಲತಾ, ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕ ಪೊ›. ಕೆ.ಸಿ. ವೀರಭದ್ರಯ್ಯ, ವಿಭಾಗೀಯ ಪತ್ರಾಗಾರ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ, ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಕಚೇರಿಯ ಸಹಾಯಕ ನಿರ್ದೇಶಕ ನಾಗೇಂದ್ರ ಪ್ರಸಾದ್‌, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಮಹದೇವ ಶಂಕನಪುರ ಇದ್ದರು.

ಟಾಪ್ ನ್ಯೂಸ್

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.