ಆಮಿಷಗಳಿಗೆ ಬಲಿಯಾಗದೆ ಮತ ಚಲಾಯಿಸಿ


Team Udayavani, Mar 22, 2019, 7:36 AM IST

amisha.jpg

ಸಂತೆಮರಹಳ್ಳಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪವಿತ್ರ ಕರ್ತವ್ಯವಾಗಿದೆ. ಪ್ರತಿಯೊಬ್ಬ ಭಾರತೀಯ ಪ್ರಜೆಯೂ ಕಡ್ಡಾಯವಾಗಿ ಮತದಾನ ಮಾಡುವುದು ಕರ್ತವ್ಯವಾಗಿದೆ. ಯಾವುದೇ ಆಸೆ- ಆಮಿಷಗಳಿಗೆ ಬಲಿಯಾಗದೆ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಮೀನುಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜಿ.ಎಚ್‌. ಮಂಜುನಾಥ್‌ ಹೇಳಿದರು.

ಯಳಂದೂರು ತಾಲೂಕಿನ ಯರಿಯೂರು ಕೆರೆ ಬಳಿಯ ಶನಿದೇವರ ದೇವಸ್ಥಾನದ ಬಳಿಯಲ್ಲಿ ಮೀನುಗಾರಿಕಾ ಇಲಾಖೆ, ಸ್ವೀಪ್‌ ಸಮಿತಿ ವತಿಯಿಂದ ಮೀನುಗಾರರಿಗೆ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಕ್ಕು ಚಲಾಯಿಸುವುದಕ್ಕೆ ಆಲಸ್ಯಬೇಡ: ದೇಶದ ಅಖಂಡತೆ ಹಾಗೂ ಏಕತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಮಹತ್ವದ ಪಾತ್ರ ವಹಿಸುತ್ತದೆ. ಇಲ್ಲಿ ಪ್ರಜೆಗಳೇ ಪ್ರಭುಗಳಾಗಿದ್ದು ನಾವು ಆರಿಸಿ ಕಳುಹಿಸುವ ಜನಪ್ರತಿನಿಧಿಗಳು ನಮ್ಮ ಸೇವೆ ಮಾಡುವ ಉದ್ದೇಶವನ್ನು ಹೊಂದಿರುತ್ತಾರೆ. ಇಂತಹ ಮಹತ್ವ ನಮ್ಮ ವ್ಯವಸ್ಥೆಯಲ್ಲಿದೆ. ಆದರೆ ಈ ಬಗ್ಗೆ ನಮ್ಮಲ್ಲಿ ಜಾಗೃತಿ ಕಡಿಮೆ ಇದೆ. ಹಾಗಾಗಿ ನಮ್ಮ ಹಕ್ಕನ್ನು ಚಲಾಯಿಸುವಲ್ಲಿ ಆಲಸ್ಯ ಇನ್ನೂ ಹೆಚ್ಚಾಗಿದೆ ಎಂದರು.

ಕಡ್ಡಾಯವಾಗಿ ಮತದಾನ ಮಾಡಿ: ಶೇ. 100ರಷ್ಟು ಮತದಾನ ನಡೆಯದಿರುವುದು ಇದಕ್ಕೆ ಸಾಕ್ಷಿಯಾಗಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಏಪ್ರಿಲ್‌ 18 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ಹಕ್ಕನ್ನು ಚಲಾಯಿ ಸಬೇಕು. ಆ ದಿನ ನಮ್ಮ ಕೆಲಸಕ್ಕೆ ಕೆಲವು ಸಮಯ ವಿರಾಮ ಹೇಳಿ ಮತದಾನ ಮಾಡುವುದೂ ಕೂಡ ನನ್ನ ಕರ್ತವ್ಯವೆಂದು ಅರಿತು. ತಪ್ಪದೇ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಿಳಿ ಹೇಳಿದರು.

5 ಮೀನುಗಾರರ ಸಂಘ: ಇದಕ್ಕೂ ಮುಂಚೆ ಚುನಾವಣೆಯ ಗೆಲುವಿಗಾಗಿ ಅಭ್ಯರ್ಥಿಗಳು ನೀಡುವ ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗಬಾರದು. ಇದನ್ನು ದಿಕ್ಕರಿಸುವ ಮನೋಭಾವನೆ ರೂಢಿಸಿಕೊಳ್ಳಬೇಕು. ತಾವೇ ಸ್ವಯಂ ಪ್ರೇರಿತರಾಗಿ ನಮ್ಮ ಕೆಲಸ ಮಾಡಬಲ್ಲ ಸೂಕ್ತ ಅಭ್ಯರ್ಥಿಗೆ ಮತ ನೀಡಬೇಕು.

ಮೀನುಗಾರಿಕಾ ಇಲಾಖೆ ವತಿಯಿಂದಲೂ ಮತದಾನದ ಬಗ್ಗೆ ಜಿಲ್ಲಾದ್ಯಂತ ಅರಿವು ಮೂಡಿಸುವ ಅನೇಕ ಕಾರ್ಯ ಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಯಳಂದೂರು ತಾಲೂಕಿನಲ್ಲಿ 5 ಮೀನುಗಾರ ಸಹಕಾರ ಸಂಘಗಳಿದ್ದು 1336 ಸದಸ್ಯರು ಇದ್ದಾರೆ. ಇವರೆಲ್ಲರಿಗೂ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದರು.

ಪ್ರತಿಜ್ಞಾ ವಿಧಿ ಬೋಧನೆ: ಮೀನುಗಾರಿಕಾ ಇಲಾಖೆಯ ವತಿಯಿಂದ ನೀಡಲಾಗುವ ಬೋಟ್‌ಗಳ ನಡುವೆ, ಬಲೆಗಳಲ್ಲಿಯೇ ಸ್ವೀಪ್‌ ಹಾಗೂ ಏಪ್ರಿಲ್‌ 18 ರಂದು ತಪ್ಪದೆ ಮತ ಚಾಲಾಯಿಸಿ ಎಂದು ಅಕ್ಷರಗಳನ್ನು ಜೋಡಿಸುವ ಮೂಲಕ ಮತದಾನ ಜಾಗೃತಿ ಮೂಡಿಸಿ, ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ನಂತರ ಇಲಾಖೆ ಅಧಿಕಾರಿಗಳು ಹಾಗೂ ಮೀನುಗಾರರು ಜಾಗೃತಿ ಜಾಥಾವನ್ನು ನಡೆಸಿದರು.

ಇಲಾಖೆ ಸಹಾಯಕ ನಿರ್ದೇಶಕರಾದ ಶ್ವೇತಾ, ಪ್ರಶಾಂತ್‌, ವಿವೇಕ್‌ ನೋಡಲ್‌ ಅಧಿಕಾರಿ ಸ್ನೇಹಾದರ್ಶನ್‌, ಕ್ಷೇತ್ರ ಪಾಲಕ ನಟರಾಜು, ನಂಜುಂಡ ಮೀನುಗಾರರ ಸಹಕಾರ ಸಂಘದ ಎಸ್‌.ಬಸವಶೆಟ್ಟಿ, ಕೆಸ್ತೂರು ಗುರು, ಅಗರ ಲಿಂಗರಾಜು, ಮಹದೇವಸ್ವಾಮಿ, ವೆಂಕಟರಂಗಶೆಟ್ಟಿ ಇತರರು ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.