ಚುನಾವಣಾಧಿಕಾರಿಗಳಿಗೆ ಕಿರುಪರೀಕ

Team Udayavani, Mar 21, 2019, 11:48 AM IST

ಚಾಮರಾಜನಗರ: ಯಾವುದೇ ಚುನಾವಣೆ ಯಶಸ್ಸು ಕಾಣಬೇಕಾದರೆ ಅಧಿಕಾರಿಗಳಿಗೆ ಸಮರ್ಪಕ ಹಾಗೂ ಪರಿಣಾಮಕಾರಿ ತರಬೇತಿ ಬಹಳ ಮುಖ್ಯವಾಗಿದೆ. ಚುನಾವಣೆ ಸುಗಮವಾಗಿ ನಡೆಯಲು ತರಬೇತಿ ಕಡ್ಡಾಯ ಎಂದು ಜಿಲ್ಲಾಧಿಕಾರಿ ಬಿ.ಬಿ ಕಾವೇರಿ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಚಾಮರಾಜನಗರ ಲೋಕಸಭಾ ಚುನಾವಣೆಯ ಕ್ಷೇತ್ರ ವ್ಯಾಪ್ತಿಗೆ ಬರುವ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ಮತ್ತು ಹನೂರು ವಿಧಾನ ಸಭಾ ಕ್ಷೇತ್ರಕ್ಕೆ ನಿಯೋಜಿತರಾಗಿರುವ ಜಿಲ್ಲಾ ಮಟ್ಟದ ಸೆಕ್ಟರ್‌ ಅಧಿಕಾರಿಗಳು ಮತ್ತು ಮಾಸ್ಟರ್‌ ಟ್ರೈನರ್‌ಗಳಿಗೆ ಹಮ್ಮಿ ಕೊಳ್ಳಲಾಗಿದ್ದ ತರಬೇತಿ, ಕಿರು ಪರೀಕ್ಷೆ ಕಾರ್ಯಾಗಾರದಲ್ಲಿ ಮಾತನಾಡಿದರು.

ಚುನಾವಣೆಯ ಕರ್ತವ್ಯ ಅತ್ಯಂತ ಜವಾಬ್ದಾರಿಯುತವಾಗಿದೆ. ಅಧಿಕಾರಿ ಗಳಿಗೆ ಮಾಹಿತಿಗಳ ಕೊರತೆ ಆಗಬಾರದು. ತರಬೇತಿಯನ್ನು ಲಘುವಾಗಿ ಪರಿಗಣಿ ಸದೇ, ಗಂಭೀರವಾಗಿ ತೆಗೆದುಕೊಂಡು ಅಧಿಕಾರಿಗಳು ತರಬೇತಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಎಲ್ಲಾ ಮಾಹಿತಿ ತಿಳಿದುಕೊಳ್ಳಬೇಕು. ನಿಮ್ಮ ಮೂಲಕ ಮುಕ್ತ ಶಾಂತಿಯುತ, ನ್ಯಾಯ ಸಮ್ಮತ ಚುನಾವಣೆ ನಡೆಯಲು ಇಂತಹ ತರಬೇತಿ ಸಹಾಯಕವಾಗಲಿದೆ ಎಂದರು. 

ಕಳೆದ ವಿಧಾನಸಭಾ ಚುನಾವಣೆಯು ಅತ್ಯಂತ ಯಶಸ್ವಿಯಾಗಿ ನಡೆದಿದೆ. ಈ ಬಾರಿಯೂ ಇದೇ ರೀತಿ ಹೆಚ್ಚಿನ ತರಬೇತಿ ಕಾರ್ಯಾಗಾರಗಳು ನಡೆದು ಜಿಲ್ಲೆಯಲ್ಲಿ ಯಶಸ್ವಿ ಮತದಾನವಾಗಲಿ ಎಂದು ಜಿಲ್ಲಾಧಿಕಾರಿ ತಿಳಿಸಿದರು. 

ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿ ಪ್ರೋ. ಕೃ.ಪ.ಗಣೇಶ್‌ ಮಾತನಾಡಿ, ಮತಗಟ್ಟೆ ಸಿಬ್ಬಂದಿಗೆ ತರಬೇತಿ ನೀಡುವ ಕುರಿತು ವಿವರವಾಗಿ ಅಧಿಕಾರಿಗಳಿಗೆ ತಿಳಿಸಿದರು. ಅಂಚೆ ಮತ ಪತ್ರ ಮತ್ತು ಇ.ಡಿ.ಸಿ ಜಿಲ್ಲಾ ಮಟ್ಟದ ನೋಡಲ್‌ ಅಧಿಕಾರಿ ವಿದ್ಯಾಯಿನಿ ಮಾತನಾಡಿ, ಅಂಚೆ ಮತ ಪತ್ರ ಮತ್ತು ಇ.ಡಿ.ಸಿ ಕುರಿತಂತೆ ವಿವರವಾಗಿ ತಿಳಿಸಿದರು. ಕರ್ತವ್ಯದಲ್ಲಿ ನಿರತರಾದ ಸಿಬ್ಬಂದಿವರ್ಗ ಇದರ ಪ್ರಯೋಜನ ಪಡೆಯಬೇಕು ಎಂದರು.

ಸಂಪನ್ಮೂಲ ವ್ಯಕ್ತಿಗಳಾದ ಪ್ರೋ. ಸವೀನ್‌ ವಿದ್ಯುನ್ಮಾನ ಮತಯಂತ್ರದ ಕುರಿತು ವಿವರವಾಗಿ ತಿಳಿಸಿ ಪ್ರಾತ್ಯಕ್ಷಕೆ ನಡೆಸಿಕೊಟ್ಟರು. ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಸಮ್ಮುಖದಲ್ಲಿ ಸೆಕ್ಟರ್‌ ಅಧಿಕಾರಿಗಳು ಮತ್ತು ಮಾಸ್ಟರ್‌ ಟ್ರೈನರ್‌ಗಳಿಗೆ ಕಿರುಪರೀಕ್ಷೆ ನಡೆಸಲಾಯಿತು. ನೋಡಲ್‌ ಅಧಿಕಾರಿ ವೃಷಭೇಂದ್ರ ಉಪಸ್ಥಿತರಿದ್ದರು.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬೆಂಗಳೂರು: ಶಿರಾಡಿ ಘಾಟಿ ರಸ್ತೆ ಅಭಿವೃದ್ಧಿಗೆ 4 ಸಾವಿರ ಕೋಟಿ ರೂ. ಯೋಜನೆಯ ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದ್ದು, ಕೇಂದ್ರದಿಂದ ಅನುಮೋದನೆ...

  • ಪುರಾಣದಲ್ಲಿ ಕಡುಕಷ್ಟ ಅನುಭವಿಸಿದ ಕೆಲವರ ಹೆಸರು ಚೆನ್ನಾಗಿದೆ ಎನಿಸಿದರೂ, ಅದನ್ನು ಮಗನಿಗೆ ಇಡುವುದು ಶೋಭೆಯಲ್ಲ ಅಂತ ಅನ್ನಿಸಿತು. ಕ್ಷ, ಶಿ, ಋ, ಕ್ರೂ, ಹ್ರಂ, ಹ್ರಿಂ...

  • ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ನಾಗರಿಕನು ಕಾನೂನಿನ ಅರಿವು ಹೊಂದಿರುವುದು ಅಗತ್ಯ. ಮಾನವ ಸಂಘಜೀವಿ ಆಗಿರುವವರೆಗೂ ಕಾನೂನು ಅಸ್ತಿತ್ವ ದಲ್ಲಿರುತ್ತದೆ....

  • ಅಡುಗೆಗೆ ಬಳಸುವ ಕಾಳು, ಹಿಟ್ಟು, ತಾಜಾ ತರಕಾರಿ, ಸೊಪ್ಪು, ಉಪ್ಪು, ಹಣ್ಣು... ಇವನ್ನೆಲ್ಲ ಇಡುವುದೇ ಪ್ಲಾಸ್ಟಿಕ್‌ಡಬ್ಬಿಗಳಲ್ಲಿ/ ಕವರ್‌ಗಳಲ್ಲಿ. ಹೀಗೆ ಮಾಡುವ ಮೂಲಕ,...

  • ಹೊಸದಿಲ್ಲಿ: ಸೇನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದೇಶೀ ಶಸ್ತ್ರಾಸ್ತ್ರಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ಸೇನಾಪಡೆ ಮುಖ್ಯಸ್ಥ ಜ| ಬಿಪಿನ್‌ ರಾವತ್‌ ಮಾತನಾಡಿದ್ದಾರೆ....