ಕಾಂಗ್ರೆಸ್‌ ಸದಸ್ಯರಿಂದ ಸಾಮಾನ್ಯ ಸಭೆ ಬಹಿಷ್ಕಾರ


Team Udayavani, Feb 13, 2020, 3:00 AM IST

congress-sa

ಚಾಮರಾಜನಗರ: ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಶಿವಮ್ಮ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ, ಆಡಳಿತಾರೂಢ ಕಾಂಗ್ರೆಸ್‌ ಸದಸ್ಯರೇ ಸಾಮಾನ್ಯ ಸಭೆ ಬಹಿಷ್ಕರಿಸಿ, ಸಭಾಂಗಣದ ಹೊರಗೆ ಪ್ರತಿಭಟನೆ ನಡೆಸಿದ ಪ್ರಸಂಗ ಬುಧವಾರ ನಡೆಯಿತು.

ಶಿವಮ್ಮ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಜಿಲ್ಲಾ ಪಂಚಾಯ್ತಿ ಸಾಮಾನ್ಯ ಸಭೆ ಕರೆಯಲಾಗಿತ್ತು. ಬೆಳಗ್ಗೆ 11 ಗಂಟೆಗೆ ಜಿಪಂ ಸಭಾಂಗಣದಲ್ಲಿ ಜಿಪಂ ಸಾಮಾನ್ಯ ಸಭೆ ಆರಂಭವಾಯಿತು. ಅಧ್ಯಕ್ಷೆ ಶಿವಮ್ಮ, ಪ್ರತಿಪಕ್ಷದ ಬಿಜೆಪಿಯ ಸದಸ್ಯರು, ಸಿಇಒ ಬಿ.ಎಚ್‌. ನಾರಾಯಣರಾವ್‌ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಗೆ ಹಾಜರಾಗಿದ್ದರು.

ಅಧ್ಯಕ್ಷರ ವಿರುದ್ಧ ಘೋಷಣೆ: ಆಂತರಿಕ ಒಪ್ಪಂದದಂತೆ ಅಧ್ಯಕ್ಷ ಸ್ಥಾನ ಬಿಡಬೇಕಾಗಿದ್ದ ಶಿವಮ್ಮ ರಾಜೀನಾಮೆ ನೀಡದ್ದರಿಂದ ಅಸಮಾಧಾನಗೊಂಡಿರುವ ಆಡಳಿತಾರೂಢ ಕಾಂಗ್ರೆಸ್‌ನ 12 ಸದಸ್ಯರು ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿ ಸಭಾಂಗಣದ ಹೊರಗೆ ಧರಣಿ ನಡೆಸಿದರು. ಅಧ್ಯಕ್ಷರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಅಧಿಕಾರದಲ್ಲಿ ಮುಂದುವರಿಯುವುದು ಸರಿಯಲ್ಲ: ಜಿಪಂ ಸದಸ್ಯ ಜೆ.ಯೋಗೇಶ್‌ ಮಾತನಾಡಿ, ಪಕ್ಷದ ಆಂತರಿಕ ಒಪ್ಪಂದದಂತೆ ಅಧ್ಯಕ್ಷರು ಕಳೆದ ನವೆಂಬರ್‌ನಲ್ಲೇ ರಾಜೀನಾಮೆ ನೀಡಬೇಕಿತ್ತು. ಅವರು ತಮ್ಮ ವೈಯಕ್ತಿಕ ಕಾರಣಗಳನ್ನು ಮುಂದಿಟ್ಟುಕೊಂಡು ರಾಜೀನಾಮೆ ನೀಡದೆ ಅಧಿಕಾರದಲ್ಲಿ ಮುಂದುವರಿದಿದ್ದಾರೆ. ಮಾಜಿ ಸಂಸದರು, ಇಬ್ಬರು ಶಾಸಕರು, ಪಕ್ಷದ ಜಿಲ್ಲಾ ನಾಯಕರು ಸೂಚಿಸಿದ ಹಿನ್ನೆಲೆಯಲ್ಲಿ ತಿಂಗಳ ಹಿಂದೆ ರಾಜೀನಾಮೆ ನೀಡಿ ಮತ್ತೆ ವಾಪಸ್‌ ಪಡೆದು ಅಧಿಕಾರದಲ್ಲಿ ಮುಂದುವರಿಯುತ್ತಿದ್ದಾರೆ. ಇದು ಸರಿಯಲ್ಲ ಎಂದು ಆರೋಪಿಸಿದರು.

ಈಗ ಪಕ್ಷ ನಿಷ್ಠೆ ತೋರುತ್ತಿಲ್ಲ:
ಶಿವಮ್ಮ ಅವರು ಕಾಂಗ್ರೆಸ್‌ ಪಕ್ಷದಿಂದ ಅಧ್ಯಕ್ಷರಾದರು. ಈಗ ಪಕ್ಷ ನಿಷ್ಠೆ ತೋರುತ್ತಿಲ್ಲ. ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಪಕ್ಷ ಹಾಗೂ ಜಿಪಂ ಬಗ್ಗೆ ಗೌರವವಿದ್ದರೆ ಕೂಡಲೇ ರಾಜೀನಾಮೆ ನೀಡಬೇಕು. ಶಿವಮ್ಮ ಅವರು ವೈಯಕ್ತಿಕ ಕೆಲಸಕ್ಕೆ ಸರ್ಕಾರಿ ಕಾರನ್ನು ಬಳಕೆ ಮಾಡಿದ್ದಾಗ ಅದು ಅಪಘಾತಕ್ಕೆ ಈಡಾಗಿ ಜಖಂಗೊಂಡಿದೆ. 18 ತಿಂಗಳಿನಿಂದ ಕಾರು ಗ್ಯಾರೇಜಿನಲ್ಲಿ ನಿಂತಿದ್ದು, ದುರಸ್ತಿ ವೆಚ್ಚವನ್ನು ಅವರಿಂದಲೇ ವಸೂಲಿ ಮಾಡಬೇಕು. ಅವರಿಂದ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.

ಕೋರಂ ಅಭಾವದಿಂದ ಸಭೆ ಮುಂದೂಡಿಕೆ: ಸದಸ್ಯರು ಸಭೆಯಿಂದ ಹೊರಗುಳಿದ ಕಾರಣ ಅತ್ತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಾರಾಯಣರಾವ್‌ ಅವರು ಕೋರಂ ಅಭಾವದಿಂದ ಸಭೆ ಮುಂದೂಡಲಾಗಿದೆ ಎಂದು ತಿಳಿಸಿದರು. ಅಧ್ಯಕ್ಷೆ ಶಿವಮ್ಮ ಅವರು ಸಭಾಂಗಣದಿಂದ ಹೊರ ಬರುತ್ತಿದ್ದಾಗ ಸದಸ್ಯೆ ಅಶ್ವಿ‌ನಿ ಅವರು ಅಧ್ಯಕ್ಷರನ್ನು ನಿಂದಿಸಿದರು. ಅಧ್ಯಕ್ಷರು ಸಹ ತಿರುಗಿ ಮಾತನಾಡಿದರು. ಕೂಡಲೇ ಮಧ್ಯ ಪ್ರವೇಶಿಸಿದ ಕೃಷ್ಣ ಅವರು, ತಮ್ಮ ಪತ್ನಿ ಶಿವಮ್ಮ ಅವರನ್ನು ಕರೆದೊಯ್ದರು. ಕಾಂಗ್ರೆಸ್‌ ಮುಖಂಡ ಸೋಮಲಿಂಗಪ್ಪ ಸದಸ್ಯರನ್ನು ಸಮಾಧಾನ ಪಡಿಸಿದರು.

3 ತಿಂಗಳಿಂದ ರಾಜೀನಾಮೆಗೆ ಒತ್ತಾಯ: ತಮ್ಮ ಕಚೇರಿಯತ್ತ ತೆರಳಿದ ಅಧ್ಯಕ್ಷರ ವಿರುದ್ಧ ಸದಸ್ಯರು ಘೋಷಣೆಗಳನ್ನು ಕೂಗುತ್ತ ಅವರನ್ನು ಹಿಂಬಾಲಿಸಿದರು. ಶಿವಮ್ಮ ನಂತರ ಆಧ್ಯಕ್ಷೆಯಾಗಬೇಕಿದ್ದ ತೆರಕಣಾಂಬಿ ಸದಸ್ಯೆ ಅಶ್ವಿ‌ನಿ ಅವರು ತೀವ್ರ ಆಕ್ರೋಶಭರಿತರಾಗಿ ಥೂ, ಥೂ ಎಂದು ಛೀಮಾರಿ ಹಾಕಿದ ಪ್ರಸಂಗವೂ ನಡೆಯಿತು. ಅಧ್ಯಕ್ಷರು ತಮ್ಮ ಕಚೇರಿಯೊಳಗೆ ಪ್ರವೇಶಿಸುತ್ತಿಂತೆ ಬಾಗಿಲು ಹಾಕಿ ದಿಗ್ಬಂಧನ ವಿಧಿಸಿ ಸದಸ್ಯರು ಧರಣಿ ಕುಳಿತರು.

ರಾಜೀನಾಮೆ ನೀಡುವಂತೆ 3 ತಿಂಗಳಿಂದಲೂ ಒತ್ತಾಯ ಮಾಡುತ್ತಿರೂ ಸುಮ್ಮನಿದ್ದಾರೆ. ಈಚೆಗೆ ಜಿಪಂಗೆ ಸರ್ಕಾರ ಒಂದು ಕೋಟಿ ರೂ. ಅನುದಾನ ಬಂದಿದೆ. ತಮ್ಮ ವಿವೇಚನಾಧಿಕಾರ ಬಳಸಿ ತಮ್ಮ ಕ್ಷೇತ್ರಕ್ಕೆ 65 ಲಕ್ಷ ರೂ. ಬಳಸಲು ಮುಂದಾಗಿದ್ದಾರೆ. ಇದು ಸರಿಯಾದ ನಡೆಯಲ್ಲ ಎಂದು ಕಿಡಿಕಾರಿದರು.

ಕಾರಿನ ದುರಸ್ತಿ ವೆಚ್ಚ ವಸೂಲಿ ಮಾಡಿ: ಜಿಲ್ಲಾ ಪಂಚಾಯ್ತಿ ಇತಿಹಾಸದಲ್ಲೇ ಇಂತಹ ಅಧ್ಯಕ್ಷರನ್ನು ಕಾಂಗ್ರೆಸ್‌ ಕಂಡಿಲ್ಲ. ಕಾರು ಅಪಘಾತದ ಹಿನ್ನೆಲೆಯಲ್ಲಿ ತಡೆಹಿಡಿದ ಗೌರವಧನ, ಭತ್ಯೆ ಬಾಬ್ತು 6.45 ಲಕ್ಷ ರೂ. ಬಿಡುಗಡೆ ಆಗಿದೆ. ಅಪಘಾತಕ್ಕೆ ಈಡಾದ ಕಾರಿನ ದುರಸ್ತಿ ವೆಚ್ಚವನ್ನು ಅವರಿಂದಲೇ ವಸೂಲಿ ಮಾಡಬೇಕು ಎಂದು ಪಟ್ಟು ಹಿಡಿದು ಧರಣಿ ಮುಂದುವರಿಸಿದರು.

ವರದಿ ಸರ್ಕಾರಕ್ಕೆ ಸಲ್ಲಿಸಿ: ಸ್ಥಳಕ್ಕೆ ಆಗಮಿಸಿದ ಸಿಇಒ ಬಿ.ಎಚ್‌. ನಾರಾಯಣರಾವ್‌ ಅವರನ್ನು ಉದ್ದೇಶಿಸಿ ಮಾತನಾಡಿದ ಸದಸ್ಯರು, ಈ ಎಲ್ಲ ಘಟನಾವಳಿಗಳ ಬಗ್ಗೆ ವರದಿಯನ್ನು ತಯಾರಿಸಿ ಸರ್ಕಾರಕ್ಕೆ ಸಲ್ಲಿಸಬೇಕು. ಸ್ಥಾಯಿ ಸಮಿತಿ ಸದಸ್ಯರ ಗಮನಕ್ಕೆ ತಂದು ಮುಂದಿನ ಸಭೆ ನಡೆಸಬೇಕು ಎಂದು ತಿಳಿಸಿದರು. ಇದಕ್ಕೆ ಸಿಇಒ ಅವರು ಒಪ್ಪಿದ ನಂತರ ಸದಸ್ಯರ ಧರಣಿ ಅಂತ್ಯಗೊಳಿಸಿದರು. ಧರಣಿಯಲ್ಲಿ ಜಿಪಂ ಉಪಾಧ್ಯಕ್ಷ ಕೆ.ಎಸ್‌.ಮಹೇಶ್‌, ಸದಸ್ಯರಾದ ಬರಗಿ ಚೆನ್ನಪ್ಪ, ಬೊಮ್ಮಯ್ಯ, ರಮೇಶ್‌, ಕೆರೆಹಳ್ಳಿ ನವೀನ್‌, ಬಸವರಾಜು, ಶಶಿಕಲಾ, ಉಮಾವತಿ, ಲೇಖಾ, ಮರಗತಮಣಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.