ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು

Team Udayavani, Oct 1, 2019, 3:00 AM IST

ಸಂತೆಮರಹಳ್ಳಿ: ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ 1.30 ರೂ. ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಾಸಕ ಎನ್‌. ಮಹೇಶ್‌ ಸೋಮವಾರ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹೋಬಳಿ ವ್ಯಾಪ್ತಿಯ ಸುತ್ತೂರು, ಚಾಟೀಪುರ, ಮಸಣಾಪುರ, ಸಂತೆಮರಹಳ್ಳಿ, ಕಮವಾಡಿ ಗ್ರಾಮಗಳಲ್ಲಿ ಒಟ್ಟು 5 ಕಾಮಗಾರಿಗಳಿಗೆ 1.30 ರೂ. ಕೋಟಿ ವೆಚ್ಚದಲ್ಲಿ ಕಾಮಗಾರಿಗಳು ನಡೆಯಲಿವೆ ಎಂದರು.

ಕಾಮಗಾರಿಗಳ ಬಗ್ಗೆ ಮಾಹಿತಿ: ಸೂತ್ತೂರು ಗ್ರಾಮದಲ್ಲಿ ವಿಶೇಷ ಘಟಕ ಯೋಜನೆಯಡಿಯಲ್ಲಿ 15 ಲಕ್ಷ ರೂ. ವೆಚ್ಚದ ರಸ್ತೆ ಅಭಿವೃದ್ಧಿ, ಮಸಣಾಪುರ ಗ್ರಾಮದಲ್ಲಿ ಬುಡಕಟ್ಟು ಉಪಯೋಜನೆಯಡಿಯಲ್ಲಿ 15 ಲಕ್ಷ ರೂ. ವೆಚ್ಚದ ರಸ್ತೆ ಅಭಿವೃದ್ಧಿ, ಚಾಟೀಪುರ ಗ್ರಾಮದ ಶಾಲಾ ಕಟ್ಟಡಕ್ಕೆ 10.46 ಲಕ್ಷ ರೂ. ವೆಚ್ಚದಲ್ಲಿ ಕೊಠಡಿ ನಿರ್ಮಾಣ, ಸಂತೆಮರಹಳ್ಳಿ ಗ್ರಾಮದ ಆದಿಜಾಂಬವರ ಬೀದಿಯ ರಸ್ತೆ ಅಭಿವೃದ್ಧಿಗೆ ಎಸ್‌ಇಪಿ ಯೋಜನೆಯಡಿಯಲ್ಲಿ 70 ಲಕ್ಷ ರೂ. ಕಮರವಾಡಿ ಗ್ರಾಮದ ರಸ್ತೆ ಅಭಿವೃದ್ಧಿಗೆ 15 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿಗಳು ನಡೆಯಲಿದೆ ಎಂದು ಮಾಹಿತಿ ನೀಡಿದರು.

ಅರ್ಹ ಫ‌ಲಾನುಭವಿಗಳಿಗೆ ವಸತಿ: ಈ ಭಾಗದ ಸಾರ್ವಜನಿಕರ ಬಹುದಿನಗಳ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಇದರ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ. ಇದರೊಂದಿಗೆ ಕೆಲ ಗ್ರಾಮಗಳಲ್ಲಿ ವಸತಿ ಯೋಜನೆಯಡಿಯಲ್ಲಿ ಅನೇಕರು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಆದ್ಯತೆ ಮೇರೆಗೆ ಅವರಿಗೆ ಸೂರು ಒದಗಿಸುವುದಾಗಿ ಭರವಸೆ ನೀಡಿದರು.

ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ: ಗ್ರಾಮಗಳಲ್ಲಿ ರಸ್ತೆ, ಚರಂಡಿ ಕಾಮಗಾರಿಗಳು ನಡೆಯುವಾಗ ಸಣ್ಣಪುಟ್ಟ ವ್ಯತ್ಯಾಸಗಳು ಬರುತ್ತವೆ. ಹಾಗಾಗಿ ಸಂಬಂಧಪಟ್ಟ ಇಲಾಖೆಯ ಜೆಇಗಳು ಸ್ಥಳದಲ್ಲೇ ಹಾಜರಿರಬೇಕು. ಗುತ್ತಿಗೆದಾರರೂ ಸಹ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಮುಖಂಡರ ವಿಶ್ವಾಸ ಪಡೆದುಕೊಂಡು ಗುಣಮಟ್ಟದ ಕಾಮಗಾರಿ ಮುಗಿಸಬೇಕು ಎಂದು ಸಲಹೆ ನೀಡಿದರು.

ತಾಪಂ ಸದಸ್ಯರಾದ ಶಿವಮ್ಮ ಅಶೋಕ್‌, ರವೀಶ್‌, ಗ್ರಾಪಂ ಅಧ್ಯಕ್ಷ ನಾಗರಾಜು, ಸದಸ್ಯರಾದ ರಾಜು, ಜಯಶಂಕರ ಗುತ್ತಿಗೆದಾರರಾದ ಕುಮಾರ್‌, ಮಹದೇವಪ್ಪ, ಮಲ್ಲಿಕಾರ್ಜುನಪ್ಪ, ಚಿನ್ನಸ್ವಾಮಿ, ಸತೀಶ, ಉಮ್ಮತ್ತೂರು ಸೋಮಣ್ಣ ಮಂಗಲ ಬಸವಣ್ಣ ಇತರರು ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ