ಬೈಕ್ ಗಳ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಓರ್ವನ ಸ್ಥಿತಿ ಗಂಭೀರ
Team Udayavani, Dec 14, 2022, 8:22 PM IST
ಗುಂಡ್ಲುಪೇಟೆ(ಚಾಮರಾಜನಗರ): ಎರಡು ಬೈಕ್ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಟ್ಟಣದ ಹೊರವಲಯದ ಸೆಂಟ್ ಜಾನ್ಸ್ ಶಾಲೆಯ ಬಳಿ ನಡೆದಿದೆ.
ಜಕ್ಕಹಳ್ಳಿ ಗ್ರಾಮದ ಚಂದ್ರು(32), ಲಕ್ಕೂರು ಗ್ರಾಮದ ಅನಿಲ್(26) ಮೃತ ವ್ಯಕ್ತಿಗಳಾಗಿದ್ದು, ಬೈಕ್ನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು ಅವರನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಎರಡು ಬೈಕ್ ಸವಾರರು ಅತೀ ವೇಗದಿಂದ ಬಂದ ಪರಿಣಾಮ ಮುಖಾಮುಖಿ ಢಿಕ್ಕಿ ಸಂಭವಿಸಿದೆ ಎನ್ನಲಾಗಿದೆ.
ಘಟನೆ ನಂತರ ಗುಂಡ್ಲುಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮೃತ ದೇಹಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದು, ಬೈಕ್ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಬಿಲ್ಕಿಸ್ ಬಾನೋ ಪ್ರಕರಣ: ವಕೀಲರಿಗೆ ಸುಪ್ರೀಂಕೋರ್ಟ್ ತರಾಟೆ