ಗುಂಡ್ಲುಪೇಟೆ: ಸ್ನೇಹಿತರಿಗೆ ದೂರವಾಣಿ ಕರೆ ಮಾಡಿ ಕೆರೆಗೆ ಹಾರಿ ಯುವಕ ಆತ್ಮಹತ್ಯೆ
Team Udayavani, Dec 3, 2022, 7:32 PM IST
ಗುಂಡ್ಲುಪೇಟೆ(ಚಾಮರಾಜನಗರ): ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಶಿವಪುರ ಕಲ್ಲುಕಟ್ಟೆ ಜಲಾಶಯದಲ್ಲಿ ಶನಿವಾರ ಸಂಜೆ ನಡೆದಿದೆ.
ಅಣ್ಣೂರುಕೇರಿ ಗ್ರಾಮದ ಯುವಕ ಮಾಧು(20) ಆತ್ಮಹತ್ಯೆ ಮಾಡಿಕೊಂಡ ಯುವಕ. ಸ್ನೇಹಿತರಿಗೆ ದೂರವಾಣಿ ಕರೆ ಮಾಡಿ ಕೆರೆಗೆ ಬಿದ್ದು ಸಾಯುತ್ತಿದ್ದೇನೆ ಎಂದು ಕೆರೆಗೆ ಹಾರಿದ್ದಾನೆ ಎನ್ನಲಾಗುತ್ತಿದೆ. ಮೊಬೈಲ್ ಕಲ್ಲುಕಟ್ಟೆ ಜಲಾಶಯದ ಏರಿ ಮೇಲೆ ಬಿದ್ದಿದೆ ಎಂದು ತಿಳಿದು ಬಂದಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿ, ನಂತರ ಅಗ್ನಿ ಶಾಮಕ ದಳದ ಸಿಬ್ಬಂದಿಯನ್ನು ಬರಮಾಡಿಕೊಂಡು ಶವ ಮೇಲೆತ್ತಿದ್ದಾರೆ. ಈ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಎಮಾ೯ಯಿ ಫಾಲ್ಸ್ ನಲ್ಲಿ ಸ್ನಾನಕ್ಕೆ ಇಳಿದಿದ್ದ ವಿದ್ಯಾಥಿ೯ ನೀರಿನಲ್ಲಿ ಮುಳುಗಿ ಸಾವು