ಗುಂಡ್ಲುಪೇಟೆ: ಬೈಕ್‍ಗಳ ನಡುವೆ ಮುಖಾಮುಖಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ
Team Udayavani, May 29, 2022, 4:34 PM IST
ಗುಂಡ್ಲುಪೇಟೆ(ಚಾಮರಾಜನಗರ): ಎರಡು ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಮೈಸೂರು-ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿಯ ಚಿಕ್ಕಾಟಿ ಗೇಟ್ ಬಳಿ ನಡೆದಿದೆ.
ಚಿಕ್ಕಾಟಿ ಗ್ರಾಮದ ಕುಮಾರಸ್ವಾಮಿ (55) ಸ್ಥಳದಲ್ಲೇ ಸಾವನ್ನಪ್ಪಿರುವ ವ್ಯಕ್ತಿ. ಮಲಿಯೂರು ಗ್ರಾಮದ ಗಿರೀಶ್(42) ತೀವ್ರ ಗಾಯಗೊಂಡಿದ್ದು, ಬೇಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಚಿಕ್ಕಾಟಿ ಗ್ರಾಮದ ಕುಮಾರಸ್ವಾಮಿ ಬೇಗೂರಿನಲ್ಲಿ ಮನೆಗೆ ಸಾಮಾನು ತೆಗೆದುಕೊಂಡು ತೆರಳುತ್ತಿದ್ದ ವೇಳೆ ನಂಜನಗೂಡಿನ ಕಡೆಯಿಂದ ವೇಗವಾಗಿ ಬರುತ್ತಿದ್ದ ಗಿರೀಶ್ ಎಂಬುವವರ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ವೇಳೆ ಕುಮಾರಸ್ವಾಮಿ ಸ್ಥಳದಲ್ಲೆ ಸಾವನ್ನಪ್ಪಿದ್ಧಾರೆ. ಅತೀ ವೇಗವೇ ಅಪಘಾತಕ್ಕೆ ಕಾರಣವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಕುಮಾರಸ್ವಾಮಿ ಮೃತ ದೇಹವನ್ನು ಬೇಗೂರಿನ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನೆ ಕುರಿತು ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಐಪಿಎಲ್ ಫೈನಲ್: ಯಾವ ತಂಡಕ್ಕೆ ಎಷ್ಟು ಹಣ ಸಿಗಲಿದೆ? ಆರ್ ಸಿಬಿಗೆ ಸಿಗುವ ಮೊತ್ತವೆಷ್ಟು?
ಚತುಸ್ಪಥ ರಸ್ತೆ ನಿರ್ಮಾಣಕ್ಕೆ ಒತ್ತಾಯ : ಗುಂಡ್ಲುಪೇಟೆ ತಾಲೂಕು ಕೇರಳ, ತಮಿಳುನಾಡು ರಾಜ್ಯದ ಗಡಿ ಹಂಚಿಕೊಂಡಿರುವ ಹಿನ್ನಲೆ ಮೈಸೂರು-ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗಿದೆ. ಜೊತೆಗೆ ಅತೀವೇಗ, ರಸ್ತೆ ದಿಬ್ಬ, ಮಾರ್ಗಸೂಚಿ ನಾಮಫಲಕ ಅಳವಡಿಕೆ ಮಾಡದ ಕಾರಣ ಅಪಘಾತ ಪ್ರಕರಣಗಳು ಅಧಿಕವಾಗುತ್ತಿದೆ. ಈ ಬಗ್ಗೆ ಸ್ಥಳೀಯ ಶಾಸಕ ಸಿ.ಎಸ್.ನಿರಂಜನಕುಮಾರ್ ಹಾಗು ಉಸ್ತುವಾರಿ ಸಚಿವ ವಿ.ಸೋಮಣ್ಣ ಚತುಸ್ಪಥ ರಸ್ತೆ ನಿರ್ಮಾಣ ಮಾಡಲು ಮುಂದಾಗಬೇಕೆಂದು ವಾಹನ ಸವಾರರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಈಶ್ವರಪ್ಪನವರ ಬಾಯಿ ಬಡಕುತನದಿಂದಲೇ ಸಚಿವ ಸ್ಥಾನ ಹೋಗಿರುವುದು: ಪ್ರಿಯಾಂಕ್ ಖರ್ಗೆ
ತಮ್ಮ ಮಟ್ಟ ತಾವೇ ಇಳಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ: ಅಶ್ವತ್ಥನಾರಾಯಣ್ ವಾಗ್ದಾಳಿ
ಬಿಜೆಪಿಯಿಂದ ನ್ಯಾಯಾಂಗದ ಮೇಲೆ ಆಕ್ರಮಣ ನಡೆಯುತ್ತಿದೆ: ಅಭಿಷೇಕ್ ಮನು ಸಿಂಘ್ವಿ
ಬಕ್ರೀದ್ ಹಬ್ಬಕ್ಕೆ ಗೋವುಗಳ ಬಲಿ ಬೇಡ: ಸಚಿವ ಪ್ರಭು ಚವ್ಹಾಣ್
ದೀಪ ಆರುವ ಮುನ್ನ ಜೋರಾಗಿ ಕೂಗಾಡುತ್ತದಂತೆ: ಕಾಂಗ್ರೆಸ್ ವಿರುದ್ಧ ಈಶ್ವರಪ್ಪ ವಾಗ್ದಾಳಿ