ಹನೂರು ಪಟ್ಟಣ ಪಂಚಾಯ್ತಿ : ಜೆಡಿಎಸ್‌ಗೆ ಹೆಚ್ಚು ಸ್ಥಾನವಿದ್ದರೂ ಅಧಿಕಾರ ಡೌಟು

Team Udayavani, Oct 11, 2020, 3:05 PM IST

cn-tdy-4

ಹನೂರು: ಹನೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ಬಿ ಮೀಸಲಾಗಿದೆ.

13 ಸದಸ್ಯ ಬಲದ ಪಟ್ಟಣ ಪಂಚಾಯಿತಿಗೆ 2019ರ ಮೇ ತಿಂಗಳಿನಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್‌ 6 ಸ್ಥಾನ, ಕಾಂಗ್ರೆಸ್‌ 4 ಸ್ಥಾನ ಹಾಗೂ ಬಿಜೆಪಿ 3 ಸ್ಥಾನ ಗೆದ್ದಿತ್ತು. ಅಧಿಕಾರದ ಚುಕ್ಕಾಣಿ ಹಿಡಿಯಲು 7 ಸ್ಥಾನಗಳ ಅವಶ್ಯಕತೆಯಿದೆ. ಆದರೆ, ಅತಂತ್ರ ಫ‌ಲಿತಾಂಶ ಬಂದಿರುವುದರಿಂದ ಮೈತ್ರಿಮಾಡಿಕೊಂಡು ಆಡಳಿತ ನಡೆಸುವುದು ಅನಿವಾರ್ಯತೆ ಆಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್‌ ಹೊಂದಾಣಿಕೆ ಮಾಡಿಕೊಂಡು ಪಪಂ ಅಧಿಕಾರ ಹಿಡಿಯುವ ಸಾಧ್ಯತೆ ಇದೆ. ಹೆಚ್ಚು ಸ್ಥಾನಗಳೊಂದಿಗೆ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಜೆಡಿಎಸ್‌ಗೆ ಅಧಿಕಾರ ಸಿಗುವುದುಕಷ್ಟವಿದೆ. ಮೂವರು ಸದಸ್ಯರನ್ನು ಹೊಂದಿದ್ದ ಬಿಜೆಪಿಯಲ್ಲಿ ಓರ್ವ ಸದಸ್ಯರು ಕೊರೊನಾಗೆ ಬಲಿಯಾದ ಕಾರಣ ಪಪಂನಲ್ಲಿ 12 ಸದಸ್ಯರು ಮಾತ್ರವಿದ್ದು, ಮತ್ತೂಂದು ಸ್ಥಾನಕ್ಕೆ ಉಪಚುನಾವಣೆ ಎದುರಾಗಲಿದೆ.

ಮೀಸಲಾತಿ ಗೊಂದಲ: ಇದೀಗ ಪ್ರಕಟಗೊಂಡಿರುವ ಮೀಸಲಾತಿಯಲ್ಲಿ ಅಧ್ಯಕ್ಷ ಹುದ್ದೆ ಸಾಮಾನ್ಯ ಮಹಿಳೆಗೆ ಲಭಿಸಿದ್ದು, ಕಾಂಗ್ರೆಸ್‌ನಿಂದ ಯಾವ ಮಹಿಳಾ ಸದಸ್ಯರು ಆಯ್ಕೆಯಾಗಿಲ್ಲ. ಹೀಗಾಗಿ ಅಧ್ಯಕ್ಷ ಹುದ್ದೆಯು ಬಿಜೆಪಿ ಅಥವಾ ಜೆಡಿಎಸ್‌ ಪಾಲಾಗಲಿದೆ. ಇನ್ನು ಉಪಾಧ್ಯಕ್ಷ ಹುದ್ದೆ ಹಿಂದುಳಿದ ವರ್ಗ ಬಿ ಮೀಸಲಾಗಿದ್ದು,ಈವರ್ಗಕ್ಕೆ ಸೇರಿರುವ ಯಾವ ಸದಸ್ಯರೂ ಇಲ್ಲ. ಒಟ್ಟಾರೆ ಹನೂರು ಪಟ್ಟಣಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆಬಿಜೆಪಿಯಿಂದ ಇಬ್ಬರು ಸದಸ್ಯರು, ಜೆಡಿಎಸ್‌ನಿಂದ3ಸದಸ್ಯರು ಅರ್ಹರಾಗಿದ್ದಾರೆ. ಕಾಂಗ್ರೆಸ್‌ ಮತ್ತು ಬಿಜೆಪಿ ಮೈತ್ರಿಯಾದರೆ12ನೇ ವಾರ್ಡ್‌ ಸದಸ್ಯೆ ಚಂದ್ರಮ್ಮ ಆಯ್ಕೆ ಬಹುತೇಕ ಖಚಿತವಾಗಲಿದೆ.

ಬದ್ಧವೈರಿಗಳ ಸಮಾಗಮಕ್ಕೆ ವೇದಿಕೆ : ಹನೂರು ಕ್ಷೇತ್ರದಲ್ಲಿ ಈ ಹಿಂದಿನಿಂದಲೂ ಮಾಜಿ ಸಚಿವದ್ವಯರಾದ ದಿವಂಗತ ರಾಜೂಗೌಡ ಮತ್ತು ನಾಗಪ್ಪ ಕುಟುಂಬಗಳ ಮಧ್ಯೆಯೇ ರಾಜಕೀಯ ಜಿದ್ದಾಜಿದ್ದಿ ಏರ್ಪಡುತಿತ್ತು. ಈ ನಡುವೆ, 2018ರ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ತೃತೀಯ ಶಕ್ತಿಯಾಗಿ ಜೆಡಿಎಸ್‌ ಪಕ್ಷದಿಂದ ಸ್ಪರ್ಧಿಸಿದ್ದ ಮಂಜುನಾಥ್‌ 44ಸಾವಿರಕ್ಕೂ ಅಧಿಕ ಮತ ಪಡೆದು ಎಲ್ಲರ ಹುಬ್ಬೇರುವಂತೆ ಮಾಡಿದ್ದರು. ತೃತೀಯ ಶಕ್ತಿಯಾಗಿ ಮಂಜುನಾಥ್‌ ಹೊರಹೊಮ್ಮಿರುವುದು ಹಾಲಿ ಕಾಂಗ್ರೆಸ್‌ ಶಾಸಕ

ನರೇಂದ್ರಮತ್ತು ಬಿಜೆಪಿ ಮಾಜಿ ಶಾಸಕಿ ಪರಿಮಳಾ ನಾಗಪ್ಪ ಅವರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ತೃತೀಯ ಶಕ್ತಿಯನ್ನು ಕುಗ್ಗಿಸಲು ಪಪಂ ಅಧ್ಯಕ್ಷ ಚುನಾವಣೆಯು ರಾಜಕೀಯ ಬದ್ಧವೈರಿಗಳಾಗಿರುವ ಶಾಸಕ ನರೇಂದ್ರ ಮತ್ತು ಮಾಜಿ ಶಾಸಕಿ ಪರಿಮಳಾ ನಾಗಪ್ಪ ಅವರ ಸಮಾಗಮಕ್ಕೆ ವೇದಿಕೆಯಾಗಲಿದೆ ಎಂಬುವ ಮಾತು ರಾಜಕೀಯ ವಲಯದಲ್ಲಿಕೇಳಿ ಬರುತ್ತಿದೆ.

ವಿನೋದ್‌ಎನ್‌.ಗೌಡ

ಟಾಪ್ ನ್ಯೂಸ್

2-

ಗ್ರಾಮದ ಸಮಸ್ಯೆ ಪರಿಹಾರಕ್ಕೆ 100% ಮತ

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

1-24-tuesday

Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಮನೋಬಲದಿಂದ ಕಾರ್ಯಸಿದ್ದಿ

ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ!

Kannada ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ! ಕಾಸರಗೋಡಿನಂತೆ ಗಡಿಭಾಗದಲ್ಲಿ ಮಹಾ ಉದ್ಧಟತನ

ಮೂರೂವರೆ ತಾಸು ಬಿಎಸ್‌ವೈ ವಿಚಾರಣೆ ; ಅಪ್ರಾಪ್ತ ವಯಸ್ಕಳಿಗೆ ನಾನು ತೊಂದರೆ ನೀಡಿಲ್ಲ

ಮೂರೂವರೆ ತಾಸು ಬಿಎಸ್‌ವೈ ವಿಚಾರಣೆ ; ಅಪ್ರಾಪ್ತ ವಯಸ್ಕಳಿಗೆ ನಾನು ತೊಂದರೆ ನೀಡಿಲ್ಲ

1-sads-das

Kanchanjunga Express ‘ಕವಚ’ ಇದ್ದಿದ್ದರೆ ರೈಲು ಅಪಘಾತ ತಪ್ಪುತ್ತಿತ್ತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-

Gundlupete: ಕುಡಿದ ಮತ್ತಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Road Mishap ಈಚರ್ ವಾಹನ-ಬೈಕ್ ನಡುವೆ ಅಪಘಾತ: ಸವಾರ ಮೃತ್ಯು

Road Mishap ಈಚರ್ ವಾಹನ-ಬೈಕ್ ನಡುವೆ ಅಪಘಾತ: ಸವಾರ ಮೃತ್ಯು

Actor Darshan: ನ್ಯಾಯ ಕೇಳಲು ಹೋಗಿದ್ದಕ್ಕೆ ನಾಯಿಗಳನ್ನು ಛೂ ಬಿಟ್ಟಿದ್ದ ದರ್ಶನ್‌!

Actor Darshan: ನ್ಯಾಯ ಕೇಳಲು ಹೋಗಿದ್ದಕ್ಕೆ ನಾಯಿಗಳನ್ನು ಛೂ ಬಿಟ್ಟಿದ್ದ ದರ್ಶನ್‌!

Chamarajanagar: ಚುಡಾ ಅಧ್ಯಕ್ಷರಾಗಿ ಮಹಮ್ಮದ್ ಅಸ್ಗರ್ ಮುನ್ನಾ ನೇಮಕ

Chamarajanagar: ಚುಡಾ ಅಧ್ಯಕ್ಷರಾಗಿ ಮಹಮ್ಮದ್ ಅಸ್ಗರ್ ಮುನ್ನಾ ನೇಮಕ

3-gundlupete

Gundlupete: ವಿದ್ಯುತ್ ಕಂಬಕ್ಕೆ ಡಿಕ್ಕಿ: ಬೈಕ್ ಸವಾರ ಸಾವು

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

2-

ಗ್ರಾಮದ ಸಮಸ್ಯೆ ಪರಿಹಾರಕ್ಕೆ 100% ಮತ

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

1-24-tuesday

Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಮನೋಬಲದಿಂದ ಕಾರ್ಯಸಿದ್ದಿ

ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ!

Kannada ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ! ಕಾಸರಗೋಡಿನಂತೆ ಗಡಿಭಾಗದಲ್ಲಿ ಮಹಾ ಉದ್ಧಟತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.