ಬಿಳಿಗಿರಿಬೆಟ್ಟದಲ್ಲಿ ನೆಲಹಾಲು, ಮೆಟ್ಟಿಲು, ರಥ ನಿರ್ಮಾಣಕ್ಕೆ ಚಾಲನೆ


Team Udayavani, Mar 8, 2019, 7:16 AM IST

biligiri.jpg

ಸಂತೆಮರಹಳ್ಳಿ: ಜಿಲ್ಲೆಯ ಭರಚುಕ್ಕಿ ಹಾಗೂ ನಂದಿ ಬೆಟ್ಟದಲ್ಲಿ ಪ್ರಥಮ ಕೇಬಲ್‌ ಕಾರ್‌ ಅಳವಡಿಸಿ ಪ್ರವಾಸೋದ್ಯಮ ಅಭಿವೃದ್ಧಿಗೆ ಶೀಘ್ರದಲ್ಲೇ ಕ್ರಮ ವಹಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್‌ ತಿಳಿಸಿದರು.

ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ಬಿಳಿಗಿರಿರಂಗನಾಥಸಾವ್ವಿು ದೇಗುಲದ ನೆಲಹಾಸು ಹಾಗೂ ಮೆಟ್ಟಿಲುಗಳ ನಿರ್ಮಾಣ ಹಾಗೂ ಹೊಸ ರಥ ನಿರ್ಮಾಣದ ಕಾಮಗಾರಿಗೆ ಗುರುವಾರ ಚಾಲನೆ ನೀಡಿ ಮಾತನಾಡಿದರು. 

ಚಾಮರಾಜನಗರ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿಶೇಷ ಆಸಕ್ತಿ ವಹಿಸಿದ್ದಾರೆ. ಸಮಗ್ರ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವಂತೆ ನನಗೆ ಸೂಚಿಸಿದ್ದಾರೆ. ಇಲ್ಲಿ ಪ್ರವಾಸೋದ್ಯಮಕ್ಕೆ ವಿಫ‌ುಲ ಅವಕಾಶಗಳಿವೆ. ಬಿಳಿಗಿರಿಂಗನಾಥಸ್ವಾಮಿ ದೇಗುಲ ದೇಶದಲ್ಲೇ ಪ್ರಸಿದ್ಧಿ ಪಡೆದಿದೆ. ಇದರ ಜೀರ್ಣೋದ್ಧಾರ ಕಾಮಗಾರಿ ಪ್ರಗತಿಯಲ್ಲಿದ್ದು, ಸಮಗ್ರ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು.

ದೇಗುಲದ ನೆಲಹಾಸಿಗೆ 1 ಕೋಟಿ ರೂ. ಹಾಗೂ ಮೆಟ್ಟಿಲುಗಳ ನಿರ್ಮಾಣಕ್ಕೆ 4 ಕೋಟಿ ರೂ. ಬಿಡುಗಡೆಯಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗುತ್ತದೆ. ಅಲ್ಲದೆ ಜಿಲ್ಲೆಯ ಭರಚುಕ್ಕಿ, ಮದ್ಯರಂಗ, ಐತಿಹಾಸಿಕ ವೆಸ್ಲಿ ಸೇತುವೆ ಮರು ನಿರ್ಮಾಣವೂ ಸೇರಿದಂತೆ ವಿವಿಧ ಪ್ರವಾಸಿ ತಾಣ ಅಭಿವೃದ್ಧಿಗೆ ಇದುವರೆಗೆ 13 ಕೋಟಿ ರೂ. ಬಿಡುಗಡೆಯಾಗಿದೆ ಎಂದರು.

ನೆಪ ಬಿಟ್ಟು ಕೆಲಸ ಪೂರ್ಣಗೊಳಿಸಿ: ದೇಗುಲ ಅಭಿವೃದ್ಧಿ ವಿಷಯದಲ್ಲಿ ಯಾರ ದಾಕ್ಷಿಣ್ಯಕ್ಕೂ ಒಳಗಾಗಬಾರದು. ಮೆಟ್ಟಲುಗಳ ನಿರ್ಮಾಣದಲ್ಲಿ ಸ್ಥಳೀಯರಿಂದ ಬರುವ ಕೆಲವು ಸಮಸ್ಯೆಗಳನ್ನು ಆಲಿಸಿ ಇದಕ್ಕೆ ಪರಿಹಾರ ಹುಡುಕಿಕೊಳ್ಳಬೇಕು. ಇದನ್ನೇ ನೆಪ ಮಾಡಿಕೊಂಡು ಕಾಮಗಾರಿ ವಿಳಂಬ ಮಾಡಬಾರದು. ಈ ವಿಷಯದಲ್ಲಿ ಜಿಲ್ಲಾಧಿಕಾರಿ ಖಡಕ್‌ ಕ್ರಮವನ್ನು ವಹಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿಗೆ ಸೂಚಿಸಿದರು.

 ಜಿಲ್ಲೆಯ ರೇಷ್ಮೆ ಪುನಶ್ಚೇತನಕ್ಕೂ 7 ಕೋಟಿ ರೂ. ನೆರವು ನೀಡಿದೆ. ಯಳಂದೂರು ಪಟ್ಟಣದ ದಿವಾನ್‌ ಪೂರ್ಣಯ್ಯ ವಸ್ತು ಸಂಗ್ರಹಾಲಯದ ಅಭಿವೃದ್ಧಿಗೂ ಇಲಾಖೆಯ ವತಿಯಿಂದ ಹಣ ನೀಡಲಾಗುವುದು. ಇದಕ್ಕೂ ಮುನ್ನ ಸುತ್ತ ಖಾಸಗಿ ವ್ಯಕ್ತಿಗಳು ಅಕ್ರಮ ಒತ್ತುವರಿ ಮಾಡಿಕೊಂಡಿರುವ ಸ್ಥಳವನ್ನು ತೆರವುಗೊಳಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.  

ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ಬಿಳಿಗಿರಿರಂಗನಬೆಟ್ಟ ಅಭಿವೃದ್ಧಿಯಾದರೆ ಇಡೀ ಗ್ರಾಮವೇ ಅಭಿವೃದ್ಧಿ ಆಗುತ್ತದೆ. ಇಲ್ಲಿರುವ ಆಸ್ತಿ ದೇಗುಲದ ಹೆಸರಿನಲ್ಲಿದೆ. ದೇವಸ್ಥಾನದ ಅಭಿವೃದ್ಧಿ ಕೆಲಸಗಳಲ್ಲಿ ಸ್ಥಳೀಯರು ಸಹಕರಿಸಬೇಕು ಎಂದು ಕೋರಿದರು. ಶಾಸಕ ಎನ್‌. ಮಹೇಶ್‌ ಮಾತನಾಡಿ, ಬಿಳಿಗಿರಿರಂಗನಬೆಟ್ಟದ ದೇಗುಲದ ಜೀರ್ಣೋದ್ಧಾರ ಕಾಮಗಾರಿ ತ್ವರಿತಗತಿಯಲ್ಲಿ ಆಗಬೇಕು. ಇದಕ್ಕೆ ಇನ್ನೂ 5 ಕೋಟಿ ರೂ. ಬೇಕಿದೆ. ಆದಷ್ಟು ಬೇಗ ಈ ಹಣವನ್ನು ಬಿಡುಗಡೆ ಮಾಡಬೇಕು ಎಂದರು.

ಇದೇ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ಸಚಿವರು, ಸಂಸದರು, ಶಾಸಕರಿಗೆ ಸನ್ಮಾನಿಸಲಾಯಿತು. ಮಾಜಿ ಶಾಸಕ ಎಸ್‌. ಬಾಲರಾಜು, ಜಿಪಂ ಅಧ್ಯಕ್ಷೆ ಶಿವಮ್ಮ, ಉಪಾಧ್ಯಕ್ಷ ಜೆ. ಯೋಗೇಶ್‌, ತಾಪಂ ಅಧ್ಯಕ್ಷ ನಿರಂಜನ್‌, ಗ್ರಾಪಂ ಅಧ್ಯಕ್ಷೆ ಸುಮತಿ, ಉಪಾಧ್ಯಕ್ಷ ಶ್ರೀನಿವಾಸ್‌, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಎಸಿ ನಿಖೀತಾಚಿನ್ನಸ್ವಾಮಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸಿ. ರಾಜಶೇಖರ್‌, ಸದಸ್ಯರಾದ ಪದ್ಮಾ, ಕಂದಹಳ್ಳಿ ಮಹೇಶ್‌, ಕೆಸ್ತೂರು ಪಿ. ಮರಿಸ್ವಾಮಿ, ಶಿವಮ್ಮ, ಎನ್‌. ರಾಜು, ದೇಗುಲದ ವೆಂಕಟೇಶ್‌ ಪ್ರಸಾದ್‌, ರವಿ, ನಾಗರಾಜಭಟ್‌, ಬಸವರಾಜು ಬಡೀಗೇರ್‌, ಶಿವಕುಮಾರ್‌, ಯಚ್ಚರೇಶ್‌ ಇತರರಿದ್ದರು.

ಜಿಲ್ಲೆ ಪುಣ್ಯಕ್ಷೇತ್ರಗಳ ನೆಲೆವೀಡು: ಚಾಮರಾಜನಗರ ಜಿಲ್ಲೆ ಪ್ರವಾಸಿ ತಾಣಗಳ ಅಗರವಾಗಿದೆ. ಜಿಲ್ಲೆ ಶೇ. 50 ಕ್ಕಿಂತಲೂ ಹೆಚ್ಚು ಕಾಡಿನಿಂದ ಆವೃತ್ತವಾಗಿದೆ. ನದಿಗಳು, ಜಲಪಾತ, ಪುರಾಣ, ಐತಿಹಾಸಿಕ ಪುಣ್ಯ ಕ್ಷೇತ್ರಗಳ ನೆಲೆವೀಡಾಗಿದೆ. ಇದರ ಅಭಿವೃದ್ಧಿಗೆ ಇನ್ನಷ್ಟು ಅನುದಾನ ಬಿಡುಗಡೆ ಮಾಡಬೇಕು.

ಅಲ್ಲದೇ ಯಳಂದೂರು ಪಟ್ಟಣದ ದಿವಾನ್‌ ಪೂರ್ಣಯ್ಯ ವಸ್ತು ಸಂಗ್ರಹಾಲಯ, ಬಳೇಮಂಟಪ, ಗೌರೇಶ್ವರ ದೇಗುಲಗಳ ಸಮುತ್ಛಯ ಇಡೀ ಜಿಲ್ಲೆಯಲ್ಲಿ ವಿಶಿಷ್ಟವಾಗಿದ್ದು, ಇದರ ಅಭಿವೃದ್ಧಿಗೂ ಇಲಾಖೆ ವತಿಯಿಂದ ಕ್ರಮ ವಹಿಸಬೇಕು ಸಂಸದ ಆರ್‌. ಧ್ರುವನಾರಾಯಣ ಮನವಿ ಮಾಡಿದರು.

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.