ರೋಟಾ ವೈರಸ್‌ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

Team Udayavani, Aug 30, 2019, 3:00 AM IST

rotavirus

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ರೋಟಾ ವೈರಸ್‌ ಲಸಿಕಾ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಲಾಯಿತು. ಮಗುವೊಂದಕ್ಕೆ ರೋಟಾ ವೈರಸ್‌ ಲಸಿಕೆ ನೀಡುವ ಮೂಲಕ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಭೇದಿ ಮತ್ತು ಅತಿಸಾರ ಮಕ್ಕಳಲ್ಲಿ ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಸ್ವತ್ಛತೆಯ ಬಗ್ಗೆ ಹೆಚ್ಚು ಆಸ್ಥೆ ವಹಿಸಿದಲ್ಲಿ ಈ ಸಮಸ್ಯೆಯನ್ನು ತಡೆಗಟ್ಟಬಹುದಾಗಿದೆ. ಆದ್ದರಿಂದ ತಾಯಂದಿರು ತಮ್ಮ ಮತ್ತು ಮಗುವಿನ ಸ್ವತ್ಛತೆಯ ಬಗೆಗೆ ಹೆಚ್ಚು ಗಮನಕೊಡಬೇಕು. ಮಗು ಇರುವ ಪರಿಸರ ನೈರ್ಮಲ್ಯದಿಂದ ಇರುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾಧಿಕಾರಿ ಬಿ. ಬಿ. ಕಾವೇರಿ ಮಾತನಾಡಿ, ಭೇದಿ ಅತಿಸಾರ ಬೇರೆ ಬೇರೆ ಕಾರಣಗಳಿಗೆ ಉಂಟಾಗುತ್ತದೆ. ರೋಟಾ ವೈರಸ್‌ ಕೂಡ ಅವುಗಳಲ್ಲಿ ಒಂದಾಗಿದೆ. ಹಾಗಾಗಿ ಭೇದಿಯಾದಾಗ ಮಕ್ಕಳಲ್ಲಿ ನಿರ್ಜಲೀಕರಣ ಉಂಟಾಗಿ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಂಭವವಿದೆ. ಆದ್ದರಿಂದ ರೋಟಾ ವೈರಸ್‌ ಲಸಿಕೆಯನ್ನು ಪರಿಚಯಿಸಲಾಗಿದೆ. ತಾಯಂದಿರು ತಪ್ಪದೇ ಮಗುವಿಗೆ ನಿಗದಿತ ಸಮಯದಲ್ಲಿ ರೋಟಾ ವೈರಸ್‌ ಲಸಿಕೆ ಕೊಡಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್‌.ಲತಾಕುಮಾರಿ ಮಾತನಾಡಿ, ರೋಟಾ ವೈರಸ್‌ ಲಸಿಕೆ ಕಾರ್ಯಕ್ರಮವನ್ನು ಮಕ್ಕಳ ಆರೋಗ್ಯ ಕಾಳಜಿಗಾಗಿ ಜಾರಿಗೆ ತರಲಾಗಿದೆ. ಆರೋಗ್ಯ ದೃಷ್ಟಿಯಿಂದ ನೈರ್ಮಲ್ಯಕ್ಕೆ ಒತ್ತು ನೀಡಬೇಕು ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಂ. ಸಿ. ರವಿ ಮಾತನಾಡಿ, ರೋಟಾ ವೈರಸ್‌ ಲಸಿಕೆಯನ್ನು ಮಗು ಹುಟ್ಟಿದ 6ನೇ ವಾರ, 10 ಮತ್ತು 14ನೇ ವಾರಗಳಲ್ಲಿ ಕೊಡಿಸಬೇಕು. ಇದರಿಂದ ರೋಟಾ ವೈರಸ್‌ನಿಂದಾಗುವ ಸಮಸ್ಯೆಗಳನ್ನು ಸಂಪೂರ್ಣವಾಗಿ ತಡೆಗಟ್ಟಬಹುದು ಎಂದು ಹೇಳಿದರು.

ಸರ್ಕಾರಿ ವೈದ್ಯಕೀಯ ಕಾಲೇಜಿನ ಡೀನ್‌ ಡಾ. ರಾಜೇಂದ್ರ, ಜಿಲ್ಲಾ ಶಸ್ತ್ರ ಚಿಕಿತ್ಸಕ‌ ಡಾ. ರಘುರಾಮ್‌, ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ. ಕೆ. ಎಂ. ವಿಶ್ವೇಶ್ವರಯ್ಯ, ಜಿಲ್ಲಾಸ್ಪತ್ರೆ ಸ್ಥಾನಿಕ ವೈದ್ಯಾಧಿಕಾರಿ ಡಾ. ಕೃಷ್ಣಪ್ರಸಾದ್‌, ಶಿಶುತಜ್ಞ ಡಾ. ವಿದ್ಯಾಸಾಗರ್‌, ಜಿಲ್ಲಾ ನರ್ಸ್‌ ಸೂಪರ್‌ವೈಸರ್‌ ಶಾಂತಮ್ಮ, ಎಚ್‌ಎಸ್‌ ಸುರೇಶಾಚಾರ್‌, ಜಿಲ್ಲಾ ಆರೋಗ್ಯ ಶಿಕ್ಷಣ ಸಂಯೋಜಕ ನಾರಾಯಣಸ್ವಾಮಿ ಇದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.