ಕೃಷಿ ಅಭಿಯಾನದಲ್ಲಿ ರೈತರೊಂದಿಗೆ ಮಾಹಿತಿ ವಿನಿಮಯ

Team Udayavani, Feb 29, 2020, 3:00 AM IST

krushi-abi

ಹನೂರು: ಕೃಷಿ ಮತ್ತು ವಿವಿಧ ಇಲಾಖೆಗಳಿಂದ ಸಿಗುವ ಸೌಲಭ್ಯದ ಮಾಹಿತಿಗಳ ಬಗ್ಗೆ ರೈತರೊಂದಿಗೆ ನೇರವಾಗಿ ಸಂವಾದ ನಡೆಸಿ, ಮಾಹಿತಿ ವಿನಿಮಯ ಮಾಡಿಕೊಳ್ಳುವ ಉದ್ದೇಶದಿಂದ ಸಮಗ್ರ ಕೃಷಿ ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಆರ್‌.ನರೇಂದ್ರ ತಿಳಿಸಿದರು.

ಪಟ್ಟಣದ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ನಡೆದ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ ರಾಗಿಯ ರಾಶಿಗೆ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿವೆ.

ಕೃಷಿಗೆ ಸಂಬಂಧಿಸಿದ ಮಾಹಿತಿಯನ್ನು ರೈತರಿಗೆ ತಲುಪಿಸುವುದು, ಉತ್ಪಾದಕತೆ ಹೆಚ್ಚಿಸುವ ತಂತ್ರಜ್ಞಾನಗಳನ್ನು ಮನವರಿಕೆ ಮಾಡಿಕೊಡುವುದು ಮತ್ತು ಕೃಷಿ ವಿಜ್ಞಾನಿಗಳೊಂದಿಗೆ ಸಂವಾದ ನಡೆಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಲ್ಲಿ ಕೃಷಿಗೆ ಸಂಬಂಧಿಸಿದ ಬಿತ್ತನೆ ಬೀಜಗಳ ನೂತನ ತಳಿಗಳು ಮತ್ತು ಹೊಸ ಯಂತ್ರಗಳ ಬಗ್ಗೆಯೂ ರೈತರಿಗೆ ಮಾಹಿತಿ ಕಲ್ಪಿಸಲಾಗುತ್ತದೆ ಎಂದು ತಿಳಿಸಿದರು.

ಮಣ್ಣನ್ನು ಪರೀಕ್ಷೆಗೆ ಒಳಪಡಿಸಿ: ಕೃಷಿಯಲ್ಲಿ ಮಣ್ಣಿ ಪ್ರಮುಖ ಪಾತ್ರವಹಿಸಿದೆ. ಇದರಿಂದ ಮಣ್ಣಿನ ಪರೀಕ್ಷೆ ಮಾಡಬೇಕು. ಮಣ್ಣಿನಲ್ಲಿ ಯಾವ ಪೋಷಕಾಂಶ ಯಾವ ಪ್ರಮಾಣದಲ್ಲಿದೆ ಎಂಬುದನ್ನು ತಿಳಿದುಕೊಳ್ಳಬೇಕು. ಮಣ್ಣಿನಲ್ಲಿ ಕೊರತೆಯಿರುವ ಪೋಷಕಾಂಶಕ್ಕೆ ಅಗತ್ಯವಾದ ರಸಗೊಬ್ಬರ ಬಳಸಬಹುದಾಗಿದೆ. ಈ ಮಣ್ಣಿನ ಪರೀಕ್ಷೆ ಉಚಿತವಾಗಿದ್ದು, ರೈತರು ಬೆಳೆ ಕಟಾವಾದ ಬಳಿಕ ಗೊಬ್ಬರ ಹಾಕುವುದಕ್ಕಿಂತ ಮುಂಚಿತವಾಗಿ ಪರೀಕ್ಷೆ ಮಾಡಿಸಿದರೆ, ಮುಂದಿನ ಬೆಳೆಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ವಿಧಾನಸಭೆಯಲ್ಲಿ ಧ್ವನಿ ಎತ್ತಿದ್ದೇನೆ: ರೈತರ ಬೆಳೆಗೆ ಉತ್ತಮ ಬೆಲೆ ನೀಡುವಲ್ಲಿ ಸರ್ಕಾರ ವಿಫ‌ಲವಾಗಿವೆ. ಸರ್ಕಾರದಿಂದ ತೆರೆಯುವ ಬೆಳೆ ಖರೀದಿ ಕೇಂದ್ರಗಳು ಮತ್ತು ಬೆಂಬಲ ಬೆಲೆ ನೀಡಲು ಸಾಧ್ಯವಾಗುತ್ತಿಲ್ಲ. ಇದರಿಂದ ರೈತರು ನಷ್ಟ ಅನುಭವಿಸುತ್ತಿದ್ದಾರೆ ಎಂದು ಹಲವು ಬಾರಿ ವಿಧಾನಸಭೆಯಲ್ಲಿ ಧ್ವನಿ ಎತ್ತಿದ್ದು, ಮುಂದಿನ ವಾರದಲ್ಲಿ ನಡೆಯುವ ವಿಧಾನಸಭೆಯಲ್ಲಿಯೂ ಈ ಬಗ್ಗೆ ಧ್ವನಿಯೆತ್ತಿ ಗರಿಷ್ಠ ಬೆಂಬಲ ಬೆಲೆ, ಖರೀದಿ ಕೇಂದ್ರಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ಸಿರಿಧಾನ್ಯ ಬೆಳೆಯಲು ಮುಂದಾಗಿ: ಕೃಷಿ ಇಲಾಖೆ ಉಪ ನಿರ್ದೇಶಕ ಮುತ್ತುರಾಜು ಮಾತನಾಡಿ, ರೈತರು ಸಿರಿಧಾನ್ಯಗಳನ್ನು ಹೆಚ್ಚಾಗಿ ಬೆಳೆಯಲು ಮುಂದಾಗಬೇಕು. ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಎಕರೆಗೆ 10 ಸಾವಿರ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ತಾಪಂ ಸದಸ್ಯ ಜವಾದ್‌ ಅಹಮ್ಮದ್‌, ಪಪಂ ಸದಸ್ಯರಾದ ಮುಮ್ತಾಜ್‌ ಬೇಗಂ, ಗಿರೀಶ್‌, ಸಹಾಯಕ ನಿರ್ದೇಶಕಿ ಪುಷ್ಪಲತಾ, ಕೃಷಿ ಅಧಿಕಾರಿಗಳಾದ ರಘುವೀರ್‌, ಧರ್ಮೇಂದ್ರ, ಕೃಷಿ ವಿಜ್ಞಾನಿ ಹಂಪಣ್ಣಗೌಂಡರ್‌, ಪ್ರಗತಿರ ರೈತರಾದ ಮುರುಡೇಶ್ವರ ಸ್ವಾಮಿ, ಜಯಸುಂದರ್‌ ನಾಯ್ಡು, ರಾಜಶೇಖರ್‌ ಮೂರ್ತಿ ಹಾಜರಿದ್ದರು.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.