ಸ್ವಾತಂತ್ರ್ಯಕ್ಕೆ ಕರ್ನಾಟಕದ ಕೊಡುಗೆ ಅಪಾರ

Team Udayavani, Jun 27, 2022, 3:01 PM IST

ಸ್ವಾತಂತ್ರ್ಯಕ್ಕೆ ಕರ್ನಾಟಕದ ಕೊಡುಗೆ ಅಪಾರ

ಚಾಮರಾಜನಗರ: ಭಾರತ ಸ್ವಾತಂತ್ರ್ಯಕ್ಕೆ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ನಗರಸಭಾ ಅಧ್ಯಕ್ಷೆ ಆಶಾ ನಟರಾಜು ಹೇಳಿದರು.

ನಗರದ ಮಾರಿಗುಡಿ ಮುಂಭಾಗದ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಾರತ ಅಮೃತ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ತುಂಬಿರುವ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗಿದೆ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಹಾಗೂ ಜಿಲ್ಲೆಯ ಕೊಡುಗೆಯು ಅಪಾರವಾಗಿದೆ. ಈ ಸುಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.

ಬೆಂಗಳೂರಿನ ವಿದ್ಯಾಭಾರತಿ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಿ.ಆರ್‌.ಜಗದೀಶ್‌ ಮಾತನಾಡಿ, ಭಾರತೀಯ ಸ್ವಾತಂತ್ರ್ಯ ಹೋರಾಟದ ಪ್ರತಿಯೊಂದು ಕಾಲಘಟ್ಟವು ರೋಚಕವಾಗಿದೆ. ಸ್ವಾತಂತ್ರ್ಯವೆನ್ನುವುದು ಭಾರತೀಯರಿಗೆ ಸಾರಾಸಗಟಾಗಿ ಸಿಕ್ಕಿಲ್ಲ. ಅದಕ್ಕಾಗಿ ಸಾಕಷ್ಟು ವೀರ ಯೋಧರು, ದೇಶಪ್ರೇಮಿಗಳು ಬಲಿದಾನಗೈದಿದ್ದಾರೆ. ಸ್ವಾತಂತ್ರ್ಯನಂತರ ಭಾರತ ಎಲ್ಲಾ ಕ್ಷೇತ್ರಗಳಲ್ಲಿಯೂ ಮುನ್ನಡೆ ಸಾಧಿಸಿದೆ. 75 ವರ್ಷಗಳ ಇತಿಹಾಸದ ಚಿಂತನೆಯನ್ನು ಪ್ರಜ್ಞಾವಂತರಾದ ನಾವೆಲ್ಲರೂ ಮಾಡಬೇಕಿದೆ ಎಂದರು.

ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಎಂ. ರಾಮಚಂದ್ರ ಮಾತನಾಡಿ, ಭಾರತ ದೇಶ ಸ್ವಾತಂತ್ರ್ಯಗೊಂಡು 75 ವರ್ಷಗಳು ತುಂಬಿರುವ ಅಮೃತ ಮಹೋತ್ಸವ ಆಚರಣೆ ದೇಶದ ಪ್ರತಿಯೊಬ್ಬರ ಜಾಗೃತಿಗೆ ಅವಶ್ಯವಾಗಿದೆ. ಭಾರತೀಯ ಸ್ವಾತಂತ್ರ್ಯ ಹೋರಾಟದ ನೆನಪುಗಳನ್ನು ಇಂದಿನ ವಿದ್ಯಾರ್ಥಿಗಳು ಅರಿಯಬೇಕು. ದೇಶದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಕೊಡುಗೆ ನೀಡಬೇಕು ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಂತಮೂರ್ತಿ ಕುಲಗಾಣ, ಸ್ವಾತಂತ್ರ್ಯ ಪಡೆದು 75 ವರ್ಷಗಳನ್ನು ಪೂರೈಸಿರುವ ಭಾರತವನ್ನು ಇಡೀ ಜಗತ್ತು ಭಾವನಾತ್ಮಕವಾಗಿ ಅಪ್ಪಿಕೊಂಡಿದೆ. ಸ್ವಾತಂತ್ರ್ಯ ಹೋರಾಟಗಾರರು ಎಂದೂ, ಯಾವತ್ತೂ ಸಹ ಸ್ವಾರ್ಥಿಗಳಾಗಲಿಲ್ಲ. ಅವರ ಹೋರಾಟದ ಫ‌ಲವನ್ನು ನೆಮ್ಮದಿಯಿಂದ ಅನುಭವಿಸುತ್ತಿದ್ದೇವೆ. ಭಾರತೀ ಯರಾದ ನಾವೆಲ್ಲರೂ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡುವ ಮೂಲಕ ದೇಶವನ್ನು ಇನ್ನಷ್ಟು ಉತ್ತಮ ಸ್ಥಿತಿಗೆ ಕೊಂಡೊಯ್ಯಬೇಕಾಗಿದೆ ಎಂದರು. ಕರ್ನಾಟಕ ಜಾನಪದ ಅಕಾಡಮಿ ಸದಸ್ಯಸಿ.ಎಂ. ನರಸಿಂಹಮೂರ್ತಿ ಭಾರತ ಸ್ವಾತಂತ್ರ್ಯಹೋರಾಟದಲ್ಲಿ ಭಾಗವಹಿಸಿ ಕೊಡುಗೆ ನೀಡಿದ ಜಿಲ್ಲೆಯ 40 ಮಂದಿ ಸ್ವಾತಂತ್ರ್ಯಹೋರಾಟ ಗಾರರನ್ನು ಸ್ಮರಿಸಿದರು.

ನಗರಸಭೆ ಸದಸ್ಯರಾದ ಗಾಯತ್ರಿ ಚಂದ್ರ ಶೇಖರ್‌, ಭಾಗ್ಯಮ್ಮ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಕಾತ್ಯಾಯಿನಿದೇವಿ, ನಗರಸಭೆ ಪೌರಾಯುಕ್ತ ಕರಿಬಸವಯ್ಯ, ನಾಮನಿರ್ದೇಶಿತ ಸದಸ್ಯ ಚಂದ್ರು, ತಹಶೀಲ್ದಾರ್‌ ಬಸವರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರೇಮ್‌ಕುಮಾರ್‌, ಮೈಸೂರು ವಿ.ವಿ.ಸಿಂಡಿಕೇಟ್‌ ಸದಸ್ಯ ಪ್ರದೀಪ್‌ಕುಮಾರ್‌ ದೀಕ್ಷಿತ್‌, ಕಾರ್ಯಕ್ರಮ ಸಂಯೋಜಕ ಅಶ್ವಿ‌ನ್‌ ಇತರರು ಇದ್ದರು. ಕಾರ್ಯಕ್ರಮದಲ್ಲಿ ಹಾಜರಿದ್ದ ಗಣ್ಯರು ಎನ್‌. ಸುಂದ್ರೇಶ್‌ ರಚಿಸಿರುವ ಭಾರತ ಸ್ವಾತಂತ್ರ್ಯ ಹೋರಾಟಕ್ಕೆ ಕರ್ನಾಟಕದ ಕೊಡುಗೆ ಕುರಿತ ಪುಸ್ತಕ ಬಿಡುಗಡೆ ಮಾಡಿದರು.

ಮೆರವಣಿಗೆಗೆ ಎಡೀಸಿ ಕಾತ್ಯಾಯಿನಿದೇವಿ ಚಾಲನೆ : ನಗರದ ಚಾಮರಾಜೇಶ್ವರ ದೇವಸ್ಥಾನದ ಅವರಣದಲ್ಲಿ ನಗರಸಭಾ ಅಧ್ಯಕ್ಷೆ ಆಶಾ ನಟರಾಜು, ಚೂಡಾ ಶಾಂತಮೂರ್ತಿ ಕುಲಗಾಣ, ಎಡೀಸಿ ಕಾತ್ಯಾಯಿನಿದೇವಿ ಹಸಿರು ನಿಶಾನೆ ತೋರುವ ಮೂಲಕ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮದ ಮೆರವಣಿಗೆಗೆ ಚಾಲನೆ ನೀಡಿದರು. ವಿವಿಧ ಕಲಾತಂಡಗಳೊಂದಿಗೆ ಮರವಣಿಗೆಯಲ್ಲಿ ವೀರಗಾಸೆ, ಡೊಳ್ಳುಕುಣಿತ, ನಾದಸ್ವರ, ಬ್ಯಾಂಡ್‌ಸೆಟ್‌, ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣದ ಮಕ್ಕಳು, ಶಾಲಾಮಕ್ಕಳು, ವಿವಿಧ ಸ್ತ್ರೀಶಕ್ತಿ ಸಂಘದ ಸದಸ್ಯರು, ಸಂಘ ಸಂಸ್ಥೆಗಳು ಭಾಗವಹಿಸಿದ್ದವು. ಚಾಮರಾಜೇಶ್ವರ ದೇವಸ್ಥಾನದಿಂದ ಹೊರಟ ಮೆರವಣಿಗೆಯು ಭುವನೇಶ್ವರಿ ವೃತ್ತ, ಕೆಎಸ್‌ಆರ್‌ ಟಿಸಿ ಬಸ್‌ ನಿಲ್ದಾಣ, ದೇವಾಂಗ ಬೀದಿ, ಮಹಾವೀರ ವೃತ್ತದ ಮೂಲಕ ಮಾರಿಗುಡಿಯ ಮುಂಭಾಗದ ಆವರಣಕ್ಕೆ ತಲುಪಿತು. ಬಳಿಕ ಮಾರಿಗುಡಿಯ ಆವರಣದಲ್ಲಿ ಭಾರತ ಸ್ವಾತಂತ್ರ್ಯ  ಹೋರಾಟವನ್ನು ಬಿಂಬಿಸುವ ಶಿಲಾಫ‌ಲಕವನ್ನು ಗಣ್ಯರು ಅನಾವರಣಗೊಳಿಸಿದರು.

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.