ದೇಗುಲಗಳಲ್ಲಿ ಸಂಸ್ಕೃತ ಜತೆ ಕನ್ನಡ ಮಂತ್ರಘೋಷ!

ಕನ್ನಡ ಮಂತ್ರ ವಿಧಿ ವಿಧಾನಗಳ ಕುರಿತ ಕಾರ್ಯಾಗಾರ

Team Udayavani, Dec 1, 2020, 5:53 PM IST

ದೇಗುಲಗಳಲ್ಲಿ ಸಂಸ್ಕೃತ ಜತೆ ಕನ್ನಡ ಮಂತ್ರಘೋಷ!

ಚಾಮರಾಜನಗರ: ಜಿಲ್ಲೆಯ ದೇವಾಲಯಗಳಲ್ಲಿ ಕನ್ನಡದಲ್ಲೇ ಮಂತ್ರಘೋಷ ಮಾಡುವ ಸಲುವಾಗಿಅರ್ಚಕರಿಗೆ ಕನ್ನಡ ಮಂತ್ರಗಳನ್ನು ಹೇಳಿಕೊಡುವ ವಿಶಿಷ್ಟ ಕಾರ್ಯಾಗಾರ ನಗರದಲ್ಲಿ ಸೋಮವಾರ ನಡೆಯಿತು.

ತನ್ಮೂಲಕ ಇನ್ನು ಮುಂದೆ ಜಿಲ್ಲೆಯ ದೇವಾ ಲಯಗಳಲ್ಲಿ ಸಂಸ್ಕೃತದೊಂದಿಗೆ ಕನ್ನಡ ಮಂತ್ರ ಘೋಷಗಳು ಮೊಳಗಲಿವೆ. ಜಿಲ್ಲಾಡಳಿತ, ಮುಜರಾಯಿ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಗರದ ಜೆ. ಎಚ್‌. ಪಟೇಲ್‌ ಸಭಾಂಗಣದಲ್ಲಿ ಅರ್ಚಕರಿಗೆಕನ್ನಡದಲ್ಲೇ ದೇವರ ಪೂಜೆ, ಮಂತ್ರಘೋಷ, ವಿಧಿವಿಧಾನಗಳ ಕುರಿತು ಆಯೋಜಿಸಲಾಗಿದ್ದ ಕಾರ್ಯಾಗಾರಕ್ಕೆ ಜಿಲ್ಲಾಧಿಕಾರಿ ಡಾ.ಎಂ.ಆರ್‌. ರವಿ ಚಾಲನೆ ನೀಡಿದರು.

ಕನ್ನಡ ಮಂತ್ರ: ಜಿಲ್ಲೆಯ ದೇವಾಲಯಗಳಲ್ಲಿ ಭಕ್ತರಿಗೆ ಅರ್ಥವಾಗುವ ಕನ್ನಡ ಭಾಷೆಯಲ್ಲಿ ಮಂತ್ರೋಚ್ಛಾರ ನಡೆಯಬೇಕೆಂಬುದು, ಸಾಹಿತಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಎಂ. ಆರ್‌. ರವಿ ಅವರ ಇಚ್ಛೆಯಾಗಿತ್ತು. ಇದನ್ನು ಜಾರಿಗೊಳಿಸುವ ಸಲುವಾಗಿ ಮುಜರಾಯಿ ದೇವಾಲಯಗಳ ಅರ್ಚಕರಿಗೆ ಕನ್ನಡದಲ್ಲಿ ಮಂತ್ರ ಹೇಳುವ ವಿಧಾನಗಳನ್ನು ತಿಳಿಸಿಕೊಡುವ ಸಲುವಾಗಿ ಈ ಕಾರ್ಯಾಗಾರವನ್ನು ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್‌ ಅವರ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಆಯೋಜಿಸಲಾಗಿತ್ತು. ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿಡಾ.ಎಂ. ಆರ್‌. ರವಿ,ಭಕ್ತರಒಳಿತಿಗಾಗಿ, ಸಮಸ್ಯೆಪರಿಹಾರಕ್ಕಾಗಿ ಪೂಜೆ, ಮಂತ್ರ ಘೋಷ ಮಾಡುವ ಪ್ರಕ್ರಿಯೆ ಕನ್ನಡದಲ್ಲೇ ನಡೆದರೆ ಭಕ್ತರ ಮನಸ್ಸಿಗೆ ಪರಿಣಾಮಕಾರಿಯಾಗಿ ತಲುಪುತ್ತದೆ ಎಂಬ ಆಶಯದೊಂದಿಗೆ ಅರ್ಚಕರಿಗಾಗಿ ಹಿರೇಮಗಳೂರು ಕಣ್ಣನ್‌ ಅವರಿಂದ ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದರು.

ಜನರ ಸಹಕಾರ: ಜಿಲ್ಲೆಯ ಜನರು ಪ್ರಬುದ್ದರಾಗಿದ್ದಾರೆ. ಯಾವುದೇ ಉತ್ತಮ ಕಾರ್ಯಗಳಿಗೆ ಜಿಲ್ಲಾಡಳಿತದ ಜೊತೆಗೆ ಟೊಂಕಕಟ್ಟಿ ನಿಲ್ಲುತ್ತಾರೆ.ಕೋವಿಡ್ ವಿರುದ್ಧದ ಹೋರಾಟದಲ್ಲಿಯೂ ಸಹಕರಿಸಿ ರಾಷ್ಟ್ರ ಮಟ್ಟದಲ್ಲಿ ಜಿಲ್ಲೆ ಗಮನ ಸೆಳೆಯಲು ಕಾರಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್‌ ಅವರು ಕಾರ್ಯಾಗಾರದಲ್ಲಿ ಕನ್ನಡ ಭಾಷೆಯಲ್ಲೇಅರ್ಚನೆ, ರಾಷ್ಟ್ರಾಶೀರ್ವಾದ, ಮಂಗಳಾರತಿ, ಮತ್ತಿತ್ತರ ಕನ್ನಡ ಮಂತ್ರಗಳನ್ನು ಅರ್ಚಕರಿಗೆ ಬೋಧಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌. ಆನಂದ್‌, ತಹಶೀಲ್ದಾರ್‌ ಚಿದಾನಂದ ಗುರುಸ್ವಾಮಿ, ಕನ್ನಡಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಬಿ.ಎಸ್‌.ವಿನಯ್‌,ಹಿರಿಯ ಸಾಹಿತಿ ಕೆ.ವೆಂಕಟರಾಜು, ಹಿಮವದ್‌ಗೋಪಾಲಸ್ವಾಮಿ ಬೆಟ್ಟದ ದೇವಾಲಯದ ಅರ್ಚಕ ಗೋಪಿ, ಚಾಮರಾಜೇಶ್ವರ ದೇವಾಸ್ಥಾನದ ಅರ್ಚಕ ರಾಮಕೃಷ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಸ್ಕೃತ ಜತೆ ಕನ್ನಡವೂ ಸೇರಿದರೆ ಅರ್ಥಪೂರ್ಣ :  ಮಂತ್ರ ಪಠಣ ಪೂಜಾ ವಿಧಿವಿಧಾನಗಳನ್ನು ನೆರವೇರಿಸುವ ವೇಳೆ ಸಂಸ್ಕೃತದೊಂದಿಗೆ ಕನ್ನಡವೂ ಸೇರಿದರೆ ಅರ್ಥಪೂರ್ಣ ವಾಗಲಿದೆ. ಸರ್ವಜನರ ಒಳಿತಿಗಾಗಿ ನೆರವೇರುವ ಪೂಜಾ ಕೈಂಕರ್ಯ, ಮಂತ್ರಘೋಷಗಳು, ಪ್ರಾರ್ಥನೆ ಸರಳವಾಗಿ ಕನ್ನಡ ದಲ್ಲಿಯೂ ಆಗುವ ಮೂಲಕ ಜನರಿಗೆ ಮುಟ್ಟುವಂತಾಗಲಿ. ಸಂಸ್ಕೃತವನ್ನು ಉಳಿಸಿಕೊಂಡು ಮೂಲ ಉದ್ದೇಶಕ್ಕೆ ಯಾವುದೇ ಧಕ್ಕೆ ಬಾರದ ಹಾಗೇ ಮಾರ್ಗದರ್ಶನ ಮಾಡಿಸುವ ಉದ್ದೇಶದೊಂದಿಗೆ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಡಾ. ರವಿ ತಿಳಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.