ಜಾತ್ಯತೀತ ಮನೋಭಾವನೆ ಉಳ್ಳವರಾಗಿದ್ದ ಕೆಂಪೇಗೌಡ

Team Udayavani, Aug 20, 2017, 4:17 PM IST

Surathkal-1_0.jpg

ಚಾಮರಾಜನಗರ: ನಾಡಪ್ರಭು ಬೆಂಗಳೂರು ನಿರ್ಮಾತೃ ಕೆಂಪೇಗೌಡರು ದಕ್ಷ ಆಡಳಿತಗಾರರಾಗಿದ್ದು ಜಾತ್ಯತೀತ ಮನೋಭಾವನೆ ಉಳ್ಳವರಾಗಿದ್ದರು ಎಂದು ಸಂಸದ ಆರ್‌. ಧ್ರುವನಾರಾಯಣ ಅಭಿಪ್ರಾಯಪಟ್ಟರು. ನಗರದ ಪೇಟೆ ಪ್ರಾಥಮಿಕ ಶಾಲೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ನಾಡಪ್ರಭು ಕೇಂಪೇಗೌಡರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೆಂಪೇಗೌಡ ಅವರು ಎಲ್ಲಾ ವರ್ಗದ ಜನರ ಒಳಿತಿಗಾಗಿ ಯೋಜನೆಗಳನ್ನು ರೂಪಿಸಿದರು. ಕೆರೆ ಕಟ್ಟೆಗಳನ್ನು ನಿರ್ಮಿಸುವ ಮೂಲಕ ಜನೋಪಯೋಗಿ ಕೆಲಸಕ್ಕೆ ಮುಂದಾದರು. ಕೃಷಿಕರಿಗೂ ಅನುಕೂಲವಾಗುವಂತೆ ಹಲವು ಪ್ರಯೋಜನಗಳನ್ನು ತಲುಪಿಸುವ ಕಾರ್ಯ ನಿರ್ವಹಿಸಿದರು. ಎಲ್ಲ ವರ್ಗ ಸಮಾಜವನ್ನು ಗೌರವಿಸಿ ನ್ಯಾಯ ಕೊಡುವ ಕೆಲಸ ವಾಡುವ ಮೂಲಕ ಜಾತ್ಯತೀತ ಮನೋಬಾವನೆಯನ್ನು ತೋರಿದರು ಎಂದರು.

ಬೆಂಗ್ಳೂರು ಅಭಿವೃದ್ಧಿಗೆ ಕೆಂಪೇಗೌಡರ ದೂರದೃಷ್ಟಿತ್ವ ಕಾರಣ: ಇಡೀ ಪ್ರಪಂಚದಲ್ಲೇ ಗುರುತಿಸಿಕೊಂಡಿರುವ ಬೆಂಗಳೂರು ಅಭಿವೃದ್ಧಿಗೆ ಕೆಂಪೇಗೌಡರ ದೂರದರ್ಶಿತ್ವ ಆಡಳಿತವು ಕಾರಣವಾಗಿದೆ. ಅಂದಿನ ಕಾಲದಲ್ಲೇ ವ್ಯಾಪಾರ ಉದ್ಯಮ ಬೆಳವಣಿಗೆಗೆ ವಿಶೇಷ ಕಾಳಜಿ ವಹಿಸಿ ಅನುಕೂಲ ಕಲ್ಪಿಸಿಕೊಟ್ಟರು. ಹೀಗಾಗಿ ಇಂದಿಗೂ ಕಾಟನ್‌ ಪೇಟೆ, ಬನ್ನಿಪೇಟೆ, ಚಿಕ್ಕಪೇಟೆ ಇನ್ನಿತರ ಪ್ರದೇಶಗಳು ತಮ್ಮದೇ ಆದ ಉದ್ಯಮಗಳಲ್ಲಿ ಚಿರಪರಿಚಿತವಾಗಿವೆ ಎಂದು ಧ್ರುವನಾರಾಯಣ ಅಭಿಪ್ರಾಯಪಟ್ಟರು.

ಉದ್ಯಾನ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬೆಂಗಳೂರು ಕೆಂಪೇಗೌಡರ ಕಾಲದಲ್ಲೇ ಸಾಕಷ್ಟು ಗಿಡಮರ ತೋಪು ಪೋಷಣೆಗೆ ಹೆಸರಾಗಿತ್ತು. ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಕೆಂಪೇಗೌಡರು ಶ‌Åಮಿಸಿದ ಫ‌ಲವಾಗಿಯೇ ರಾಜ್ಯದ ರಾಜಧಾನಿಯಾಗುವ ಅವಕಾಶ ಬೆಂಗಳೂರಿಗೆ ಲಭಿಸಿತು. ಈ ಹಿನ್ನೆಲೆಯಲ್ಲಿ ಕೆಂಪೇಗೌಡರ ಕೊಡುಗೆ ಅನನ್ಯವಾದುದು ಎಂದು ತಿಳಿಸಿದರು.

ಕೆಂಪೇಗೌಡರ ಕಾಲದಲ್ಲಿ ಅನೇಕ ಅಭಿವೃದ್ಧಿ ಕೆಲಸ: ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಶಾಸಕ ಆರ್‌.ನರೇಂದ್ರ ಕೆಂಪೇಗೌಡ ಅವರು ಬೆಂಗಳೂರಿನ ವಾಣಿಜ್ಯ, ಕೃಷಿ ಪ್ರಗತಿಗಾಗಿ ಸಾಕಷ್ಟು ಒತ್ತು ಕೊಟ್ಟರು. ಅವರ ಕಾಲದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳು ನಡೆದಿವೆ. ಇದಕ್ಕಾಗಿಯೇ ಸರ್ಕಾರದ ವತಿಯಿಂದ ಕೆಂಪೇಗೌಡರ ಜಯಂತಿ ಆಚರಣೆ ಮೂಲಕ ಕೊಡುಗೆಂ‌ುನ್ನು ಸ್ಮರಿಸಲಾಗುತ್ತಿದೆ ಎಂದರು.

ಸಮಾಜದ ಜನರು ವ್ಯಾಪಾರ ಉದ್ಯಮದ ಜತೆಗೆ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಬೇಕಿದೆ. ಅದರಲ್ಲೂ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಅಡಚಣೆ ಮಾಡಬಾರದು. ಉನ್ನತ ವ್ಯಾಸಂಗ ಮಾಡಿ ಒಳ್ಳೆಯ ಹುದ್ದೆಗಳಿಗೆ ಏರುವಂತಾಗಬೇಕು. ಕಾಲಕ್ಕೆ ತಕ್ಕಂತೆ ಅಭಿವೃದ್ಧಿಂ‌ು ಪರಿವರ್ತನೆಗೆ ಹೊಂದಿಕೊಳ್ಳಬೇಕು ಎಂದು ನರೇಂದ್ರ ಸಲಹೆ ಮಾಡಿದರು. ಜಿಲ್ಲಾ ಕೇಂದ್ರದಲ್ಲಿ ಒಕ್ಕಲಿಗ ಸಮುದಾಯ ಭವನಕ್ಕೆ ಸ್ಥಳೀಯ ಶಾಸಕರು ಹೆಚ್ಚಿನ ಆಸಕ್ತಿ ವಹಿಸಿ ಕಾರ್ಯಗತ ಮಾಡುವಂತೆ ನರೇಂದ್ರ ಮನವಿ ಮಾಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಸಿ.ಪುಟ್ಟರಂಗಶೆಟ್ಟಿ, ರಾಜ್ಯ ಸರ್ಕಾರ ಮಹನೀಯರ ಜಯಂತಿ ಆಚರಣೆ ಕಾರ್ಯಕ್ರಮ ಮೂಲಕ ಅಮೂಲ್ಯ ಕೊಡುಗೆಗಳನ್ನು, ಮೌಲ್ಯಗಳನ್ನು ತಿಳಿಸಿಕೊಡುವ ಉತ್ತಮ ಕೆಲಸ ಮಾಡುತ್ತಿದೆ. ಜಿಲ್ಲಾ ಕೇಂದ್ರದಲ್ಲಿ ಒಕ್ಕಲಿಗ ಸಮುದಾಯ ಭವನಕ್ಕೆ ಅಗತ್ಯವಿರುವ ನೆರವು ಒದಗಿಸಲು ತಾವು ಬದ್ಧರಾಗಿರುವುದಾಗಿ ತಿಳಿಸಿದರು.

ಮೈಸೂರಿನ ಮಹಾರಾಜ ಕಾಲೇಜು ಕನ್ನಡ ವಿಬಾಗದ ಉಪನ್ಯಾಸಕ ಡಾ. ಪಿ.ಕೆ. ಕೆಂಪೇಗೌಡ ನಾಡಪ್ರಭು ಕೆಂಪೇಗೌಡರ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಇದೇವೇಳೆ ಸಮಾಜದ ಅಭಿವೃದ್ಧಿ ಶ್ರಮಿಸಿದ ಚಿಕ್ಕಣ್ಣೇಗೌಡ, ಎಲ್‌. ಹನುಮಯ್ಯ ಹಾಗೂ ಮಂಚೇಗೌಡರನ್ನು ಸನ್ಮಾನಿಸಲಾಯಿತು.

ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಎಂ.ಚಿನ್ನಸ್ವಾಮಿ, ಕಾಡಾ ಅಧ್ಯಕ್ಷ ಎಚ್‌.ಎಸ್‌.ನಂಜಪ್ಪ, ನಗರಸಭಾಧ್ಯಕ್ಷ ಆರ್‌.ಎಂ.ರಾಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸುಹೇಲ್‌ ಅಲಿಖಾನ್‌, ಎಪಿಎಂಸಿ ಅಧ್ಯಕ್ಷ‌ ಬಿ.ಕೆ.ರವಿಕುಮಾರ್‌, ಜಿಪಂ ಸದಸ್ಯರಾದ ಶಶಿಕಲಾ, ಮರಗದಮಣಿ, ಶಿವಮ್ಮ, ಡೀಸಿ ಬಿ.ರಾಮು, ಜಿಪಂ ಸಿಇಒ ಡಾ.ಕೆ.ಹರೀಶ್‌ ಕುಮಾರ್‌, ಎಸ್ಪಿ ಧರ್ಮೇಂದರ್‌ ಕುಮಾರ್‌ ಮೀನಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಡಿ.ನಾಗವೇಣಿ, ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮಕ್ಕೂ ಮೊದಲು  ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಆಕರ್ಷಕ ಜಾನಪದ ಕಲಾತಂಡಗಳೊಡನೆ ನಡೆದ ಕೆಂಪೇಗೌಡರ ಭಾವಚಿತ್ರ ಮೆರವಣಿಗೆಗೆ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಹಾಗೂ ಆರ್‌. ನರೇಂದ್ರ ಚಾಲನೆ ನೀಡಿದರು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.