ಕೊಳ್ಳೇಗಾಲ ನಗರಸಭೆ ಅಧ್ಯಕ್ಷರಾಗಿ ರೇಖಾ ಆಯ್ಕೆ

Team Udayavani, Oct 11, 2022, 5:05 PM IST

tdy-9

ಕೊಳ್ಳೇಗಾಲ: ನಗರಸಭೆಯ ಅಧ್ಯಕ್ಷರಾಗಿ ಕಾಂಗ್ರೆಸ್‌ನ 3ನೇ ವಾರ್ಡಿನ ಸಿ.ಎನ್‌.ರೇಖಾ ರಮೇಶ್‌ ಅತಿ ಹೆಚ್ಚು ಮತಗಳಿಂದ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿ ಕಾರಿ ಹಾಗೂ ಉಪ ವಿಭಾಗಾಧಿಕಾರಿ ಗೀತಾ ಹುಡೇದ ಘೋಷಣೆ ಮಾಡಿದರು.

ಬೆಳಗ್ಗೆ ಕಾಂಗ್ರೆಸ್‌ನಿಂದ ಸಿ.ಎನ್‌.ರೇಖಾ ರಮೇಶ್‌ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರೆ, ಬಿಜೆಪಿಯಿಂದ ಸಿರೀಶ ಸತೀಶ್‌ ಮತ್ತು ರಮ್ಯ ನಾಮಪತ್ರ ಸಲ್ಲಿಸಿದ ಬಳಿಕ ರಮ್ಯ ನಾಮಪತ್ರವನ್ನು ಹಿಂಪಡೆದ ಹಿನ್ನೆಲೆಯಲ್ಲಿ ಕಣದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳು ಮಾತ್ರ ಉಳಿದಿದ್ದು ಮತದಾನ ಘೋಷಣೆ ಮಾಡಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ನ ಸಿ.ಎನ್‌.ರೇಖಾ ರಮೇಶ್‌ಗೆ 14 ಮತ ಪಡೆದು ಅಧ್ಯಕ್ಷರ ಆಯ್ಕೆಯಾದರೆ, ಬಿಜೆಪಿ ಅಭ್ಯರ್ಥಿ ಸಿರೀಶ ಸತೀಶ್‌ ಕೇವಲ 6 ಮತಗಳನ್ನು ಪಡೆದು ಪರಾಭವಗೊಂಡರೆ ಓರ್ವ ಸದಸ್ಯರು ತಟಸ್ಥವಾಗಿ ದ್ದರು ಎಂದು ಹೇಳಿದರು. ನಗರಸಭೆಯ 31 ಸದಸ್ಯರ ಪೈಕಿ 7 ಬಿಎಸ್ಪಿ ಸದಸ್ಯರು ಅನರ್ಹಗೊಂಡಿದ್ದಾರೆ.

24 ಸದಸ್ಯರ ಸಂಖ್ಯಾಬಲದಲ್ಲಿ ಅಧ್ಯಕ್ಷರ ಚುನಾವಣೆಯಲ್ಲಿ ಕೇವಲ 21 ಸದಸ್ಯರು ಭಾಗವಹಿಸಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌, ಶಾಸಕ ಎನ್‌.ಮಹೇಶ್‌ ಎರಡು ಮತ ಸೇರಿದಂತೆ ಒಟ್ಟು ಐವರು ಗೈರು ಹಾಜರಾಗಿದ್ದರು.

ಸಹಕಾರ ನೀಡಿದವರಿಗೆ ಕೃತಜ್ಞತೆ: ನೂತನ ಅಧ್ಯಕ್ಷೆ ಸಿ.ಎ ನ್‌.ರೇಖಾ ರಮೇಶ್‌ ಮಾತನಾಡಿ, ಎಲ್ಲಾ ಸದಸ್ಯರ ಸಹಕಾರದೊಂದಿಗೆ ಉತ್ತಮ ರೀತಿಯ ಆಡಳಿತ ನಡೆಸಿ ನಗರಸ ಭೆಯ ಎಲ್ಲಾ ವಾರ್ಡುಗಳ ಅಭಿವೃದ್ಧಿಗೆ ಶ್ರಮಿಸುವೆ. ಅತಿ ಹೆಚ್ಚು ಮತಗಳಿಂದ ಆಯ್ಕೆ ಮಾಡಲು ಸಹಕರಿಸಿದ ಎಲ್ಲಾ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು.

ಅಸಮಾಧಾನ: ಅಧ್ಯಕ್ಷರ ಆಯ್ಕೆಯ ಬಳಿಕ ಕಾಂಗ್ರೆಸ್‌ನ ಸದಸ್ಯೆ ಸುಮಾಸುಬ್ಬಣ್ಣ ಮಾತನಾಡಿ, ಅಧ್ಯಕ್ಷ ಸ್ಥಾನ ಸಾಮಾನ್ಯ ಕ್ಷೇತ್ರಕ್ಕೆ ಇದ್ದು, ಲಿಂಗಾಯತ ಸಮಾಜಕ್ಕೆ ಸೇರಿದ ವರಿಗೆ ಅಧ್ಯಕ್ಷ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದ ಮಾಜಿ ಶಾಸಕ ಎಸ್‌.ಜಯಣ್ಣ ಸಮಾಜಕ್ಕೆ ದ್ರೋಹ ಎಸಗಿ ದ್ದಾರೆಂದು ಅಸಮಾಧಾನದ ಆಕ್ರೋಶ ವ್ಯಕ್ತಪಡಿಸಿದರು.

ಸಂಭ್ರಮ: ನೂತನ ಅಧ್ಯಕ್ಷರ ಆಯ್ಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ನಗರಸಭೆ ಮುಂಭಾಗ ಜಮಾಯಿಸಿ ಅಧ್ಯಕ್ಷರ ಘೋಷಣೆಯಾಗುತ್ತಿದ್ದಂತೆ ಮುಖಂಡರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.