ಆಕ್ಸಿಜನ್‌ ಇಲ್ಲದ್ದಕ್ಕೆ ಸತ್ತವರು 3 ಅಲ್ಲ, 36 ಮಂದಿ

ಸುಳ್ಳು ಹೇಳಿದ ಸುಧಾಕರ್‌ ವಜಾಗೊಳಿಸಿ !ತಪ್ಪಿತಸ್ಥರ ವಿರುದ್ಧ ಕೇಸ್‌ ದಾಖಲಿಸಿ: ಧ್ರುವ

Team Udayavani, May 14, 2021, 2:29 PM IST

130521chnp1_1305bg_2

ಚಾಮರಾಜನಗರ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕೋವಿಡ್‌-19ರ ಸಮಸ್ಯೆಗಳ ನಿಗಾವಣೆಗೆ ರಚಿಸಲಾದ ಸಮಿತಿಯ ವರದಿ ಯಲ್ಲಿ ಆಕ್ಸಿಜನ್‌ ಕೊರತೆಯಿಂದ 36 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಲಾಗಿದೆ. ಹೀಗಾಗಿ, ಮೂರೇ ಮಂದಿ ಮೃತಪಟ್ಟಿರುವುದು ಎಂದು ಸಮರ್ಥಿಸಿಕೊಂಡ ಆರೋಗ್ಯ ಸಚಿವ ಡಾ. ಸುಧಾಕರ್‌ ಅವರನ್ನು ಸಂಪುಟದಿಂದ ವಜಾ ಮಾಡಬೇಕು. ಅಲ್ಲದೇ ಈ ಘಟನೆಗೆ ಕಾರಣರಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ ಒತ್ತಾಯಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿದ ಅವರು, ರಾಜ್ಯದ ಜವಾಬ್ದಾರಿಯುತ ಸಚಿವರಾಗಿರುವ ಸುಧಾಕರ್‌ ಅವರು ಘಟನೆ ನಡೆದ ಮಾರನೆಯ ದಿನ ಚಾ.ನಗರಕ್ಕೆ ಬಂದು ಸುಳ್ಳು ಹೇಳಿದ್ದಾರೆ. ಮುಖ್ಯಮಂತ್ರಿ ಈ ಪ್ರಕರಣದ ತನಿಖೆಗೆ ಆದೇಶೀಸಿದ್ದಾರೆ. ತನಿಖೆಯ ನಂತರ ನಿಖರವಾಗಿ ತಿಳಿದು ಹೇಳುತ್ತೇನೆ ಎನ್ನಬಹುದಿತ್ತು. ಅಥವಾ ವೈದ್ಯರಿಂದ ಮಾಹಿತಿಯನ್ನು ಪಡೆದು ಇಷ್ಟು ಜನ ಮರಣ ಹೊಂದಿದ್ದಾರೆ ಎಂದು ತಿಳಿಸಬಹುದಿತ್ತು. ಆದರೆ ಅವರು ಸುಳ್ಳು ಹೇಳಿದ್ದಾರೆ ಎಂದರು. ಅಲ್ಲದೇ 304 ಸೆಕ್ಷನ್‌ ಅನ್ವಯಿಸಿ, ಈ ಸಾವಿಗೆ ಯಾರು ಯಾರು ಕಾರಣರಾಗಿದ್ದಾರೆ. ಆರೋಗ್ಯ ಸಚಿವರಿಂದ ಅಧಿಕಾರಿಗಳವರೆಗೆ ಅವರ ವಿರುದ್ಧ ಕೇಸ್‌ ದಾಖಲು ಮಾಡಬೇಕು. ಕಠಿಣ ಕ್ರಮ ಕೈಗೊಳ್ಳಬೇಕು. ಘಟನೆಯಲ್ಲಿ ಮೃತರಾದವರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ನ್ಯಾಯಮೂರ್ತಿ ಎನ್‌. ವೇಣುಗೋಪಾಲ ಗೌಡ ಅವರ ಅಧ್ಯಕ್ಷತೆಯ ಸಮಿತಿಯ ವರದಿಯಲ್ಲಿ ಮೇ 2 ರಿಂದ ಮೇ 3ರವರೆಗೆ ಚಾಮರಾಜನಗರ ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ನಡೆದ ಘಟನೆಗಳನ್ನು ಸವಿ ವರವಾಗಿ ತಿಳಿಸಲಾಗಿದೆ. 31 ಪುಟಗಳ ವರದಿಯನ್ನೂ ಸಲ್ಲಿಸಲಾಗಿದೆ. ಈ ವರದಿಯಲ್ಲಿ ಆಮ್ಲಜನಕ ಕೊರತೆಯಿಂದ 36 ಮಂದಿ ಮೃತಪಟ್ಟಿದ್ದಾರೆ ಎಂದು ಉಲ್ಲೇಖೀಸ ಲಾಗಿದೆ ಎಂದರು.

ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಈ ಘಟನೆಗೆ ರಾಜ್ಯ ಸರ್ಕಾರವೇ ನೇರ ಹೊಣೆ. ಅಂದು ಬೆಳಗ್ಗೆ 9 ಗಂಟೆಗೇ ಜಿಲ್ಲಾಧಿಕಾರಿಗೆ ಆಕ್ಸಿಜನ್‌ ಕೊರತೆ ಇದೆ ಎಂಬುದು ತಿಳಿದಿತ್ತು. ಆದರೂ ಕ್ರಮ ಕೈಗೊಂಡಿಲ್ಲ. ಸಚಿವ ಡಾ. ಸುಧಾಕರ್‌ಗೆ ಮಾನವೀಯ ಕಳಕಳಿ ಇರಲಿಲ್ಲ. ಮೂರೇ ಜನ ಸತ್ತಿರೋದು ಎಂದು ಬೇಜವಾಬ್ದಾರಿ ಉತ್ತರ ನೀಡಿದ್ದಾರೆ. ಸುಧಾಕರ್‌ ಅವರನ್ನು ಸಂಪುಟದಿಂದ ತಕ್ಷಣ ವಜಾ ಮಾಡಬೇಕು. ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಶಾಸಕ ಆರ್‌. ನರೇಂದ್ರ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.