ಜನರ ಸಮಸ್ಯೆ ಖುದ್ದು ಆಲಿಸಿ; ಬಿ.ಬಿ. ಕಾವೇರಿ
ಅರಣ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ತಿರಸ್ಕೃತಗೊಂಡಿರುವ ಅರ್ಜಿಗಳನ್ನು ಮರು ಪರಿಶೀಲಿಸಿ
Team Udayavani, Apr 23, 2022, 5:44 PM IST
ಚಾಮರಾಜನಗರ: ಜನರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ ಪರಿಹಾರ ನೀಡುವ ಕಾರ್ಯಕ್ಕೆ ಮುಂದಾಗುವಂತೆ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ. ಕಾವೇರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶುಕ್ರವಾರ, ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರೈತರ ಮನವೊಲಿಸಬೇಕು: ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಕೆಲವೆಡೆ ಅಧಿಕ ಮಳೆ-ಗಾಳಿಯಿಂದ ಬೆಳೆಹಾನಿಯಾಗಿದೆ. ಬೆಳೆ ಪರಿಹಾರ ನೀಡುವ ಸಂಬಂಧ ಯಾವುದೇ ಅರ್ಜಿಗಳನ್ನು ಬಾಕಿ ಉಳಿಸಿ ಕೊಳ್ಳದೇ ಸಮರ್ಪಕವಾಗಿ ವಿಲೇವಾರಿಯಾಗ ಬೇಕು. ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಾಗದಂತೆ ದಾಸ್ತಾನು ಮಾಡಿಕೊಳ್ಳಬೇಕು. ಬೆಳೆ ಸರ್ವೇ ಕಾರ್ಯದ ಪ್ರಗತಿ ಹೆಚ್ಚಿಸುವಂತೆ ರೈತರು ಹಾಗೂ ಪಿ.ಆರ್ ಅವರುಗಳ ಮನವೊಲಿಸಬೇಕು ಎಂದು ತಿಳಿಸಿದರು.
ಅರಣ್ಯ ಹಕ್ಕು ಕಾಯ್ದೆಯಡಿ ಕೊಳ್ಳೇಗಾಲ ಹೊರತುಪಡಿಸಿ ಉಳಿದ ತಾಲೂಕುಗಳು ನಿರೀ ಕ್ಷಿತ ಪ್ರಗತಿ ಸಾಧಿಸಿವೆ. ಕೊಳ್ಳೆಗಾಲ ತಾಲೂಕಿನಲ್ಲಿ 1461 ಹಕ್ಕುಪತ್ರಗಳನ್ನು ವಿತರಿ ಸಿದ್ದು, ಅರಣ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ತಿರಸ್ಕೃತಗೊಂಡಿರುವ ಅರ್ಜಿಗಳನ್ನು ಮರು ಪರಿಶೀಲಿಸಿ ಅವಶ್ಯವಿದ್ದರೆ ಪ್ರಸ್ತಾವನೆ ಸಲ್ಲಿಸುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.
ತಹಶೀಲ್ದಾರರು ಕ್ರಿಯಾಶೀಲರಾಗಬೇಕು: ಜಿಲ್ಲೆಯಲ್ಲಿ ಸರ್ಕಾರಿ ಜಮೀನು, ಸ್ಮಶಾನ ಹಾಗೂ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸುವ ಕಾರ್ಯ ಚುರುಕಾಗಬೇಕು. ಪೋಡಿ ಪ್ರಕರಣಗಳ ಇತ್ಯರ್ಥಕ್ಕೆ ಸೂಕ್ತ ಮಾನದಂಡ ಗಳನ್ನು ಅನುಸರಿಸಬೇಕು. ಭೂ ಮಾಪಕರು ನಿಗದಿಗೊಳಿಸಿರುವ ಸರ್ವೇ ಕಾರ್ಯವನ್ನು ಕ್ರಮಬದ್ಧವಾಗಿ ಮಾಡಬೇಕು. ಕೋವಿಡ್ ಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ ವಿಳಂಬ ವಾಗಬಾರದು. ಜನರ ಬೇಡಿಕೆಗನುಗುಣವಾಗಿ ಮೂಲಸೌಲಭ್ಯ ವಂಚಿತ ಹಳ್ಳಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಸರ್ಕಾರವೇ ಆದ್ಯತೆ ನೀಡಿದ್ದು, ಈ ನಿಟ್ಟಿನಲ್ಲಿ ಎಲ್ಲಾ ತಾಲೂಕು ತಹಶೀಲ್ದಾರರು ಕ್ರಿಯಾ ಶೀಲರಾಗಬೇಕು ಎಂದು ತಿಳಿಸಿದರು.
ಜವಾಬ್ದಾರಿಯುತ ಮಾರ್ಗದರ್ಶನ ನೀಡಬೇಕು: ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಚಾಮರಾಜನಗರ ಹಾಗೂ ಕೊಳ್ಳೇಗಾಲ ನಗರಸಭೆಗಳಲ್ಲಿ ಸಾಕಷ್ಟು ಸಕಾಲ ಅರ್ಜಿಗಳು ಬಾಕಿ ಇದ್ದು, ಸಕಾಲ ಅರ್ಜಿಗಳನ್ನು ಪ್ರಥಮಾಧ್ಯತೆ ಮೇರೆಗೆ ತ್ವರಿತ ವಾಗಿ ಪೂರ್ಣಗೊಳಿಸಬೇಕು. ಅರ್ಜಿಗಳ ವಿಲೇವಾರಿಗಾಗಿ ಜಿಲ್ಲಾ ನಗರಾಭಿವೃದ್ಧಿ ಕೋಶ ಅವಶ್ಯ ಜವಾಬ್ದಾರಿಯುತ ಮಾರ್ಗದರ್ಶನ ನೀಡಬೇಕು ಎಂದರು.
ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾ ಹಕ ಅಧಿಕಾರಿ ಕೆ.ಎಂ.ಗಾಯತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಬಿ. ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕುಮಾರ್, ತಹಶೀಲ್ದಾರರಾದ ಚಿದಾನಂದ ಗುರುಸ್ವಾಮಿ, ರವಿಶಂಕರ್, ಮಂಜುಳಾ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್. ಡಾ. ಸಂಜೀವ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕೆ.ಎಂ.ವಿಶ್ವೇಶ್ವರಯ್ಯ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
4ನೇ ಅಲೆ ಎದುರಿಸಲು ಸಿದ್ಧರಾಗಿ
ಕೋವಿಡ್ ಲಸಿಕೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮೊದಲ ಡೋಸ್ ನೀಡಿಕೆಯಲ್ಲಿ ಶೇ. 100 ಹಾಗೂ ಶೇ.98ರಷ್ಟು ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ಮುಂಜಾಗ್ರತೆ (ಪ್ರಿಕಾಶನ್) ಡೋಸ್ ಅನ್ನು ಜಿಲ್ಲೆಯಲ್ಲಿ ಈಗಾಗಲೇ 15,519 ಜನರಿಗೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಕೋವಿಡ್ 4ನೇ ಅಲೆ ತಡೆಗಾಗಿ ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸನ್ನದ್ಧವಾಗುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಭವಿಷ್ಯದ ಸಂಗೀತ ಕ್ಷೇತ್ರಕ್ಕೆ ಕರಾವಳಿ ಕೊಡುಗೆ
ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ | ಕೊಟ್ಟಿಗೆಹಾರ
ಮಸೀದಿಗಳಾಗಿ ಮಾರ್ಪಾಡಾದ 30 ಸಾವಿರ ದೇವಾಲಯಗಳನ್ನೂ ವಾಪಸ್ ಪಡೆಯುತ್ತೇವೆ : ಮುತಾಲಿಕ್
ಜೀರ್ಣೋದ್ದಾರ ನೆಪದಲ್ಲಿ ಪಂಪಾ ಸರೋವರದ ಮೂರ್ತಿಗಳ ಸ್ಥಳಾಂತರ : ಸಂಜೀವ ಮರಡಿ ವಿರೋಧ
ಗ್ರಾ.ಪಂ ಸದಸ್ಯನಿಗೆ ಕಪಾಳ ಮೋಕ್ಷ : ಪಿಎಸ್ ಐ ಅಮಾನತ್ತಿಗೆ ಒತ್ತಾಯಿಸಿ ಠಾಣೆಗೆ ಮುತ್ತಿಗೆ
ಹೊಸ ಸೇರ್ಪಡೆ
ನಪುಂಸಕರಿಗೆ ಮಾತ್ರ ನಪುಂಸಕ ಎಂದರೆ ಏನು ಎಂಬುದು ಗೊತ್ತು: ಸಿದ್ದುಗೆ ಈಶ್ವರಪ್ಪ ಟಾಂಗ್
ಕುಂದು ಕೊರತೆ ಪರಿಶೀಲನೆ: ಸೌಲಭ್ಯ ಒದಗಿಸಲು ಆಗ್ರಹ
ಕಡಬ: ರಸ್ತೆ ಬದಿಯ ಜ್ಯೂಸ್ ಅಂಗಡಿಯಲ್ಲಿಟ್ಟ ಕಬ್ಬನ್ನು ತಿಂದ ಕಾಡಾನೆ; ವಿಡಿಯೋ ವೈರಲ್
ಸಾಗರ: ಅರುಣ್ ಕುಗ್ವೆ ಬಂಧನಕ್ಕೆ ಗೋಪಾಲಕೃಷ್ಣ ಬೇಳೂರು ನೇತೃತ್ವದಲ್ಲಿ ಎಎಸ್ಪಿಗೆ ಮನವಿ
ಪಠ್ಯಪುಸ್ತಕ ಪರಿಷ್ಕರಣೆ; ಗೊಂದಲಗಳಿಗೆ ಸಿಎಂ ತೆರೆ ಎಳೆಯಬೇಕು: ಬರಗೂರು ರಾಮಚಂದ್ರಪ್ಪ