ವ್ಯಾಜ್ಯಗಳ ಇತ್ಯರ್ಥಕ್ಕಾಗಿ 14ಕ್ಕೆ ಲೋಕ ಅದಾಲತ್‌


Team Udayavani, Sep 7, 2019, 3:00 AM IST

vyajya

ಚಾಮರಾಜನಗರ: ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಪೈಕಿ ರಾಜಿ ಆಗಬಹುದಾದ ಸಿವಿಲ್‌ ಮತ್ತು ಕ್ರಿಮಿನಲ್‌ ಪ್ರಕರಣಗಳನ್ನು ಜನತಾ ನ್ಯಾಯಾಲಯದ ಮೂಲಕ ಇತ್ಯರ್ಥಗೊಳಿಸಲು ಸೆ.14ರಂದು ಲೋಕ ಅದಾಲತ್‌ ನಡೆಯಲಿದೆ. ಕಕ್ಷಿದಾರರು ಇದರ ಪ್ರಯೋಜನ ಪಡೆಯಬೇಕು ಎಂದು ಪ್ರಧಾನ ಮತ್ತು ಜಿಲ್ಲಾ ಸೆಷನ್ಸ ನ್ಯಾಯಾಧೀಶ ಜಿ.ಬಸವರಾಜ ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವ್ಯಾಜ್ಯ ಪೂರ್ವ ಪರಿಹಾರ ಕೇಂದ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯ ಕೊಳ್ಳೇಗಾಲ, ಗುಂಡ್ಲುಪೇಟೆ, ಯಳಂದೂರು ಹಾಗೂ ಚಾಮರಾಜನಗರ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಪಕ್ಷಗಾರರ ಒಪ್ಪಿಗೆ ಮೇರೆಗೆ ಲೋಕ್‌ ಅದಾಲತ್‌ನಲ್ಲಿ ಸಂಧಾನಕಾರರ ಸಮ್ಮುಖದಲ್ಲಿ ಪ್ರಕರಣಗಳನ್ನು ಇತ್ಯರ್ಥಗೊಳಿಸಿಕೊಳ್ಳಬಹು ಎಂದರು.

ಮೇಲ್ಮನವಿಗೆ ಅವಕಾಶ ಇಲ್ಲ: ಲೋಕ ಅದಾಲತ್‌ನಲ್ಲಿ ಕೌಟುಂಬಿಕ ವ್ಯಾಜ್ಯ, ಜೀವನಾಂಶದ ಪ್ರಕರಣ, ಮೋಟಾರ್‌ ವಾಹನ ಅಪಘಾತ ಪ್ರಕರಣ ಎಂಎಂಆರ್‌ಡಿ ಪ್ರಕರಣ, ಎಲ್ಲಾ ಕ್ರಿಮಿನಲ್‌ ಹಾಗೂ ಸಿವಿಲ್‌ ಪ್ರಕರಣ ಹಾಗೂ ಚೆಕ್‌ ಬೌನ್ಸ್‌ ಪ್ರಕರಣಗಳನ್ನು ರಾಜಿ ಮಾಡಿಕೊಂಡು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ. ಅದಾಲತ್‌ನಲ್ಲಿ ಇತ್ಯರ್ಥವಾಗುವ ಪ್ರಕರಣಗಳಲ್ಲಿ ಯಾವುದೇ ಮೇಲ್ಮನವಿಗೆ ಅವಕಾಶ ಇರುವುದಿಲ್ಲ. ಅದಾಲತ್‌ನಲ್ಲಿ ಬಗೆಹರಿಸಿಕೊಂಡ ಸಿವಿಲ್‌ ಪ್ರಕರಣಗಳಿಗೆ ಪಾವತಿಸಲಾದ ಶೇ.75ರಷ್ಟು ನ್ಯಾಯಾಲಯ ಶುಲ್ಕವನ್ನು ವಾಪಸ್ಸು ನೀಡಲಾಗುತ್ತದೆ. ಅದಾಲತ್‌ನಲ್ಲಿ ಶೀಘ್ರವಾಗಿ ಪ್ರಕರಣ ಬಗೆಹರಿಯಲಿದೆ ಎಂದು ವಿವರಿಸಿದರು.

ವಿವಿಧ ಪ್ರಕರಣಗಳ ವಿಚಾರಣೆ: ಜಿಲ್ಲೆಯಲ್ಲಿ ಒಟ್ಟು 8614 ಸಿವಿಲ್‌ ಹಾಗೂ 8984 ಕ್ರಿಮಿನಲ್‌ ಪ್ರಕರಣಗಳು ಇತ್ಯರ್ಥವಾಗದೆ ಉಳಿದಿವೆ. ಈ ಪೈಕಿ ಸೆ.14ರಂದು ನಡೆಯಲಿರುವ ಲೋಕ ಅದಾಲತ್‌ಗೆ 1155 ಸಿವಿಲ್‌ ಪ್ರಕರಣಗಳನ್ನು ಹಾಗೂ 820 ಕ್ರಿಮಿನಲ್‌ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲು ಗುರುತಿಸಲಾಗಿದೆ ಎಂದು ಹೇಳಿದರು.

ಕಕ್ಷಿಗಾರರಲ್ಲಿ ಉತ್ತಮ ಸಂಬಂಧ: ಲೋಕ ಅದಾಲತ್‌ನಲ್ಲಿ ಕಕ್ಷಿಗಾರರು ಪರಸ್ಪರ ಸೌಹಾರ್ದತೆಯಿಂದ ಒಪ್ಪಿ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳುವುದರಿಂದ ಉಭಯ ಕಕ್ಷಿಗಾರರ ಬಾಂಧವ್ಯವೂ ಉಳಿಯಲಿದೆ. ಉತ್ತಮ ಸಂಬಂಧ ಮುಂದುವರಿಯಲಿದೆ. ಹೀಗಾಗಿ ಲೋಕ ಅದಾಲತ್‌ನಲ್ಲಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಕಕ್ಷಿಗಾರರು ಮುಂದೆ ಬರಬೇಕು ಎಂದು ಸಲಹೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಸಿ.ಜಿ.ವಿಶಾಲಾಕ್ಷಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ‌ ಉಮ್ಮತ್ತೂರು ಇಂದುಶೇಖರ್‌, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಮಂಜು ಹರವೆ ಹಾಜರಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.