ವಿದ್ಯಾರ್ಥಿಗಳು ಓದಿನಲ್ಲಿ ಆಸಕ್ತಿ ಬೆಳೆಸಿಕೊಳ್ಳಿ

Team Udayavani, Jan 26, 2020, 3:00 AM IST

vidyarthigalu

ಯಳಂದೂರು: ಈಚೆಗೆ ಪುಸ್ತಕ ಪ್ರಕಾಶಕರ ಸಂಖ್ಯೆ ಕ್ಷೀಣಿಸುತ್ತಿದೆ. ಓದಿನ ಕಡೆ ಆಸಕ್ತಿ ಇಲ್ಲದಿರುವುದೇ ಇದಕ್ಕೆ ಕಾರಣ. ವಿದ್ಯಾರ್ಥಿಗಳು ಓದಿನಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು. ಪುಸ್ತಕ ಓದುವ ಹವ್ಯಾಸ ಹೆಚ್ಚಾಗಬೇಕು ಎಂದು ಬಿಳಿಗಿರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎಂ.ವಿ.ಪುಷ್ಪಕುಮಾರ್‌ ಸಲಹೆ ನೀಡಿದರು. ಪಟ್ಟಣದ ಬಿಳಿಗಿರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾಣ ಜಾಣೆಯರ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಪ್ರಕಾಶರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸಾಹಿತ್ಯದ ಗೀಳು ಹಚ್ಚಿಕೊಂಡವರು ಪ್ರಜ್ಞಾವಂತರಾಗುತ್ತಾರೆ. ಓದುವ ಅಭಿರುಚಿಯಿಂದ ಮನಸ್ಥಿತಿಯನ್ನು ಹತೋಟಿಯಲ್ಲಿಟ್ಟುಕೊಳ್ಳಬಹುದು. ಪುಸ್ತಕ ಖರೀದಿ ಮಾಡುವುದರಿಂದ ಪ್ರಕಾಶನ ಸಂಸ್ಥೆಗಳಿಗೂ ಲಾಭವಾಗುವುದರಿಂದ ಉತ್ತಮ ಪುಸ್ತಕ ಹೊರತರಲು ಸಾಧ್ಯವಾಗುತ್ತದೆ. ಜೊತೆಗೆ ಉದಯೋನ್ಮೊಖ ಲೇಖಕರನ್ನು ಬೆಳಕಿಗೆ ತರಲು ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿ ವಿದ್ಯಾರ್ಥಿಯೂ ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಎಚ್‌.ಎಸ್‌. ಪದ್ಮಾ ಮಾತನಾಡಿ, ಈಚೆಗೆ ಎಲೆಕ್ಟ್ರಾನಿಕ್‌ ಮಾಧ್ಯಮಗಳ ಭರಾಟೆ ಜೋರಾಗಿದೆ. ಅವುಗಳ ರಭಸಕ್ಕೆ ಪುಸ್ತಕ ಪ್ರಿಯರ ಸಂಖ್ಯೆ ಕುಗ್ಗಿದೆ. ಆದರೆ ಓದಿನಿಂದ ಪಡೆಯುವ ಜ್ಞಾನ ಸ್ಮತಿಪಟಲದಲ್ಲಿ ಹೆಚ್ಚು ಕಾಲ ಉಳಿಯುತ್ತದೆ. ಸಾಹಿತ್ಯವನ್ನು ಓದುವ ಬರೆಯುವ ಹವ್ಯಾಸವನ್ನು ಪ್ರತಿಯೊಬ್ಬರೂ ಇಟ್ಟುಕೊಳ್ಳಬೇಕು. ನಮ್ಮ ಬರವಣಿಗೆಗಳು ಪ್ರಕಟಗೊಂಡರೆ ನಮಗೆ ಇನ್ನಷ್ಟು ಸ್ಫೂರ್ತಿ ಬರುವ ಜೊತೆಗೆ ಜಗತ್ತಿಗೆ ನಮ್ಮ ಪರಿಚಯವಾಗುತ್ತದೆ. ಈ ಹವ್ಯಾಸ ನಮ್ಮನ್ನು ಜಾಗೃತ ಸ್ಥಿತಿಯಲ್ಲಿ ಇಡುತ್ತದೆ.

ಹಾಗಾಗಿ ಓದುವ ಹಾಗೂ ಬರೆಯುವ ಹವ್ಯಾಸಗಳನ್ನು ಇಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು. ಅಂಬಾ ಪ್ರಕಾಶನದ ಭಾನುಪ್ರಕಾಶ್‌ ಮಾತನಾಡಿ, ಪ್ರಕಾಶಕರಿಗೆ ಓದುಗರನ್ನು ಹುಡುಕುವುದೇ ದುಸ್ತರವಾಗಿದೆ. ಪುಸ್ತಕ ಅಚ್ಚು ಹಾಕಿಸುವವರ ಸಂಖ್ಯೆ ಕಡಿಮೆಯಾಗಿದೆ. ಇದರ ನಡುವೆ ಇದಕ್ಕೆ ಬೇಕಾಗುವ ಕಚ್ಚಾ ವಸ್ತುಗಳ ಬೆಲೆಗಳೂ ದುಬಾರಿಯಾಗಿದೆ. ಇಷ್ಟೆಲ್ಲಾ ಕಷ್ಟಪಟ್ಟು ಅಚ್ಚು ಹಾಕಿಸಿದ ಪುಸ್ತಕಕ್ಕೆ ಓದುಗ ಸಿಗದಿದ್ದಾಗ ಪ್ರಕಾಶಕ ಹಾಗೂ ಲೇಖಕನಿಗೆ ನಿರಾಸೆ ಹಾಗೂ ನಷ್ಟವಾಗುತ್ತದೆ.

ಹೀಗಾಗಿಯೇ ರಾಜ್ಯದಲ್ಲಿ ಪ್ರಕಾಶನ ಸಂಸ್ಥೆಗಳ ಸಂಸ್ಥೆ ಕಡಿಮೆಯಾಗಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಪುಸ್ತಕಗಳು ಸಂಗಾತಿಯಾಗಬೇಕು ವ್ಯಾಸಂಗದ ಅವಧಿಯಲ್ಲಿ ಕಲಿಕೆ ನಿರಂತರವಾಗಿರಬೇಕು. ಪಠ್ಯದ ಜೊತೆಗೆ ಇತರೆ ಪುಸ್ತಕಗಳನ್ನು ಕೊಂಡು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಉಪನ್ಯಾಸಕರಾದ ಪ್ರಕಾಶ್‌ಮೂರ್ತಿ, ಶಿವರುದ್ರಪ್ಪ, ಹೇಮಂತ್‌ಕುಮಾರ್‌, ಗಣೇಶ್‌ಪ್ರಸಾದ್‌ ಇತರರು ಇದ್ದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.