ಮಾದಪ್ಪನ ಹುಂಡಿಯಲ್ಲಿ ದಾಖಲೆಯ ನಗದು, 28 ದಿನಗಳಲ್ಲಿ 2.83 ಕೋಟಿ ನಗದು ಸಂಗ್ರಹ


Team Udayavani, Mar 12, 2022, 7:04 PM IST

ಮಾದಪ್ಪನ ಹುಂಡಿಯಲ್ಲಿ ದಾಖಲೆಯ ನಗದು ಸಂಗ್ರಹ, 28 ದಿನಗಳಲ್ಲಿ 2.83ಕೋಟಿ ನಗದು ಸಂಗ್ರಹ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಪ್ರಕ್ರಿಯೆಯು ಜರುಗಿದ್ದು ಕಳೆದ 28 ದಿನಗಳಲ್ಲಿ ಸಾರ್ವಕಾಲೀಕ ದಾಖಲೆಯ 2.83 ಕೋಟಿ ನಗದು, 73ಗ್ರಾಂ ಚಿನ್ನ ಮತ್ತು 3.8ಕೆ.ಜಿ ಬೆಳ್ಳಿ ಸಂಗ್ರಹವಾಗಿದೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಖಾಸಗಿ ಬಸ್ ನಿಲ್ದಾಣ ಸಮೀಪದ ವಾಣಿಜ್ಯ ಸಂಕೀರ್ಣದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾದ ಹುಂಡಿ ಎಣಿಕೆಯು ತಡರಾತ್ರಿ 12 ಗಂಟೆಯವರೆಗೂ ಜರುಗಿತು. ಈ ಬಾರಿ ಕಳೆದ 28 ದಿನಗಳ ಅವಧಿಯಲ್ಲಿ ಮಲೆ ಮಾದಪ್ಪನ ಹುಂಡಿಯಲ್ಲಿ 2,83, 12,841(ಎರಡು ಕೋಟಿ ಎಂಭತ್ತಮೂರು ಲಕ್ಷದ ಹನ್ನೆರೆಡು ಸಾವಿರದ ಎಂಟುನೂರ ನಲವತ್ತೊಂದು)ರೂ ನಗದು, 73 ಗ್ರಾಂ ಚಿನ್ನದ ಪದಾರ್ಥಗಳು ಮತ್ತು 3.8 ಕೆ,ಜಿ ಬೆಳ್ಳಿಯ ಪದಾರ್ಥಗಳು ಸಂಗ್ರಹವಾಗಿವೆ. ಈ ಬಾರಿ ಕಳೆದ 28 ದಿನಗಳ ಅವಧಿಯಲ್ಲಿ ಸಂಗ್ರಹವಾಗಿರುವ ಮೊತ್ತವು ಸಾರ್ವಕಾಲೀಕ ದಾಖಲೆಯ ಮೊತ್ತವಾಗಿದೆ.

ಹುಂಡಿ ಎಣಿಕೆ ಪ್ರಕ್ರಿಯೆಯು ಸಾಲೂರು ಬೃಹನ್ಮಠದ ಶಾಚಿತಮಲ್ಲಿಕಾರ್ಜುನ ಶ್ರೀಗಳ ದಿವ್ಯಸಾನಿಧ್ಯದಲ್ಲಿ ಮಲೆ ಮಹದೇಶ್ವರ ಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಹುಂಡಿ ಎಣಿಕೆ ಪ್ರಕ್ರಿಯೆಯಲ್ಲಿ ಪ್ರಾಧಿಕಾರದ ಅಧಿಕಾರಿ ಮತ್ತು ಸಿಬ್ಬಂದಿ, ಮಹದೇಶ್ವರ ಬೆಟ್ಟ ಎಸ್‍ಬಿಐ ಬ್ಯಾಂಕಿನ ಶಾಖೆಯ ವ್ಯವಸ್ತಾಪಕರು ಮತ್ತು ಸಿಬ್ಬಂದಿ ಹಾಜರಿದ್ದರು. ಹುಂಡಿ ಎಣಿಕೆ ಪ್ರಕ್ರಿಯೆಯು ಸಿಸಿಕ್ಯಾಮರ ಕಣ್ಗಾವಲಿನಲ್ಲಿ ಜರುಗಿತು. ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು.

ಇದನ್ನೂ ಓದಿ : ನಾನಿಲ್ಲಿಗೆ ಬರದೇ ಇದ್ರೆ ಸತ್ತು 8 ವರ್ಷ ಆಗಬೇಕಾಗಿತ್ತು

ಹೆಚ್ಚಿನ ಭಕ್ತಾದಿಗಳು ಭೇಟಿ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಕಳೆದ 28 ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭೇಟಿ ನೀಡಿದ್ದರು. ಮಹಾಶಿವರಾತ್ರಿ ಜಾತ್ರಾ ಸಂದರ್ಭದಲ್ಲಿ ರಾಜ್ಯದ ರಾಮನಗರ, ಚನ್ನಪಟ್ಟಣ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಭಾಗಗಳಿಂದ ಹೆಚ್ಚಿನ ಭಕ್ತಾದಿಗಳು ಪಾದಯಾತ್ರೆಯಲ್ಲಿ ಹಾಗೂ ನೆರೆಯ ತಮಿಳುನಾಡು ಆಂಧ್ರಪ್ರದೇಶ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಲಕ್ಷಾಂತರ ಭಕ್ತಾದಿಗಳು ಆಗಮಿಸಿದ್ದರು. ಅಲ್ಲದೆ ಕಳೆದ 2 ವರ್ಷಗಳಿಂದ ಕೋವಿಡ್ ನಿಯಮಾವಳಿಗಳಿಂದ ಜಾತ್ರಾ ಸಂದರ್ಭಗಳಲ್ಲಿ ಹಲವು ನಿರ್ಬಂಧಗಳನ್ನು ವಿಧಿಸಲಾಗುತಿತ್ತು. ಆದರೆ ಈ ಬಾರಿ ಎಲ್ಲಾ ನಿರ್ಬಂಧಗಳಿಂದ ವಿನಾಯಿತಿ ನೀಡಿದ್ದ ಹಿನ್ನೆಲೆ ಶಿವರಾತ್ರಿ ಸಂದರ್ಭದ ಆಸುಪಾಸಿನ ಒಂದು ವಾರದಲ್ಲಿ 10ಲಕ್ಷಕ್ಕೂ ಹೆಚ್ಚಿನ ಭಕ್ತಾದಿಗಳು ಆಗಮಿಸಿದ್ದರು. ಅಲ್ಲದೆ ವಾರಾಂತ್ಯ, ಸರ್ಕಾರಿ ರಜಾ ಸಂದರ್ಭದಲ್ಲಿಯೂ ಹೆಚ್ಚಿನ ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ್ದರು.

– ವಿನೋದ್ ಎನ್ ಗೌಡ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.