ಹಣದ ವಿಚಾರಕ್ಕೆ ಮಹಿಳೆಯನ್ನು ಕೊಲೆಗೈದಿದ್ದಾತನಿಗೆ ಜೀವಾವಧಿ ಶಿಕ್ಷೆ
Team Udayavani, Nov 26, 2020, 9:39 PM IST
ಸಾಂದರ್ಭಿಕ ಚಿತ್ರ
ಚಾಮರಾಜನಗರ: ಹಣದ ವಿಚಾರಕ್ಕೆ ಮಹಿಳೆಯನ್ನು ಕೊಲೆ ಮಾಡಿದ್ದ ವ್ಯಕ್ತಿಗೆ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದ ಆನಂದ ಕುಮಾರ ಶಿಕ್ಷೆಗೊಳಗಾದ ವ್ಯಕ್ತಿ. ಈತ ಅದೇ ಗ್ರಾಮದ ರತ್ನಮ್ಮ ಎಂಬಾಕೆಯ ಪತಿ ರಾಮಚಂದ್ರ ಅವರಿಂದ 10 ಸಾವಿರ ರೂ. ಸಾಲ ಪಡೆದಿದ್ದ. ಸಾಲದ ಹಣವನ್ನು ರತ್ನಮ್ಮಳಿಗೆ ವಾಪಸ್ ನೀಡಲು ಹೋದಾಗ ಇದಕ್ಕೆ ಬಡ್ಡಿ ಸೇರಿಸಿ ಹೆಚ್ಚಿನ ಮೊತ್ತ ನೀಡಬೇಕೆಂದು ರತ್ನಮ್ಮ ಒತ್ತಾಯಿಸಿದ್ದರು. ಆಗ ಇಬ್ಬರಿಗೂ ಜಗಳವಾಗಿತ್ತು.
ಇದೇ ದ್ವೇಷದಿಂದ 2016ರ ಫೆ. 13ರಂದು ಸಂಜೆ 4.30ರಲ್ಲಿ ರತ್ನಮ್ಮ ತೆರಕಣಾಂಬಿ ಯ ರಾಮಮಂದಿರದ ಬಳಿ ನಡೆದು ಹೋಗುತ್ತಿದ್ದಾಗ, ಸೈಕಲ್ನಲ್ಲಿ ಬಂದ ಆನಂದಕುಮಾರ ಸಾಲದ ಹಣ ಪಾವತಿ ಮಾಡಲು ಬಂದರೆ ಹೆಚ್ಚು ಹಣ ಕೇಳುತ್ತೀರಾ ಎಂದು ಅವಾಚ್ಯ ಶಬ್ದಗಳಿಂದ ಬೈದು ರತ್ನಮ್ಮಳ ಮೇಲೆ ಮಚ್ಚಿನಿಂದ ತೀವ್ರ ಹಲ್ಲೆ ಮಾಡಿದ್ದ. ಇದರಿಂದ ರತ್ನಮ್ಮ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಕೊಲೆ ಮಾಡಿರುವುದು ರುಜುವಾತಾಗಿದ್ದರಿಂದ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶ ಸದಾಶಿವ ಸುಲ್ತಾನ್ಪುರಿ ಅವರು ಆನಂದನಿಗೆ ಜೀವಾವಧಿ ಶಿಕ್ಷೆ ಹಾಗೂ 6,500 ರೂ. ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಟಿ.ಎಚ್. ಲೋಲಾಕ್ಷಿ ವಾದ ಮಂಡಿಸಿದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ಜಿಲ್ಲಾಧ್ಯಕ್ಷರಿಂದ ಗ್ರಾ.ಪಂ. ನೂತನ ಸದಸ್ಯರಿಗೆ ಹಣ ಹಂಚಿಕೆ: ಫೋಟೋ ವೈರಲ್
ರಾಷ್ಟ್ರಪತಿ ಪದಕಕ್ಕೆ ಚಾಮರಾಜನಗರ ಇನ್ಸ್ಪೆಕ್ಟರ್ ಬಿ.ಪುಟ್ಟಸ್ವಾಮಿ ಆಯ್ಕೆ
60 ಅಡಿ ಆಳದ ಬಾವಿಗೆ ಬಿದ್ದ ಹಸು : ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ
ಭಾರೀ ಚರ್ಚೆಗೆ ಗ್ರಾಸವಾದ ಬಿಜೆಪಿ-ಜೆಡಿಎಸ್ ಬೆಂಬಲಿತ ಸದಸ್ಯರ ಮೈತ್ರಿ ಧರ್ಮಪಾಲನೆ ಆಣೆ ಪ್ರಮಾಣ
ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ಗೆ ಮಾದಮ್ಮ ರಾಜ್ಯದ ಪ್ರತಿನಿಧಿ
MUST WATCH
ಉಡುಪಿ ಕೃಷ್ಣ ಮಠಕ್ಕೆ ಬಾಳೆ ಎಲೆಯನ್ನು ನೀಡುವ ಯುವಕ
ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ಹೊಸ ಸೇರ್ಪಡೆ
ಪದ್ಮ ಪ್ರಶಸ್ತಿ ಪ್ರಕಟ : ಬಿ.ಎಂ.ಹೆಗ್ಡೆ, ಎಸ್.ಪಿಬಿಗೆ ಪದ್ಮವಿಭೂಷಣ, ಕಂಬಾರರಿಗೆ ಪದ್ಮಭೂಷಣ
ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ, ಯಶಸ್ಸು ಸಾಧಿಸಬೇಕು: ಡಿಸಿಎಂ ಅಶ್ವಥ್ನಾರಾಯಣ
ಹುಣಸೋಡು ಸ್ಫೋಟ ಪ್ರಕರಣ :ಕ್ರಷರ್ ಮಾಲೀಕ ಸೇರಿ ನಾಲ್ವರನ್ನು ಬಂಧಿಸಿದ ಪೊಲೀಸರು
ಮೇಲುಕೋಟೆ ವಜ್ರಾಂಗಿ ಆಭರಣ ಅವ್ಯವಹಾರ ಪ್ರಕರಣ: ಅರ್ಚಕ ನರಸರಾಜಭಟ್ ನೇಮಕಕ್ಕೆ ಹೈಕೋರ್ಟ್ ತಡೆ
145 ದಿನಗಳ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ನಟಿ ರಾಗಿಣಿ ಬಿಡುಗಡೆ