ರಂಜಾನ್‌ ಹಬ್ಬಕ್ಕೆ ಮಾಂಸದ ಬೆಲೆ ದುಬಾರಿ

Team Udayavani, May 24, 2020, 5:11 AM IST

seast ram

ಯಳಂದೂರು: ರಂಜಾನ್‌ ಹಬ್ಬದ ಸನಿಹದಲ್ಲಿರುವಂತೆಯೇ ಮಾಂಸದ ಬೆಲೆ ದುಬಾರಿಯಾಗಿದೆ. ಪಟ್ಟಣದಲ್ಲಿ ಕುರಿ, ಆಡು ಮಾಂಸಕ್ಕೆ ಕೆ.ಜಿ.ಗೆ 700 ರೂ. ದಾಟುವ ಸಂಭವವಿದೆ. ಹಾಗೆಯೇ ಕೋಳಿ ಮಾಂಸವೂ 200 ರೂ.ರಿಂದ 225  ರೂ.ಗೆ ಮಾರಾಟವಾಗುತ್ತಿದೆ.

ಲಾಕ್‌ಡೌನ್‌ ಪರಿಣಾಮ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಂತೆ, ಕುರಿ ಮಾರುಕಟ್ಟೆಗಳು ಸ್ಥಗಿತಗೊಂಡಿವೆ. ಜಿಲ್ಲೆಯ ಸುತ್ತಮುತ್ತಲ ಪ್ರದೇಶಕ್ಕೆ ಸಂತೆಮರಹಳ್ಳಿ ಹಾಗೂ ತೆರಕಣಾಂಬಿಯಲ್ಲಿ ನಡೆಯುವ ಸಂತೆ ಕುರಿ, ಮೇಕೆಗಳ ಮರಾಟ  ಹೆಚ್ಚಾಗುತ್ತಿತ್ತು. ಇಲ್ಲಿಗೆ ಮಂಡ್ಯ ಜಿಲ್ಲೆಯಿಂದಲೂ ಜಾನುವಾರುಗಳನ್ನು ತಂದು ಮಾರಾಟ ಮಾಡು ತ್ತಿದ್ದರು. ಆದರೆ ಈಗ ಸಂತೆ ಹಾಗೂ ಮಾರುಕಟ್ಟೆಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ. ಇದರಿಂದ  ಕುರಿ,ಮೇಕೆಗಳ ಮಾರಾಟ  ಕಡಿಮೆಯಾಗಿರುವುದೇ ಮಾಂಸದ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ.

ಹಳ್ಳಿಗಳತ್ತ ಮಾಲೀಕರು: ಮಾಂಸದಂಗಡಿ ಮಾಲೀಕರೇ ಕುರಿ ಖರೀದಿಸಲು ಹಳ್ಳಿಗಳಿಗೆ ಹೋಗುತ್ತಿದ್ದಾರೆ. ಜಿಲ್ಲೆಯಲ್ಲಿ ಕುರಿ, ಮೇಕೆಗಳನ್ನು ಸಾಕುವವರ ಸಂಖ್ಯೆ  ಕಡಿಮೆ ಇದೆ. ಹಳ್ಳಿಗಳಲ್ಲಿ ಅವರು ಹೇಳಿರುವ ಬೆಲೆಗೇ ಕೊಂಡುಕೊಳ್ಳುವ  ಅನಿವಾರ್ಯತೆಯೂ ಇದೆ.

ಕೋಳಿ ಬೆಲೆಯೂ ಹೆಚ್ಚಳ: ಇತ್ತ ಹಕ್ಕಿ ಜ್ವರದ ಹಿನ್ನೆಲೆಯಲ್ಲಿ ಕೋಳಿ ಫಾರಂಗಳಲ್ಲಿ ಕೋಳಿಗಳನ್ನು ಜೀವಂತ ಸಮಾಧಿ ಮಾಡಿದ ಹಿನ್ನೆಲೆಯಲ್ಲಿ ಕೋಳಿಗಳಿಗೂ ಬೇಡಿಕೆ ಹೆಚ್ಚಾಗಿದೆ. ಕೆ.ಜಿ.ಗೆ 140 ರಿಂದ 150 ಇದ್ದ ಬೆಲೆ ದಿಢೀರ್‌ 200ರಿಂದ   225 ರೂ.ಗೆ ಏರಿಕೆಯಾಗಿದೆ.

ಮಂಡ್ಯದಿಂದ ಬರ್ತೀತ್ತು: ಮಂಡ್ಯ ಜಿಲ್ಲೆಯಿಂದಲೇ ಹೆಚ್ಚು ಕುರಿಗಳು ಮಾರಾಟಕ್ಕೆ ಬರಿ¤ತ್ತು. ಲಾಕ್‌ಡೌನ್‌ ಕಾರಣ ಸಂತೆ, ಮಾರುಕಟ್ಟೆ ಇಲ್ಲದೆ, ಅಲ್ಲಿಂದ ಕುರಿಗಳು ಬರ್ತಿಲ್ಲ. ಗ್ರಾಮಗಳಿಗೆ ನಾವೇ ತೆರಳಿ ಕುರಿ ಖರೀದಿಸಬೇಕಿದೆ. ರೈತರೂ ಕುರಿ  ಬೆಲೆ ಹೆಚ್ಚಿಸುತ್ತಿದ್ದು, ನಾವೂ ಮಾಂಸದ ಬೆಲೆ ಹೆಚ್ಚಿಸುವ ಅನಿವಾರ್ಯತೆ ಇದೆ ಎನ್ನುತ್ತಾರೆ ಮಾಂಸ ಮಾರಾಟಗಾರ ಸಾಧಿಕ್‌.

ಟಾಪ್ ನ್ಯೂಸ್

ಕನ್ನಡದ ಶಾಲು ಧರಿಸಿ ಗಮನ ಸೆಳೆದ ಕೋಟ ಶ್ರೀನಿವಾಸ ಪೂಜಾರಿ

ಕನ್ನಡದ ಶಾಲು ಧರಿಸಿ ಗಮನ ಸೆಳೆದ ಕೋಟ ಶ್ರೀನಿವಾಸ ಪೂಜಾರಿ

tree

Belthangady ರಸ್ತೆಗೆ ಬಿದ್ದ ಮರ; ವಾಹನಗಳಿಗೆ ಹಾನಿ

ಓವರ್‌ ಡ್ರಾಫ್ಟ್‌ ಗುರಿ ಸಾಧನೆಯಲ್ಲಿ ಹಿನ್ನಡೆ: ಜಿ.ಪಂ.ಸಿಇಒ ಅಸಮಾಧಾನ

ಓವರ್‌ ಡ್ರಾಫ್ಟ್‌ ಗುರಿ ಸಾಧನೆಯಲ್ಲಿ ಹಿನ್ನಡೆ: ಜಿ.ಪಂ.ಸಿಇಒ ಅಸಮಾಧಾನ

ರಾಜ್ಯ ಧಾರ್ಮಿಕ ಪರಿಷತ್‌ ಸಭೆ: ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರರಾಜ್ಯ ಧಾರ್ಮಿಕ ಪರಿಷತ್‌ ಸಭೆ: ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರ

ರಾಜ್ಯ ಧಾರ್ಮಿಕ ಪರಿಷತ್‌ ಸಭೆ: ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರ

ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್‌ ವಿರುದ್ಧ ಬಿಜೆಪಿಯಿಂದ ಪೋಸ್ಟರ್‌ ಅಭಿಯಾನ

ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್‌ ವಿರುದ್ಧ ಬಿಜೆಪಿಯಿಂದ ಪೋಸ್ಟರ್‌ ಅಭಿಯಾನ

Kukke Shree Subrahmanya: ನಾಣ್ಯದಲ್ಲಿ ತುಲಾಭಾರ ಸೇವೆ ಸಲ್ಲಿಸಿದ ಬಿ.ಎಸ್‌.ವೈ.

Kukke Shree Subrahmanya: ನಾಣ್ಯದಲ್ಲಿ ತುಲಾಭಾರ ಸೇವೆ ಸಲ್ಲಿಸಿದ ಬಿ.ಎಸ್‌.ವೈ.

Subramanya ಬೈಕ್‌ ಸವಾರರ ಮೇಲೆ ಹಲ್ಲೆ: ವೀಡಿಯೋ ವೈರಲ್‌

Subramanya ಬೈಕ್‌ ಸವಾರರ ಮೇಲೆ ಹಲ್ಲೆ: ವೀಡಿಯೋ ವೈರಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road mishap: ಖಾಸಗಿ ಬಸ್ – ಗೂಡ್ಸ್ ವಾಹನದ ನಡುವೆ ಅಪಘಾತ: ಇಬ್ಬರಿಗೆ ಸಣ್ಣಪುಟ್ಟ ಗಾಯ

Road mishap: ಖಾಸಗಿ ಬಸ್ – ಗೂಡ್ಸ್ ವಾಹನದ ನಡುವೆ ಅಪಘಾತ: ಇಬ್ಬರಿಗೆ ಸಣ್ಣಪುಟ್ಟ ಗಾಯ

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಪೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಫೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

1-wdadasd

Chamarajanagar: ಲೊಕ್ಕನಹಳ್ಳಿ ಸಮೀಪ ಹುಲಿಯ ಮೃತ ದೇಹ ಪತ್ತೆ

Bandipur: ವಿದ್ಯುತ್ ಸ್ಪರ್ಶದಿಂದ ಹೆಣ್ಣು ಚಿರತೆ ಸಾವು

Bandipur: ವಿದ್ಯುತ್ ಸ್ಪರ್ಶದಿಂದ ಹೆಣ್ಣು ಚಿರತೆ ಸಾವು

7-

Gundlupete: ಕುಡಿದ ಮತ್ತಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

ಕನ್ನಡದ ಶಾಲು ಧರಿಸಿ ಗಮನ ಸೆಳೆದ ಕೋಟ ಶ್ರೀನಿವಾಸ ಪೂಜಾರಿ

ಕನ್ನಡದ ಶಾಲು ಧರಿಸಿ ಗಮನ ಸೆಳೆದ ಕೋಟ ಶ್ರೀನಿವಾಸ ಪೂಜಾರಿ

tree

Belthangady ರಸ್ತೆಗೆ ಬಿದ್ದ ಮರ; ವಾಹನಗಳಿಗೆ ಹಾನಿ

ಓವರ್‌ ಡ್ರಾಫ್ಟ್‌ ಗುರಿ ಸಾಧನೆಯಲ್ಲಿ ಹಿನ್ನಡೆ: ಜಿ.ಪಂ.ಸಿಇಒ ಅಸಮಾಧಾನ

ಓವರ್‌ ಡ್ರಾಫ್ಟ್‌ ಗುರಿ ಸಾಧನೆಯಲ್ಲಿ ಹಿನ್ನಡೆ: ಜಿ.ಪಂ.ಸಿಇಒ ಅಸಮಾಧಾನ

ರಾಜ್ಯ ಧಾರ್ಮಿಕ ಪರಿಷತ್‌ ಸಭೆ: ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರರಾಜ್ಯ ಧಾರ್ಮಿಕ ಪರಿಷತ್‌ ಸಭೆ: ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರ

ರಾಜ್ಯ ಧಾರ್ಮಿಕ ಪರಿಷತ್‌ ಸಭೆ: ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರ

ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್‌ ವಿರುದ್ಧ ಬಿಜೆಪಿಯಿಂದ ಪೋಸ್ಟರ್‌ ಅಭಿಯಾನ

ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್‌ ವಿರುದ್ಧ ಬಿಜೆಪಿಯಿಂದ ಪೋಸ್ಟರ್‌ ಅಭಿಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.