ವಿಕೋಪಗಳ ನಿರ್ವಹಣೆಯಲ್ಲಿ ಮಾಧ್ಯಮಗಳ ಸಹಕಾರ ಮುಖ್ಯ

Team Udayavani, Jul 31, 2019, 3:00 AM IST

vikopa

ಚಾಮರಾಜನಗರ: ವಿಕೋಪಗಳ ನಿರ್ವಹಣೆಯಲ್ಲಿ ಜಿಲ್ಲಾಡಳಿತ ಜೊತೆಗೆ ಮಾಧ್ಯಮಗಳ ಸಹಕಾರ ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಹೇಳಿದರು. ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾಡಳಿತ ಹಾಗೂ ಮೈಸೂರಿನ ಆಡಳಿತ ತರಬೇತಿ ಸಂಸ್ಥೆ ವಿಕೋಪ ನಿರ್ವಹಣಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಮಾಧ್ಯಮ ಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ವಿಕೋಪ ನಿರ್ವಹಣೆಯಲ್ಲಿ ಮಾಧ್ಯಮದ ಪಾತ್ರ ಎಂಬ ವಿಷಯ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಜನರ ಆತಂಕ ನಿವಾರಣೆ: ವಿಪತ್ತುಗಳು ಎದುರಾದ ಸಂದರ್ಭದಲ್ಲಿ ಮಾಧ್ಯಮಗಳು ಆಡಳಿತ ವರ್ಗದೊಂದಿಗೆ ನಿಕಟ ಸಂಪರ್ಕ ಇಟ್ಟುಕೊಂಡು ನಿಖರ ಮಾಹಿತಿ ಪಡೆಯುವುದರಿಂದ ಸುದ್ದಿಯು ಸಹ ಜನರಿಗೆ ಸರಿಯಾದ ದಿಕ್ಕಿನಲ್ಲಿ ತಲುಪಲಿದೆ. ಮಾಧ್ಯಮಗಳು ಸರಿಯಾದ ಮಾಹಿತಿಯನ್ನು ನೀಡುವ ಮೂಲಕ ಜನರ ಆತಂಕವು ನಿವಾರಣೆ ಮಾಡಬಹುದಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸಲಹೆ: ವಿಪತ್ತು ನಿರ್ವಹಣೆಗೆ ವಿವಿಧ ಇಲಾಖೆಯ ಸಹಭಾಗಿತ್ವ ಪ್ರಮುಖ ಪಾತ್ರವಹಿಸುತ್ತದೆ. ಪ್ರಾಮಾಣಿಕತೆ‌, ಪರಿಶ್ರಮ, ದಕ್ಷತೆಯಿಂದ ಕಾರ್ಯ ನಿರ್ವಹಿಸಿದರೆ ಎಂತಹ ವಿಕೋಪವನ್ನು ಸಮರ್ಥವಾಗಿ ಎದರಿಸಬಹುದು. ವಿಕೋಪ ಎದುರಾಗಬಹುದಾದ ದುರ್ಬಲ ಪ್ರದೇಶಗಳ ಮೇಲೆ ಮುನ್ನೆಚ್ಚರಿಕೆ ಇರಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.

ಸಕರಾತ್ಮಕ ವರದಿ ಮಾಡಿ: ಮಾಧ್ಯಮಗಳು ಸಕರಾತ್ಮಕ ವರದಿಗಳನ್ನು ಮಾಡಬೇಕಿದೆ. ಜತೆಗೆ ಆಡಳಿತ ವರ್ಗವನ್ನು ಎಚ್ಚರಿಸುವ ಕೆಲಸವನ್ನು ಮಾಧ್ಯಮಗಳು ಮಾಡುವ ಹೊಣೆಗಾರಿಕೆ ಇದೆ. ಪರಸ್ಪರ ಸಹಕಾರ ಸಮನ್ವಯ, ಸಂಪರ್ಕದಿಂದ ವಿಪತ್ತುಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಬಹುದಾಗಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಸಂಭವಿಸಿದ ದಾಸನಪುರ ಪ್ರವಾಹ ದುರಂತ, ಸುಳ್ವಾಡಿ ವಿಷ ಪ್ರಸಾದ ಪ್ರಕರಣಗಳನ್ನು ಜಿಲ್ಲಾಡಳಿತ ನಿಭಾಯಿಸುವಲ್ಲಿ ಮಾಧ್ಯಮಗಳು ಪೂರಕ ಸಹಕಾರ ನೀಡಿವೆ ಎಂದು ಜಿಲ್ಲಾಧಿಕಾರಿ ಸ್ಮರಿಸಿದರು.

ಋಣಾತ್ಮಕ ಸಂದೇಶ ತಡೆಗಟ್ಟಿ: ವಿಕೋಪ ನಿರ್ವಹಣಾ ಕೇಂದ್ರದ ತರಬೇತಿ ನಿರ್ದೇಶಕ‌ ಡಾ.ದಿಲೀಪ್‌ ಕುಮಾರ್‌ ಮಾತನಾಡಿ, ವಿಕೋಪ ನಡೆದ ಸಂದರ್ಭದಲ್ಲಿ ಮಾಧ್ಯಮಗಳ ವರದಿ ಅಧಿಕಾರಿಗಳಿಗೆ ವಿಕೋಪ ನಿರ್ವಹಣಾ ಕಾರ್ಯನಿರ್ವಹಿಸಲು ಸಹಕಾರಿಯಾಗುತ್ತದೆ. ಅನಾಹುತಗಳ ಕುರಿತು ಋಣಾತ್ಮಕ ಸಂದೇಶಗಳನ್ನು ಮಾಧ್ಯಮಗಳಿಂದ ತಡೆಗಟ್ಟ ಬಹುದಾಗಿದೆ ಎಂದರು.

ಜನರ ಮನಸ್ಸಿನ ಆತಂಕ ಹೋಗಲಾಡಿಸಿ: ವಿಕೋಪದ ಮುನ್ನ, ವಿಕೋಪದ ಸಂದರ್ಭ, ವಿಕೋಪದ ನಂತರದ ಸಮಯದಲ್ಲಿ ಸರಿಯಾದ ಮಾಹಿತಿ ವಿಸ್ತರಣೆ ಮುಖ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಜನರ ಮನಸ್ಸಿನ ಆತಂಕಗಳನ್ನು ಹೋಗಲಾಡಿಸಲು ಮಾಧ್ಯಮದ ವರದಿಗಳು ಪ್ರಮುಖ ಪಾತ್ರವಹಿಸುತ್ತದೆ ಎಂದು ತರಬೇತಿ ನಿರ್ದೇಶಕ ದಿಲೀಪ್‌ ತಿಳಿಸಿದರು. ವಿಕೋಪ ನಿರ್ವಹಣಾ ಕೆಂದ್ರದ ಬೋಧಕ ಚಂದ್ರನಾಯಕ್‌ ಮಾತನಾಡಿ, ವಿಕೋಪ ನಿರ್ವಹಣೆಯ ಯೋಜನೆಯು ಪೂರ್ಣಪ್ರಮಾಣವಾಗಿ ಅನುಷ್ಠಾನವಾಗಬೇಕು. ಶೈಕ್ಷಣಿಕ ಮಟ್ಟದಲ್ಲಿ ಮಕ್ಕಳಿಗೆ ಜಾಗೃತಿ ಮೂಡಿಸಬೇಕು ಎಂದರು.

ಪರಿಹಾರ ಕಾರ್ಯವು ತ್ವರಿತವಾಗಿ ನಡೆಯಬೇಕು: ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯ ಹಿರಿಯ ಸಹಾಯ, ನಿರ್ದೇಶಕ ರಾಜು ಮಾತನಾಡಿ, ಪ್ರಕೃತಿ ವಿಕೋಪಗಳು ಯಾವಾಗ ಬೇಕಾದರೂ ಸಂಭವಿಸಬಹುದು. ರಕ್ಷಣೆ ಮತ್ತು ಪರಿಹಾರ ಕಾರ್ಯವು ತ್ವರಿತವಾಗಿ ನಡೆಯಬೇಕು. ಇದರಲ್ಲಿ ಅಧಿಕಾರಿಗಳು ಮಾಧ್ಯಮಗಳ ಸಮನ್ವಯ ಪಾತ್ರ ಪ್ರಮುಖವಾಗಿದೆ ಎಂದರು. ಜಿಲ್ಲಾ ತರಬೇತಿ ಸಂಸ್ಥೆ ಪ್ರಾಂಶುಪಾಲರಾದ ವಿನುತಾ ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.