ಬೆಲೆ ಏರಿಕೆ ಮಾಡಿ ಬೊಕ್ಕಸ ತುಂಬಿಕೊಳ್ಳುವ ಉದ್ದೇಶ ಸರ್ಕಾರಕ್ಕಿಲ್ಲ: ಸುರೇಶ್ ಕುಮಾರ್
Team Udayavani, Feb 15, 2021, 3:48 PM IST
ಚಾಮರಾಜನಗರ: ಬಡವರ ಮೇಲೆ ಬರೆ ಹಾಕಿ ಯಾವ ಸರ್ಕಾರ ಖುಷಿ ಪಡುವುದಿಲ್ಲ. ಬಡವರ ಹೊರೆ ಕಡಿಮೆ ಮಾಡುವುದು ಸರ್ಕಾರದ ಉದ್ದೇಶ. ಪೆಟ್ರೋಲ್, ಡಿಸೇಲ್, ಗ್ಯಾಸ್ ಎಲ್ಲಾ ಬೆಲೆ ಇಳಿಕೆ ಮಾಡುವುದೇ ಸರ್ಕಾರದ ಉದ್ದೇಶವಾಗಿದ್ದು, ಬೆಲೆ ಏರಿಕೆ ಮಾಡಿ ಬೊಕ್ಕಸ ತುಂಬಿಕೊಳ್ಳುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ಡಿಸೇಲ್ ಅಡುಗೆ ಅನಿಲ ಬೆಲೆ ಕಡಿಮೆಯಾದಾಗ ಯಾರೂ ಕೂಡ ಮಾತನಾಡಿಲ್ಲ. ಜಾಸ್ತಿಯಾದಾಗ ಮಾತನಾಡುವುದು ಸಹಜ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಕೂಡ ಬೆಲೆ ಇಳಿಕೆ ಆಗುತ್ತದೆ ಎಂದು ಹೇಳಿದ್ದಾರೆ ಎಂದರು.
ಇದನ್ನೂ ಓದಿ:ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಕೃಷಿ ಇಲಾಖೆಯ ರಾಯಭಾರಿ
ಟಿವಿ, ಫ್ರಿಡ್ಜ್,ವಾಹನ ಹೊಂದಿರುವವರಿಗೆ ಬಿಪಿಎಲ್ ಕಾರ್ಡ್ ರದ್ದು ಮಾಡುವ ಉಮೇಶ್ ಕತ್ತಿ ವಿಚಾರವಾಗಿ ಮಾತನಾಡಿದ ಅವರು, ಯಾವ ಆಧಾರದ ಮೇಲೆ ಹೇಳಿದ್ದಾರೆ ಎನ್ನುವುದು ತಿಳಿದುಕೊಳ್ಳಬೇಕು. ಖುದ್ದಾಗಿ ನಾನು ಉಮೇಶ್ ಕತ್ತಿ ಜೊತೆ ಮಾತನಾಡುತ್ತೇನೆ. ಎಲ್ಲರ ಮನೆಯಲ್ಲೂ ಟಿವಿ ಇರುವುದು ಸರ್ವೇ ಸಾಮಾನ್ಯ. ಸಮಾಜದ ಕಟ್ಟ ಕಡೆಯ ಕುಟುಂಬದ ಮಗುವು ಚಂದನ ವಾಹಿನಿ ನೋಡಿದೆ. ಸಂವೇದ ಕಾರ್ಯಕ್ರಮ ವೀಕ್ಷಿಸಿ ಪಾಠ ಕಲಿತಿದೆ ಎಂದರು.
ಇದನ್ನೂ ಓದಿ: ಬಿಪಿಎಲ್ ಮಾನದಂಡಗಳಲ್ಲಿ ಬದಲಾವಣೆ ಇಲ್ಲ: ಉಮೇಶ್ ಕತ್ತಿ ಸ್ಪಷ್ಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಾವಗಡ : ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ
ವರ್ಷದೊಳಗೆ 3.55 ಕೋಟಿ ವೆಚ್ಚದ ರಾಜಕಾಲುವೆ ನಿರ್ಮಾಣ ಭರವಸೆ : ಎಸ್.ಜಯರಾಂ
ಶಿಕ್ಷಣವನ್ನು ಕೇಸರೀಕರಣಗೊಳಿಸಲು ಹೊರಟಿದೆ ಬಿಜೆಪಿ : ಪ್ರಿಯಾಂಕ್ ಖರ್ಗೆ ಆರೋಪ
ಬಿಜೆಪಿ ಕ್ಯಾನ್ಸರ್ ಇದ್ದಂತೆ ಮನುಕುಲ ನಾಶ ಮಾಡಲಿದೆ : ಸಿದ್ದರಾಮಯ್ಯ ವಾಗ್ದಾಳಿ
ಮುಂಗಾರು ಪೂರ್ವ ಬಿತ್ತನೆ ಚಟುವಟಿಕೆ ಆರಂಭ : ರೋಹಿಣಿ ಮಳೆಯ ನಿರೀಕ್ಷೆಯಲ್ಲಿ ರೈತ
MUST WATCH
ಹೊಸ ಸೇರ್ಪಡೆ
ಪಾವಗಡ : ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ
ವರ್ಷದೊಳಗೆ 3.55 ಕೋಟಿ ವೆಚ್ಚದ ರಾಜಕಾಲುವೆ ನಿರ್ಮಾಣ ಭರವಸೆ : ಎಸ್.ಜಯರಾಂ
ಹಿಪ್ಹಾಪ್ ನೃತ್ಯದ ಜೊತೆ ಹೈಬ್ರಿಡ್ ಭರತನಾಟ್ಯ : ನೆಟ್ಟಿಗರಿಂದ ಭಾರಿ ಮೆಚ್ಚುಗೆ
ರೆನ್ಯೂ ಪವರ್ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ : ಸಿಎಂ ಬೊಮ್ಮಾಯಿ
ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ