ಮೂಲೆಹೊಳೆ ಚೆಕ್‌ಪೋಸ್ಟ್‌ಗೆ ಸಚಿವ ಭೇಟಿ


Team Udayavani, Mar 27, 2021, 12:55 PM IST

ಮೂಲೆಹೊಳೆ ಚೆಕ್‌ಪೋಸ್ಟ್‌ಗೆ ಸಚಿವ ಭೇಟಿ

ಗುಂಡ್ಲುಪೇಟೆ: ಪ್ರಾಥಮಿಕ, ಪ್ರೌಢಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಸುರೇಶ್‌ ಕುಮಾರ್‌ಅವರು ಶಾಸಕ ಸಿ.ಎಸ್‌.ನಿರಂಜನ್‌ಕುಮಾರ್‌, ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಅವರೊಂದಿಗೆ ತಾಲೂಕಿನ ಗಡಿಭಾಗದ ಮೂಲೆಹೊಳೆ ಚೆಕ್‌ಪೋಸ್ಟ್ ಗೆ ಶುಕ್ರವಾರ ಭೇಟಿ ನೀಡಿ ಕೋವಿಡ್‌ ನಿಯಂತ್ರಣ ಸಂಬಂಧ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು.

ಕೇರಳ ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ  ಹೆಚ್ಚಳ ಮತ್ತು ರಾಜ್ಯದಲ್ಲಿನ ಕೋವಿಡ್‌ ಎರಡನೇ ಅಲೆಹಿನ್ನೆಲೆಯಲ್ಲಿ ಗಡಿಭಾಗದಲ್ಲಿ ತೆಗೆದುಕೊಂಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲನೆ ಮಾಡುತ್ತಿರುವ ಬಗ್ಗೆ ಸಚಿವರು ವೀಕ್ಷಿಸಿದರು. ಚೆಕ್‌ಪೋಸ್ಟ್‌ನಲ್ಲಿ ಬಹು ಹೊತ್ತು ನಿಂತು ವಾಹನಗಳ ಸಂಚಾರ ಹಾಗೂ ವಹಿಸಲಾಗಿರುವ ತಪಾಸಣಾ ಕಾರ್ಯವನ್ನು ಸಚಿವರುಪರಿಶೀಲಿಸಿದರು. ಚೆಕ್‌ಪೋಸ್ಟ್‌ ನಲ್ಲಿ ವಾಹನಗಳುಮತ್ತು ಪ್ರಯಾಣಿಕರ ವಿವರವನ್ನು ದಾಖಲಿಸುತ್ತಿರುವ ವಹಿಯನ್ನು ವೀಕ್ಷಿಸಿದರು.

ಜಾಗೃತಿ ಮೂಡಿಸಿ: ಗಡಿಭಾಗದ ಮೂಲಕ ಜಿಲ್ಲೆಗೆ ಆಗಮಿಸುವವರು ಆರ್‌ಟಿಪಿಸಿಆರ್‌ ಪರೀಕ್ಷೆಗೆಒಳಪಟ್ಟು ನೆಗೆಟಿವ್‌ ವರದಿ ಹೊಂದಿರುವ ಬಗ್ಗೆಖಾತರಿಪಡಿಸಿಕೊಳ್ಳಬೇಕು. ಆರ್‌ಟಿಪಿಸಿಆರ್‌ ಪರೀಕ್ಷೆ ಪ್ರಯಾಣಿಕರಿಗೆಕಡ್ಡಾಯಗೊಳಿಸಿರುವ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚನೆ ನೀಡಿದರು.

ಪೂರ್ವ ಸಿದ್ಧತೆ ಕೈಗೊಳ್ಳಿ: ಪರಿಶೀಲನೆ ಬಳಿಕ ಮೂಲೆಹೊಳೆ ಅರಣ್ಯ ವಸತಿ ಗೃಹದಲ್ಲಿ ಕೋವಿಡ್‌ ನಿಯಂತ್ರಣ ಸಂಬಂಧ ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆಉಸ್ತುವಾರಿ ಸಚಿವರು ಸಭೆ ನಡೆಸಿದರು.

ಚೆಕ್‌ ಪೋಸ್ಟ್‌ನಲ್ಲಿ ಕಟ್ಟುನಿಟ್ಟಿನ ತಪಾಸಣೆ ಕ್ರಮಗಳಿಗೆ ಮುಂದಾಗಬೇಕು, ಕೋವಿಡ್‌ ನಿಯಂತ್ರಣಕ್ಕೆ ಅಗತ್ಯವಿರುವ ಪರೀಕ್ಷಾ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು. ಏ.1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವ ಕಾರ್ಯ ಆರಂಭಿಸಬೇಕಿರುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆಯನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

32 ಸಕ್ರಿಯ ಪ್ರಕರಣ: ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್‌.ಸುರೇಶ್‌ಕುಮಾರ್‌, ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣದಲ್ಲಿದೆ. ಒಟ್ಟು 32 ಸಕ್ರಿಯ ಪ್ರಕರಣಗಳು ಮಾತ್ರ ಇವೆ. ಈಗಾಗಲೇಹಿರಿಯ ನಾಗರಿಕರು, ವಿವಿಧ ಕಾಯಿಲೆಗಳಿಂದಬಳಲುತ್ತಿರುವ 45 ವರ್ಷ ಮೇಲ್ಪಟ್ಟವರಿಗೆ ಕೋವಿಡ್‌ರೋಗ ನಿರೋಧಕ ಶಕ್ತಿ ಒದಗಿಸುವ ಲಸಿಕೆ ನೀಡಲಾಗುತ್ತಿದೆ. ಇದುವರೆಗೆ 35,558 ಜನರಿಗೆ ಲಸಿಕೆಹಾಕಲಾಗಿದ್ದು, ಚಾಮರಾಜನಗರ ಜಿಲ್ಲೆ ಲಸಿಕಾ ಪ್ರಗತಿಯಲ್ಲಿ ರಾಜ್ಯದಲ್ಲೇ 3ನೇ ಸ್ಥಾನದಲ್ಲಿದೆ ಎಂದರು.

ಕೇಂದ್ರ ಸರ್ಕಾರದ ಸೂಚನೆಯಂತೆ ಏ.1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್‌ ಲಸಿಕೆ ನೀಡಲು ಜಿಲ್ಲೆಯಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ. ಕೋವಿಡ್‌ಪರೀಕ್ಷೆಯನ್ನು ಪ್ರತಿ ದಿನ 1,200 ಜನರಿಗೆಮಾಡಲಾಗುತ್ತಿದೆ. ಟೆಸ್ಟಿಂಗ್‌, ಟ್ರೇಸಿಂಗ್‌ ಹಾಗೂಟ್ರೀಟ್‌ಮೆಂಟ್‌ ಅನ್ನು ಸಮರ್ಪಕವಾಗಿ ಮಾಡುವಮೂಲಕ ಕೋವಿಡ್‌ ನಿಯಂತ್ರಣದಲ್ಲಿಡಲು ಸಾಧ್ಯವಿದ್ದು, ಈ ಬಗ್ಗೆ ಅಧಿಕಾರಿಗಳಿಗೆ ಕ್ರಮವಹಿಸಲುಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಹೆಚ್ಚಿನ ಜಾಗೃತಿ ಮೂಡಿಸಿ: ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಜನರ ಸಹಕಾರ ಮುಖ್ಯವಾಗಿದೆ. ಜನರಲ್ಲಿ ಮುನ್ನೆಚ್ಚರಿಕೆ ಇರಬೇಕು, ಮಾಸ್ಕ್ ಧರಿಸದಿದ್ದಲ್ಲಿ ದಂಡ ಹಾಕಲು ಸೂಚಿಸಲಾಗಿದೆ. ಆದರೆ, ದಂಡ ವಿಧಿಸುವುದು ಮುಖ್ಯ ಉದ್ದೇಶವಲ್ಲ, ಮಾಸ್ಕ್ ಧರಿಸಬೇಕೆಂಬುವುದು ಮಾತ್ರ ಸದುದ್ದೇಶವಾಗಿದೆ. ಹೋಟೆಲ್‌, ಅಂಗಡಿ ಮುಂಗಟ್ಟು, ಪೆಟ್ರೋಲ್‌ ಬಂಕ್‌, ಲಾರಿ ಮಾಲಿಕರ ಸಭೆ ಕರೆದು ಮಾಸ್ಕ್ ಧರಿಸುವ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲು ತಿಳಿಸಲಾಗುತ್ತದೆ ಎಂದು ಸಚಿವರು ವಿವರಿಸಿದರು.

ಗಡಿ ಚೆಕ್‌ ಪೋಸ್ಟ್‌ನಲ್ಲಿ ಪ್ರಯಾಣಿಕರು ಆರ್‌ ಟಿಪಿಸಿಆರ್‌ ಪರೀಕ್ಷೆ ಮಾಡಿಸಿ ಪಡೆದಿರುವ ನೆಗೆಟಿವ್‌ ರಿಪೋರ್ಟ್‌ ಅನ್ನು ಹಾಜರುಪಡಿಸುವುದನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೆ, ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದೂ ತಿಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.

ಜಿಪಂ ಸಿಇಒ ಹರ್ಷಲ್‌ ಬೋಯರ್‌, ಉಪವಿಭಾಗಾಧಿಕಾರಿ ಗಿರೀಶ್‌ದಿಲೀಪ್‌ ಬಡೋಲೆ,ಡಿಎಚ್‌ಒ ಡಾ.ಎಂ.ಸಿ. ರವಿ, ಜಿಲ್ಲಾ ಸರ್ವೆಲೆನ್ಸ್‌ ಅಧಿಕಾರಿ ಡಾ.ನಾಗರಾಜು, ಜಿಲ್ಲಾ ಆಸ್ಪತ್ರೆಯ ಕೋವಿಡ್‌ಅಧಿಕಾರಿ ಡಾ.ಮಹೇಶ್‌, ಆರ್‌ಸಿಎಚ್‌ ಅಧಿಕಾರಿಡಾ.ವಿಶ್ವೇಶ್ವರಯ್ಯ, ಹೆಚ್ಚುವರಿ ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ಅನಿತಾ ಹದ್ದಣ್ಣನವರ್‌, ತಹಶೀಲ್ದಾರ್‌ರವಿಶಂಕರ್‌, ಅರಣ್ಯ, ಇತರೆ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.