ಗುಂಡ್ಲುಪೇಟೆ ಮಾದರಿ ಕ್ಷೇತ್ರ ಮಾಡುವುದೇ ನನ್ನ ಗುರಿ


Team Udayavani, May 6, 2018, 2:18 PM IST

cham-1.jpg

ಗುಂಡ್ಲುಪೇಟೆ: ರಾಜ್ಯದಲ್ಲೇ ತಮ್ಮ ಕ್ಷೇತ್ರ ಮಾದರಿ ಮಾಡುವುದು ತನ್ನ ಗುರಿ. ಇದಕ್ಕೆ ತಮ್ಮೆಲ್ಲರ ಸಹಕಾರ ಮುಖ್ಯ ಎಂದು ಕಾಂಗ್ರೆಸ್‌ ಅಭ್ಯರ್ಥಿ , ಸಚಿವೆ ಡಾ.ಎಂ.ಸಿ.ಮೋಹನಕುಮಾರಿ ಹೇಳಿದರು.

ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ರೋಡ್‌ ಶೋ ನಡೆಸಿ ಮಾತನಾಡಿದ ಸಚಿವರು, ರಾಜ್ಯದಲ್ಲಿಯೇ ತಮ್ಮ ಕ್ಷೇತ್ರವನ್ನು ಮಾದರಿ ಯಾಗಿಸುವುದು ತನ್ನ ಪತಿ ಮಹದೇವಪ್ರಸಾದ್‌ ಕನಸಾಗಿತ್ತು. ದುರ್ದೈವದಿಂದ ಅವರು ತಮ್ಮನ್ನು ಅಗಲಿದ್ದಾರೆ. ಅವರ ಆಶೀರ್ವಾದದೊಂದಿಗೆ ತಾನು ಉಪಚುನಾವಣೆಯಲ್ಲಿ ಸ್ಪರ್ಧಿಸಿ 10 ಸಾವಿರ ಮತಗಳ ಅಂತರದಲ್ಲಿ ಗೆದ್ದು ಸಚಿವೆ ಯಾಗಿದ್ದೇನೆ ಎಂದು ಹೇಳಿದರು.

ಅವರ ಆಸೆಯಂತೆಯೇ ತಾನೂ ಕ್ಷೇತ್ರವನ್ನು ಮಾದರಿ ಮಾಡಲು ಅವಿರತವಾಗಿ ಶ್ರಮಿಸುತ್ತಿದ್ದೇನೆ. ಈ ಬಾರಿ ಮೂವತ್ತು ಸಾವಿರಕ್ಕೂ ಹೆಚ್ಚಿನ ಬಹುಮ ತದೊಂದಿಗೆ ತನ್ನನ್ನು ಗೆಲ್ಲಿಸಬೇಕು. 

ಕ್ಷೇತ್ರದಲ್ಲಿ ತನ್ನ ಮತ್ತು ಪತಿಯ ಅವಧಿಯಲ್ಲಿ ಮೂಲ ಸೌಕರ್ಯ, ಶಿಕ್ಷಣ, ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಒತ್ತನ್ನು ನೀಡಲಾಗಿದೆ. ಮುಂದಿನ ದಿನಗಳಲ್ಲೂ ಅಭಿವೃದ್ಧಿ ಕಾರ್ಯ ಮಾಡಲು ಸಿದ್ಧಳಿದ್ದೇನೆ. ಕ್ಷೇತ್ರದ ಜನತೆಯ ನಡುವೆ ಪತಿ ಕಳೆದುಕೊಂಡ ನೋವನ್ನು ಮರೆಯಲು ಪ್ರಯತ್ನಿಸುತ್ತಿದ್ದು, ಅಭಿವೃದ್ಧಿ ಕಾರ್ಯಗಳ ಮುಂದುವರಿಕೆಗೆ ಮತ್ತೂಮ್ಮೆ ಮತನೀಡಿ ಎಂದು ವಿವರಿಸಿದರು. ಕಾಡಾ ಅಧ್ಯಕ್ಷ ಎಚ್‌.ಎಸ್‌.ನಂಜಪ್ಪ, ಜಿಪಂ ಸದಸ್ಯ ಕೆ.ಎಸ್‌.ಮಹೇಶ್‌, ಚಾಮುಲ್‌ ನಿರ್ದೇಶಕ ಎಚ್‌.ಎಸ್‌. ನಂಜುಂಡ ಪ್ರಸಾದ್‌, ಯುವ ಮುಖಂಡ ಎಚ್‌.ಎಂ.ಗಣೇಶ್‌ ಪ್ರಸಾದ್‌, ಬಿ.ಕೆ.ಬೊಮ್ಮಯ್ಯ ಇತರರಿದ್ದರು.

ಚಾಮರಾಜನಗರ: ಮಾಜಿ ಸಚಿವ ದಿ.ಎಚ್‌.ಎಸ್‌. ಮಹದೇವಪ್ರಸಾದ್‌ ಗುಂಡ್ಲುಪೇಟೆ ಕ್ಷೇತ್ರದ ಅಭಿವೃದ್ಧಿಗೆ ಭದ್ರ ಬುನಾದಿಯನ್ನು ಹಾಕಿಕೊಟ್ಟಿದ್ದು, ತದ ನಂತರ ಸಚಿವೆ ಡಾ.ಮೋಹನಕುಮಾರಿ ಕೇವಲ ಒಂದು ವರ್ಷದ ಅವಧಿಯಲ್ಲಿ ಅವರ ಯೋಜನೆಗಳನ್ನು ಪೂರ್ಣ ಮಾಡುವ ಜೊತೆಗೆ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ ಎಂದು ಹರವೆ ಜಿಪಂ ಕ್ಷೇತ್ರದ ಸದಸ್ಯ ಕೆರೆಹಳ್ಳಿ ನವೀನ್‌ ತಿಳಿಸಿದರು.

ತಾಲೂಕಿನ ಹರವೆ ಹೋಬಳಿ ವ್ಯಾಪ್ತಿಯ ಸಾಗಡೆ, ಬೆಟ್ಟದಪುರ, ಕುಲಗಾಣ, ಮೂಡ್ನಾಕೂಡು ಗ್ರಾಮಗಳಲ್ಲಿ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಸಚಿವೆ ಡಾ.ಎಂ.ಸಿ. ಮೋಹನಕುಮಾರಿ ಪರ ಪಕ್ಷದ ಕಾರ್ಯಕರ್ತರು ಹಾಗೂ ಖಂಡರೊಂದಿಗೆ ಮನೆ ಮನೆಗೆ ತೆರಳಿ ಶನಿವಾರ ಮತಯಾಚನೆ ಮಾಡಿ ಅವರು ಮಾತನಾಡಿದರು.

ಸಾಗಡೆ ಗ್ರಾಮದಲ್ಲಿ ಪ್ರೌಢಶಾಲೆ ಆರಂಭ, ವಿಶೇಷ ಘಟಕ ಯೋಜನೆಯಡಿಯಲ್ಲಿ ಪರಿಶಿಷ್ಟ ಹಾಗೂ ವರ್ಗಗಳ ಕಾಲೋನಿಗಳಿಗೆ ಸಿಮೆಂಟ್‌ ರಸ್ತೆ, ಚರಂಡಿ ನಿರ್ಮಾಣ, ಸಾಗಡೆ ಗ್ರಾಮದ ಪರಿ ಶಿಷ್ಟ ಪಂಗಡದವರ ಕಾಲೋನಿಯಲ್ಲಿ ಸಿಮೆಂಟ್‌ ರಸ್ತೆ ನಿರ್ಮಾಣಕ್ಕಾಗಿ ಒಂದೂವರೆ ಕೋಟಿ ರೂ. ಅನುದಾನ ನೀಡಲಾಗಿದೆ. ಸಮುದಾಯ ಭವನಗಳ ನಿರ್ಮಾಣ, 2 ಕೋಟಿ ರೂ. ವೆಚ್ಚದಲ್ಲಿ ಕುಮಚಹಳ್ಳಿ ಕೆಂಗಾಕಿ ರಸ್ತೆಯ ಅಭಿವೃದ್ಧಿಗೆ ಭೂಮಿ ಪೂಜೆ ಮಾಡಿದ್ದು, ಹರವೆ ಭಾಗದ 5 ಪಂಚಾಯ್ತಿಗಳ ಅಭಿವೃದ್ಧಿಗೆ ಸಮಗ್ರ ಯೋಜನೆ ಜಾರಿ ಮಾಡಲಾಗಿದೆ. ಹೀಗಾಗಿ ಕ್ಷೇತ್ರದ ಮತದಾರರು ಕಾಂಗ್ರೆಸ್‌ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಎಚ್‌.ಎಸ್‌.ಮಹದೇವ ಪ್ರಸಾದ್‌ ಜಿಲ್ಲಾ ಉಸ್ತುವಾರಿ ಸಚಿವರಾಗಿ, ಕ್ಷೇತ್ರವಲ್ಲದೇ ಜಿಲ್ಲೆಯ ಅಭಿವೃದ್ಧಿಗಾಗಿ ಅವಿರತವಾಗಿ ಶ್ರಮಿಸಿದರು. ಅವರ ಅವಧಿಯಲ್ಲಿ ಗುಂಡ್ಲುಪೇಟೆ ಕ್ಷೇತ್ರ ಮಾದರಿ ಕ್ಷೇತ್ರವಾಗಿ ಅಭಿವೃದ್ಧಿಯಾಯಿತು. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೊಳಿಸಿದರು. ಇದರಿಂದ ನೂರಾರು ಹಳ್ಳಿಗಳಿಗೆ ನದಿ ಮೂಲದಿಂದ ಕುಡಿಯುವ ನೀರಿನ ಸೌಲಭ್ಯ ದೊರಕಿದೆ. ಇದೆಲ್ಲಕ್ಕೂ ಕಾಂಗ್ರೆಸ್‌ ಸರ್ಕಾರದ ಕಾಳಜಿ ಕಾರಣ ಎಂದರು ನವೀನ್‌ ಹೇಳಿದರು.

ಕಾಂಗ್ರೆಸ್‌ ಸರ್ಕಾರ ಹಾಡಿಗಳಿಗೆಮೂಲ ಸೌಲಭ್ಯ ಕಲ್ಪಿಸಿದೆ ಗುಂಡ್ಲುಪೇಟೆ: ಕಾಂಗ್ರೆಸ್‌ ಸರ್ಕಾರ ತಾಲೂಕಿನ ಗಿರಿಜನ ಹಾಡಿಗಳಲ್ಲಿ ಉತ್ತಮ ರಸ್ತೆ ಮತ್ತು ಮೂಲಸೌಕರ್ಯ ಕಲ್ಪಿಸಿದೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಸಚಿವೆ ಡಾ.ಎಂ.ಸಿ. ಮೋಹನಕುಮಾರಿ ಹೇಳಿದರು.

ತಾಲೂಕಿನ ಕಾಡಂಚಿನ ಬಂಡೀಪುರ, ಕಾರೇಮಾಳ, ಲೊಕ್ಕೆರೆ, ಚೆನ್ನಿಕಟ್ಟೆ, ಮಂಗಲ, ಜಕ್ಕಳ್ಳಿ, ಕಾರ್ರಾಗಿಹುಂಡಿ, ಕಣಿಯನಪುರ ಕಾಲೋನಿ, ಎಲ್ಚೆಟ್ಟಿ, ಬಾಚಹಳ್ಳಿ, ಅಂಕಹಳ್ಳಿ, ವಡೆಯನಪುರ ಗ್ರಾಮಗಳಲ್ಲಿ ಮತಯಾಚನೆ ಮಾಡಿ ಮಾತನಾಡಿದ ಅವರು, ತಮ್ಮ ಪತಿ ದಿ.ಎಚ್‌.ಎಸ್‌.ಮಹದೇವಪ್ರಸಾದ್‌ ಕಾಡಂಚಿನ ಗ್ರಾಮಗಳಿಗೂ ರಸ್ತೆ, ಕುಡಿವ ನೀರು ಸೇರಿದಂತೆ ಮೂಲಸೌಕರ್ಯ ಕಲ್ಪಿಸಿದ್ದರು. ಅಲ್ಲದೆ, ಮಕ್ಕಳಿಗೆ ಶಿಕ್ಷಣ ನೀಡಲು ಎಲ್ಲಾ ಗ್ರಾಮಗಳಿಗೂ ಪ್ರಾಥಮಿಕ ಶಾಲೆ ತೆರೆದು ಪ್ರೌಢಶಿಕ್ಷಣಕ್ಕೆ ವಸತಿ ಶಾಲೆ ಪ್ರಾರಂಭಿಸಿದ್ದರು. 

ಉಪಚುನಾವಣೆಯಲ್ಲಿ ತಾವು ಜಯಗಳಿಸಿದ ನಂತರ ಬಹುಗ್ರಾಮ ಕುಡಿಯುವ ನೀರು ಯೋಜನೆ ಅನುಷ್ಠಾನಗೊಳಿಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿದ್ದೇನೆ ಎಂದು ಹೇಳಿದರು.

ಅದೇ ರೀತಿಯಾಗಿ ತಾನೂ ಕ್ಷೇತ್ರ ವ್ಯಾಪ್ತಿಯಲ್ಲಿ ಹಾಡಿಗಳಲ್ಲಿ ಉತ್ತಮ ಕಾಂಕ್ರೀಟ್‌ ರಸ್ತೆ, ಕುಡಿಯುವ ನೀರು ಮತ್ತಿತರೆ ಮೂಲ ಸೌಕರ್ಯವನ್ನು ಕಲ್ಪಿಸಲು ಶ್ರಮಿಸಿದ್ದೇನೆ. ಅಭಿವೃದ್ಧಿಗೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಗಿರಿಜನರ ಹಿತಕಾಪಾಡುತ್ತಿದೆ. ಆದ್ದರಿಂದ ಇನ್ನೂ ಹೆಚ್ಚಿನ ಅಭಿವೃದ್ಧಿಗೆ ಕಾಂಗ್ರೆಸ್‌ಗೆ ಮತನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ಕಾಡಾ ಅಧ್ಯಕ್ಷ ನಂಜಪ್ಪ, ಜಿಪಂ ಸದಸ್ಯ ಬೊಮ್ಮಯ್ಯ, ತಾಪಂ ಅಧ್ಯಕ್ಷ ಜಗದೀಶಮೂರ್ತಿ, ಮಂಗಲ ಗ್ರಾಪಂ ಅಧ್ಯಕ್ಷ
ಲಿಂಗರಾಜು, ಚಾಮುಲ್‌ ನಿರ್ದೇಶಕ ನಂಜುಂಡಪ್ರಸಾದ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.