
18 ತುಂಬಿದ ಪ್ರತಿಯೊಬ್ಬರನ್ನೂ ಪಟ್ಟಿಗೆ ಸೇರಿಸಿ
Team Udayavani, Nov 22, 2022, 3:07 PM IST

ಚಾಮರಾಜನಗರ: ಮುಂಬರುವ ಸಾರ್ವತ್ರಿಕ ಚುನಾವಣೆ ಪ್ರಕ್ರಿಯೆಗಾಗಿ ಶೇ. 100ರಷ್ಟು ಮತದಾರರನ್ನು ನೋಂದಣಿ ಮಾಡುವ ಸಂಬಂಧ ಜಿಲ್ಲೆಯಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳು ವಂತೆ ಜಿಪಂ ಸಿಇಒ ಕೆ.ಎಂ. ಗಾಯಿತ್ರಿ ಸೂಚನೆ ನೀಡಿದರು.
ನಗರದ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ, ರಾಷ್ಟ್ರೀಯ ಮತದಾರರ ಪಟ್ಟಿ ನೋಂದಣಿ ಮತ್ತು ಪರಿ ಷ್ಕರಣೆ-2023 ಸಂಬಂಧ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಜಿಲ್ಲಾ ಸ್ವೀಪ್ ಸಮಿತಿ ಸಭೆಯಲ್ಲಿ ಮಾತನಾಡಿದರು.
ನೋಂದಣಿ ಬಗ್ಗೆ ಪರಿಶೀಲಿಸಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮುಂಬರುವ ಸಾರ್ವ ತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆ ಗಾಗಿ ಶೇ.100ರಷ್ಟು ಮತದಾರರನ್ನು ನೋಂದಣಿ ಮಾಡುವ ಸಂಬಂಧ ಈಗಾಗಲೇ ಆಯೋಗವು ಕರಡು ಮತದಾರರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಎಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಪಂಗಳ ಪಂಚಾಯಿತಿ ಅಭಿವೃದ್ಧಿ ಅಧಿ ಕಾರಿಗಳು ಹಾಗೂ ಕಂದಾಯ ಇಲಾಖೆಯ ಅಧಿಕಾರಿ ಗಳ ಜೊತೆ ಸಮನ್ವಯತೆ ಸಾಧಿಸಿ 18 ವರ್ಷ ಮೇಲ್ಪಟ್ಟ ವರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿ ರುವ ಬಗ್ಗೆ ಪರಿಶೀಲಿಸಬೇಕು ಎಂದರು.
ಸ್ವೀಪ್ ಕಾರ್ಯಕ್ರಮ ಆಯೋಜಿಸಿ: ನೋಂದಣಿ ಯಾಗದೆ ಇರುವ ಮತದಾರರನ್ನು ಮತದಾರರ ಪಟ್ಟಿಗೆ ನೋಂದಣಿ ಮಾಡಿಸಲು ಹಾಗೂ ತಿದ್ದುಪಡಿ, ಬದಲಾವಣೆಗಳಿದ್ದಲ್ಲಿ ಪರಿಷ್ಕರಣೆ ಮಾಡಿಕೊಳ್ಳುವ ಸಂಬಂಧ ಗ್ರಾಪಂ ಹಾಗೂ ತಾಪಂ ಮಟ್ಟಗಳಲ್ಲಿ ವಿವಿಧ ಸ್ವೀಪ್ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.
ಮತದಾನದ ಬಗ್ಗೆ ಅರಿವು ಮೂಡಿಸಿ: ಗ್ರಾಪಂಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮೀಣ ಪ್ರದೇಶದಲ್ಲಿ ಇರುವ ವಿದ್ಯಾರ್ಥಿ ನಿಲಯಗಳು, ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ, 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಬಗ್ಗೆ ಪರಿಶೀಲಿಸಬೇಕು. ನೋಂದಣಿಯಾಗಿಲ್ಲದಿದ್ದಲ್ಲಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗ ಳೊಂದಿಗೆ ಸಮನ್ವಯದಿಂದ ನೋಂದಣಿಗೆ ಕ್ರಮವಹಿಸಬೇಕು. ಮತದಾನದ ಬಗ್ಗೆ ಅರಿವು ಮೂಡಿ ಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಳಿಗೆ ನಿರ್ದೇ ಶನ ನೀಡುವಂತೆ ತಿಳಿಸಿದರು.
ಅಧಿಕಾರಿಗಳಿಗೆ ಸೂಚನೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು, ಅಂಗನವಾಡಿ ಕಾರ್ಯ ಕರ್ತೆಯರು ಮತ್ತು ಸಹಾಯಕಿಯರು, ವಿಕಲಚೇತ ನರು, ಸಾಂತ್ವನ ಮತ್ತು ಸ್ವಾಧಾರ ಕೇಂದ್ರ ಹಾಗೂ ವೃದ್ಧಾಶ್ರಮಗಳಲ್ಲಿರುವ 18 ವರ್ಷ ಮೇಲ್ಪಟ್ಟವರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಬಗ್ಗೆ ಗ್ರಾಪಂ ಮಟ್ಟದ ಎಂಬಿಕೆಗಳಿಂದ ಪರಿಶೀಲಿಸ ಬೇಕು. ಮತದಾನದಲ್ಲಿ ಸಕ್ರಿಯವಾಗಿ ಭಾಗವಹಿಸಲು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋ ಜಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮತದಾನದ ಪ್ರಾಮುಖ್ಯತೆ ಕುರಿತು ಅರಿವು ಮೂಡಿಸಿ: ಲಿಂಗತ್ವ ಅಲ್ಪಸಂಖ್ಯಾತರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವ ಸಂಬಂಧ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸ್ವೀಪ್ ಕಾರ್ಯಕ್ರಮವನ್ನು ಆಯೋಜಿಸಿ ಮತದಾರರ ಪಟ್ಟಿಯಲ್ಲಿ ನೋಂದಣಿ ಮತ್ತು ಪರಿಷ್ಕರಣೆ ಮಾಡುವ ಬಗ್ಗೆ ಹಾಗೂ ಮತ ದಾನದ ಪ್ರಾಮುಖ್ಯತೆ ಕುರಿತು ಅರಿವು ಮೂಡಿಸಬೇಕು. ಜಿಲ್ಲೆಯಲ್ಲಿ ಸೋಲಿಗ, ಬುಡಕಟ್ಟು ಜನಾಂಗದ ವರು ವಾಸಿಸುವ ಗ್ರಾಪಂ ವ್ಯಾಪ್ತಿಯಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬರನ್ನು ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಲು ಹಾಗೂ ಮತದಾನದ ಬಗ್ಗೆ ಅರಿವು ಮೂಡಿಸಲು ಸಮು ದಾಯದ ಮುಖಂಡರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ಸ್ವೀಪ್ ಕಾರ್ಯಕ್ರಮಗಳನ್ನು ಪರಿ ಣಾಮ ಕಾರಿಯಾಗಿ ಆಯೋಜಿಸುವಂತೆ ತಿಳಿಸಿದರು.
ಜಿಪಂ ಮುಖ್ಯ ಯೊರಿ ಪ್ರಭುಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕಿ ಗೀತಾಲಕ್ಷ್ಮೀ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಜಿಲ್ಲಾ ಮಟ್ಟದ ಅಧಿಕಾರಿಗಳು ಇತರರು ಇದ್ದರು.
ಟಾಪ್ ನ್ಯೂಸ್
