ನ್ಯಾ.ನಾಗಮೋಹನ್‌ದಾಸ್‌ ವರದಿ ಜಾರಿಗೆ ಆಗ್ರಹ

Team Udayavani, May 21, 2022, 2:38 PM IST

ನ್ಯಾ.ನಾಗಮೋಹನ್‌ದಾಸ್‌ ವರದಿ ಜಾರಿಗೆ ಆಗ್ರಹ

ಚಾಮರಾಜನಗರ: ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.3ರಿಂದ ಶೇ.7.5 ಕ್ಕೇರಿಸಬೇಕೆಂದು ಶಿಫಾರಸು ಮಾಡಿರುವ ನ್ಯಾಯಮೂರ್ತಿ ನಾಗಮೋಹನ್‌ದಾಸ್‌ ವರದಿ ಜಾರಿ ಮಾಡಬೇಕೆಂದು ಆಗ್ರಹಿಸಿ ನಾಯಕ ಸಮುದಾಯ ನಗರದಲ್ಲಿ ಶುಕ್ರವಾರ ಭಾರೀ ಪ್ರತಿಭಟನೆ ನಡೆಸಿತು.

ನಗರದ ಪ್ರವಾಸಿ ಮಂದಿರ ಆವರಣದಲ್ಲಿ ಸಮಾವೇಶಗೊಂಡ ಸಮುದಾಯದವರು, ಭುವನೇಶ್ವರಿ ವೃತದಲ್ಲಿ ಮಾನವ ಸರಪಳಿ ರಚಿಸಿ ಕೆಲಕಾಲ ರಸ್ತೆತಡೆ ನಡೆಸಿ, ನಂತರ ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ, ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ ಮೂಲಕ ಸರ್ಕಾರಕ್ಕೆ ಹಕ್ಕೊತ್ತಾಯ ಸಲ್ಲಿಸಿದರು.

ಧರಣಿಗೂ ಬಗ್ಗದ ಸರ್ಕಾರ: ಪ್ರತಿಭಟನೆ ನೇತೃತ್ವ ವಹಿಸಿದ್ದ ನಾಯಕ ಸಮಾಜದ ಮುಖಂಡ ಪು.ಶ್ರೀನಿವಾಸನಾಯಕ ಮಾತನಾಡಿ, ನ್ಯಾ.ನಾಗಮೋಹನ್‌ ದಾಸ್‌ ವರದಿ ಜಾರಿಗೊಳಿಸುವಂತೆ 100 ದಿನಗಳಿಂದಲೂ, ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯ ವಾಲ್ಮೀಕಿ ಮಠದ ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇಷ್ಟಾದರೂ ರಾಜ್ಯ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ ಎಂದು ದೂರಿದರು.

ಜಾನುವಾರುಗಳ ಜತೆ ಪ್ರತಿಭಟನೆ: ಸೌಜನ್ಯಕ್ಕಾದರೂ ಮುಖ್ಯಮಂತ್ರಿಯವರು ಧರಣಿ ಸ್ಥಳಕ್ಕೆ ಭೇಟಿ ನೀಡಿಲ್ಲ, ಶ್ರೀಗಳ ಹೋರಾಟ ಬೆಂಬಲಿಸಿ ರಾಜ್ಯಾದ್ಯಂತ ಎಲ್ಲಾ ತಾಲೂಕು ಕಚೇರಿ, ಡೀಸಿ ಕಚೇರಿ ಮುಂದೆ ಪ್ರತಿಭಟನೆ ನಡಸಲಾಗುತ್ತಿದ್ದು, ಚಾಮರಾಜನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತಿದೆ. ಸರ್ಕಾರ ನ್ಯಾ.ನಾಗಮೋಹನ್‌ ದಾಸ್‌ ವರದಿ ಜಾರಿಗೆ ತರದಿದ್ದರೆ ಜನ, ಜಾನುವಾರುಗಳೊಂದಿಗೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ರಾಜೀನಾಮೆ ನೀಡಲಿ: ಚಾಮರಾಜನಗರ ಮತ್ತು ಮೈಸೂರು ಜಿಲ್ಲಾ ನಾಯಕರ ಸಂಘದ ಅಧ್ಯಕ್ಷ ಕೆಲ್ಲಂಬಳ್ಳಿ ಸೋಮನಾಯಕ ಮಾತನಾಡಿ, ಸಮುದಾಯದ ಮೀಸಲಾತಿಯಡಿಯಲ್ಲಿ ಶಾಸಕರು, ಸಚಿವರಾಗಿರುವ ಎಲ್ಲರೂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ದಲಿತ ಮುಖಂಡ ಅರಕಲವಾಡಿ ನಾಗೇಂದ್ರ ಮಾತನಾಡಿದರು. ಪ್ರತಿಭಟನೆಯಲ್ಲಿ ಜಿಪಂ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಮಾಜಿ ಸದಸ್ಯರಾದ ಎಸ್‌. ಸೋಮನಾಯಕ, ರಮೇಶ್‌, ತಾಪಂ ಮಾಜಿ ಅಧ್ಯಕ್ಷ ಎಚ್‌ .ವಿ.ಚಂದ್ರು, ಪಾಳ್ಯ ಜಯಸುಂದರ್‌, ನಿವೃತ್ತ ಅಭಿಯಂತರಾದ ರಂಗರಾಮನಾಯಕ, ಯ.ರಾಜುನಾಯಕ, ನಗರಸಭಾ ಸದಸ್ಯರಾದ ಶಿವರಾಜ್‌, ಸುರೇಶ್‌, ಪ್ರಕಾಶ್‌, ಮಾಜಿ ಸದಸ್ಯ ಚೆಂಗುಮಣಿ, ಮುಖಂಡರಾದ ಕಪಿನಿನಾಯಕ, ನಗರಸಭಾ ಮಾಜಿ ಅಧ್ಯಕ್ಷ ಸುರೇಶ್‌ನಾಯಕ, ಚಾ.ಸಿ.ಸೋಮನಾಯಕ, ಕೃಷ್ಣನಾಯಕ, ನಾರಾಯಣ್‌, ಶಿವುವಿರಾಟ್‌, ಬುಲೆಟ್‌ ಚಂದ್ರು, ವರದನಾಯಕ, ನಾಗೇಂದ್ರನಾಯಕ, ಬಂಗಾರು, ಮಣಿಕಂಠನಾಯಕ, ಮಹೇಂದ್ರ, ಜಿ.ಎಂ.ಗಾಡ್ಕರ್‌, ದಲಿತ ಮುಖಂಡ ಸಿ.ಎಂ.ಕೃಷ್ಣಮೂರ್ತಿ, ಬಿಎಸ್ಪಿ ಜಿಲ್ಲಾಧ್ಯಕ್ಷ ಎನ್‌ .ನಾಗಯ್ಯ, ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ರಮೇಶ್‌, ಮಾದೇಶ್‌, ರಂಗಸ್ವಾಮಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.