ಚಾ.ನಗರ ಜಿಲ್ಲಾ ಕಸಾಪ ನೂತನ ಕಚೇರಿ ಹಸ್ತಾಂತರ

Team Udayavani, Nov 29, 2020, 12:33 PM IST

ಚಾ.ನಗರ ಜಿಲ್ಲಾ ಕಸಾಪ ನೂತನ ಕಚೇರಿ ಹಸ್ತಾಂತರ

ಚಾಮರಾಜನಗರ: ನಗರದ ಅಗ್ರಹಾರ ಬೀದಿಯಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಕಚೇರಿಯ ಹಸ್ತಾಂತರ ಕಾರ್ಯಕ್ರಮ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆಯಿತು

ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ಅವರು ನೂತನ ಕಚೇರಿಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎಸ್‌. ವಿನಯ್‌ ಅವರಿಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್‌. ರವಿ ಮಾತನಾಡಿ, ಚಾಮರಾಜನಗರ ಸಾಹಿತ್ಯ ಸಂಸ್ಕೃತಿಯ ನೆಲೆವೀಡಾಗಿದ್ದು, ಇಲ್ಲಿ ಸಾಹಿತ್ಯ ಪರಿಷತ್ತು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಆದರೆ, ಕಸಾಪಕ್ಕೆ ಕಚೇರಿ ಇಲ್ಲದ್ದು ನೋವಿನ ಸಂಗತಿಯಾಗಿತ್ತು. ಆದ್ದರಿಂದ ರಾಜ್ಯೋತ್ಸವದ ಈ ತಿಂಗಳಲ್ಲೇ ಪರಿಷತ್ತಿಗೆ ಕಚೇರಿಯನ್ನೂ ಒದಗಿಸಬೇಕೆಂದು ನಿರ್ಧರಿಸಿ ಅದನ್ನು ಕಾರ್ಯಗತಗೊಳಿಸಲಾಗಿದೆ. ಎಂದರು.

ಇದೇನೋ ಸಾಧನೆಯಲ್ಲ. ತಾಯಿಯ ಸೇವೆ ಮಾಡುವುದುಕರ್ತವ್ಯವೇ ಹೊರತು ಸಾಧನೆ ಅಲ್ಲ. ನಾನು ನನ್ನ ಕರ್ತವ್ಯ ನಿರ್ವಹಿಸಿದ್ದೇನೆ ಅಷ್ಟೇ. ಕನ್ನಡ ಸಾಹಿತ್ಯ ಪರಿಷತ್ತು ಮತ್ತಷ್ಟು ಚಟುವಟಿಕೆಗಳನ್ನು ನಡೆಸಲು ಇದರಿಂದ ಅವಕಾಶವಾಗಲಿ ಎಂದು ಶುಭ ಹಾರೈಸಿದರು.

ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎಸ್‌. ವಿನಯ್‌ ಮಾತನಾಡಿ, ಚಾಮರಾಜನಗರ ಜಿಲ್ಲಾ ಕಸಾಪ ಮತ್ತು ತಾಲೂಕು ಘಟಕಗಳು ಕಳೆದ ನಾಲ್ಕು ವರ್ಷಗಳಿಂದ ಯಶಸ್ವಿಯಾಗಿ ನೂರಾರು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದು, ಕಳೆದ ಮಾರ್ಚ್‌ ತಿಂಗಳಿಂದ ಕಚೇರಿ ಇಲ್ಲದೆ ತೊಂದರೆಯಾಗಿತ್ತು. ಜಿಲ್ಲಾಧಿಕಾರಿ ರವಿ ಪರಿಸ್ಥಿತಿಯನ್ನು ಮನಗಂಡು ಕನ್ನಡದ ಕುರಿತ ಅಪಾರ ಕಾಳಜಿಯಿಂದ ಪರಿಷತ್ತಿಗೆ ನೂತನ ಕಚೇರಿಯನ್ನು ವಿಶೇಷ ಆಸಕ್ತಿ ವಹಿಸಿ ಮಾಡಿಕೊಂಡಿದ್ದಾರೆ. ಸ್ವತಃ ಸಾಹಿತಿಯೂ ಆಗಿರುವುದರಿಂದ ಅವರಿಗೆ ಈ ನೆಲದ ಸಂಸ್ಕೃತಿ, ಪರಂಪರೆಯ ಸೂಕ್ಷ್ಮ ಅರಿವಿದೆ. ಆಡಳಿತದ ದಕ್ಷತೆಗೆ ಸಾಹಿತ್ಯದ ಸೌಜನ್ಯ ಬೆರೆತು ಸುವರ್ಣಕ್ಕೆ ಸುಗಂಧ ಬಂದಂತಾಗಿದೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌.ಆನಂದ್‌, ಜನಪದ ಅಕಾಡೆಮಿಯ ಸದಸ್ಯ ಸಿ.ಎಂ ನರಸಿಂಹಮೂರ್ತಿ, ಹಿರಿಯ ಸಾಹಿತಿ ಕೆ.ವೆಂಕಟರಾಜು ವೇದಿಕೆಯಲ್ಲಿದ್ದರು.ತಹಶೀಲ್ದಾರ್‌ ಚಿದಾನಂದ ಗುರುಸ್ವಾಮಿ, ಕನ್ನಡ ಪುಸ್ತಕ ಪ್ರಾಧಿಕಾರದ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಯ ಗೋವಿಂದರಾಜು, ಕಸಾಪ ಕಾರ್ಯದರ್ಶಿಗಳಾದ ಜಿ.ರಾಜಪ್ಪ, ಬಂಗಾರಗಿರಿ ನಾಯಕ,ಕೋಶಾಧ್ಯಕ್ಷಎಸ್‌ ನಿರಂಜನ್‌ಕುಮಾರ್‌, ಬಸವಣ್ಣ, ಸಿ.ಎಂ.ಶಿವಕುಮಾರ್‌, ಬಿ.ಬಸವರಾಜು, ಮಂಜು, ವೆಂಕಟರಮಣಸ್ವಾಮಿ ಪಾಪು, ಮಾದಾಪುರ ರವಿಕುಮಾರ್‌, ಕಿರಣ್‌ ರಾಜ್‌, ಸಿಎಸ್‌ ಮಂಜುಳಾ, ಶಾ. ಮುರಳಿ, ಚಾರಂ ಶ್ರೀನಿವಾಸಗೌಡ, ಪುರುಷೋತ್ತಮ, ವಿ.ನಾ. ಚಿದಾನಂದ ಸ್ವಾಮಿ, ದುಗ್ಗಟ್ಟಿ ಮಲ್ಲಿಕಾರ್ಜುನ ಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.