ಸಂತ್ರಸ್ತ ಕುಟುಂಬಕ್ಕೆ ಯಾವುದೇ ಹುದ್ದೆ ನೀಡಿಲ್ಲ


Team Udayavani, Nov 7, 2019, 3:00 AM IST

santrasta

ಚಾಮರಾಜನಗರ: ತಾಲೂಕಿನ ಸಂತೆಮರಹಳ್ಳಿಯಲ್ಲಿ ಎರಡು ವರ್ಷಗಳ ಹಿಂದೆ ನಡೆಸಿದ್ದ ಇಬ್ಬರು ದಲಿತರ ಕೊಲೆ ಪ್ರಕರಣದಲ್ಲಿ ಸಂತ್ರಸ್ತ ಕುಟುಂಬದವರಿಗೆ ಯಾವುದೇ ಹುದ್ದೆ ನೀಡಿಲ್ಲ. ಸ್ಥಳೀಯ ನ್ಯಾಯಾಲಯದಲ್ಲಿ ಖುಲಾಸೆಗೊಂಡಿರುವ ಪ್ರಕರಣವನ್ನು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸಬೇಕು ಎಂದು ಎಸ್‌ಸಿ, ಎಸ್‌ಟಿ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಒತ್ತಾಯಿಸಲಾಯಿತು.

ನಗರದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ತಹಶೀಲ್ದಾರ್‌ ಮಹೇಶ್‌ ಅಧ್ಯಕ್ಷತೆಯಲ್ಲಿ ನಡೆದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಸಮಿತಿ ಸದಸ್ಯರಾದ ಸಿ.ಕೆ.ಮಂಜುನಾಥ್‌, ಕೆ.ಎಂ.ನಾಗರಾಜು, ಸಿ.ಎಂ.ಶಿವಣ್ಣ, ಅಂಬರೀಶ್‌, ಬ್ಯಾಡಮೂಡ್ಲುಬಸವಣ್ಣ ಸೇರಿದಂತೆ ಇತರರು ಸಂತೇಮರಹಳ್ಳಿ ದಲಿತರ ಜೋಡಿ ಕೊಲೆ ಪ್ರಕರಣ ಏನಾಯಿತು. ಕೊಲೆಯಾದವರ ಕುಟುಂಬದವರಿಗೆ ಯಾವುದೇ ಹುದ್ದೆ ನೀಡಿಲ್ಲ.

ಸಾಕ್ಷ್ಯಾಧಾರದ ಕೊರತೆಯಿಂದ ಸ್ಥಳೀಯ ನ್ಯಾಯಾಲಯದಲ್ಲಿ ಪ್ರಕರಣ ಖುಲಾಸೆಗೊಳಿಸಿರುತ್ತದೆ. ಈ ಸಂಬಂಧವಾಗಿ ಹೈಕೋರ್ಟ್‌ನಲ್ಲಿ ದೂರು ದಾಖಲಿಸುವಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಪತ್ರ ಬರೆಯಿಸಲಾಗಿದೆ. ಹಾಗಾಗಿ ಈ ಪ್ರಕರಣ ಯಾವ ಹಂತದಲ್ಲಿದೆ ಎಂದು ಪ್ರಶ್ನಿಸಿದರು. ಸರ್ಕಲ್‌ ಇನ್‌ಪೆಕ್ಟರ್‌ ಮಂಜುನಾಥ್‌ ಮಾತನಾಡಿ, ವಿಚಾರಣೆಗಾಗಿ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿದೆ ಉತ್ತರಿಸಿದರು.

ವಾರಸುದಾರರಿಗೆ ಉದ್ಯೋಗ ಅವಕಾಶ: ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಇಲಾಖೆ ಉಪನಿರ್ದೇಶಕ ಮುನಿರಾಜು ಮಾತನಾಡಿ, ಸಂತೇಮರಹಳ್ಳಿ ದಲಿತರ ಜೋಡಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಒಬ್ಬರಿಗೆ ಉದ್ಯೋಗ ನೀಡಲಾಗಿದೆ. ಇನ್ನೊಬ್ಬರಿಗೆ ಉದ್ಯೋಗ ನೀಡಲು ಕ್ರಮಕೈಗೊಳ್ಳಲಾಗಿದೆ. ಆದರೆ ವಾರಸುದಾರಿಗೆ ಮಾತ್ರ ಉದ್ಯೋಗ ನೀಡಲು ಅವಕಾಶವಿದೆ.

ತಾಯಿ ಒಂದು ಸಲ ನನ್ನ ಮಗಳಿಗೆ ಉದ್ಯೋಗ ನೀಡಿ ಅನ್ನುತ್ತಾರೆ, ಮತ್ತೊಂದು ಸಲ ನನಗೆ ಉದ್ಯೋಗ ನೀಡಿ ಅನ್ನುತ್ತಾರೆ. ಅವರಿಗೆ 50 ವರ್ಷ ಆಗಿದ್ದರೂ ಸಹ ಉದ್ಯೋಗ ಕೊಡಿಸಲು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಸುಳ್ವಾಡಿ ವಿಷ ಪ್ರಕರಣದ ಪರಿಹಾರ ಮಾತ್ರ ಬಾಕಿ ಉಳಿದಿದೆ. ಈ ಪ್ರಕರಣದಲ್ಲಿ ಮೃತಪಟ್ಟ ಕುಟುಂಬದ ವಾರಸುದಾರರಿಗೆ ಉದ್ಯೋಗ, ಮನೆ, 6 ತಿಂಗಳ ಆಹಾರ ಪದಾರ್ಥಗಳ ಇಲಾಖೆ ವತಿಯಿಂದ ಕೊಡಿಸಿಕೊಡಲು ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.

ದಲಿತರ ಹಕ್ಕು ದಿನಾಚರಣೆ ಆಚರಣೆ: ಬಿ.ರಾಚಯ್ಯ ಅವರು ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ದಲಿತರ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ದಲಿತರ ಹಕ್ಕು ದಿನಾಚರಣೆಯನ್ನು ಜಾರಿಗೆ ತಂದಿದ್ದರು. ಅದನ್ನೀಗ ಎಷ್ಟು ಪೊಲೀಸ್‌ ಠಾಣೆಗಳಲ್ಲಿ ಆಚರಿಸುತ್ತಿದ್ದೀರಿ ಎಂದು ಆಲೂರು ನಾಗೇಂದ್ರ ಪ್ರಶ್ನಿಸಿದರು. ಗ್ರಾಮಗಳಲ್ಲಿ ಪ್ರತಿ ಭಾನುವಾರ ದಲಿತರ ಹಕ್ಕು ದಿನಾಚರಣೆ ಆಚರಿಸಲಾಗುತ್ತಿದೆ ಎಂದು ಸರ್ಕಲ್‌ ಇನ್‌ಪೆಕ್ಟರ್‌ ಮಂಜುನಾಥ್‌ ಉತ್ತರಿಸಿದರು.

ಶಾಲೆ ಅಡುಗೆ ಸಹಾಯಕರ ವರ್ಗಾವಣೆ: ಸರ್ಕಾರಿ ಶಾಲೆಗಳಲ್ಲಿ ದಲಿತ ಮಹಿಳೆ ಅಡುಗೆ ಮಾಡುತ್ತಾಳೆ ಎಂಬ ಕಾರಣದಿಂದ ಅವರನ್ನು ಬೇರೆ ಶಾಲೆ ವರ್ಗಾವಣೆ ಮಾಡುತ್ತಾರೆ ಎಂಬ ಪ್ರಶ್ನೆಗೆ, ಈ ಕುರಿತು ತಾಲೂಕಿನಲ್ಲಿ ಯಾವುದೇ ದೂರು ಬಂದಿಲ್ಲ ಎಂದು ದಾಸೋಹ ಅಧಿಕಾರಿ ಸಭೆಗೆ ಉತ್ತರಿಸಿದರು. ದಲಿತ ಮುಖಂಡ ಕೆ.ಎಂ.ನಾಗರಾಜು ಮಾತನಾಡಿ, ಮಸಗಾಪುರ ಶಾಲೆಯ ಅಡುಗೆ ಸಹಾಯಕರನ್ನು ಏಕೆ ವರ್ಗಾವಣೆ ಮಾಡಿದ್ದೀರಿ ಎಂದು ಪ್ರಶ್ನಿಸಿದಾಗ ಅವರನ್ನು ನಗರದ ಶಾಲೆಗೆ ವರ್ಗಾವಣೆ ಮಾಡಲಾಗಿದೆ ಎಂದು ಉತ್ತರ ನೀಡಿದರು. ಈ ಬಗ್ಗೆ ಮುಂದಿನ ಸಭೆಯಲ್ಲಿ ವರದಿ ನೀಡುವಂತೆ ಸಮಿತಿ ಅಧ್ಯಕ್ಷರು ಹಾಗೂ ತಹಶೀಲ್ದಾರ್‌ ಮಹೇಶ್‌ ಸೂಚಿಸಿದರು.

ಬೋರ್‌ವೆಲ್‌ಗೆ ವಿದ್ಯುತ್‌ ಸಂಪರ್ಕ ನೀಡಿಲ್ಲ:
2016, 17 ಹಾಗೂ 18ನೇ ಸಾಲಿನಲ್ಲಿ ಅಂಬೇಡ್ಕರ್‌ ಅಭಿವೃದ್ಧಿ ನಿಗಮದಡಿಯಲ್ಲಿ ಎಸ್‌ಸಿ, ಎಸ್‌ಟಿ ಫ‌ಲಾನುಭವಿಗಳಿಗೆ ಕೊರೆಯಲಾದ ಬೋರ್‌ವೆಲ್‌ಗ‌ಳಿಗೆ ವಿದ್ಯುತ್‌ ಸಂಪರ್ಕ ನೀಡಿಲ್ಲ. ತಾ.ಪಂ ಮಾಜಿ ಸದಸ್ಯ ಮಹಾಲಿಂಗು ಇತರರು ಸಭೆ ಗಮನಕ್ಕೆ ತಂದಾಗ ಸೆಸ್ಕ್ ಎಇಇಗಳಾದ ರಾಜು, ದೇವರಾಜಯ್ಯ ಡಿಸೆಂಬರ್‌ ಅಂತ್ಯಕ್ಕೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು. ಸಭೆಯಲ್ಲಿ ತಾಪಂ ಇಒ ಪ್ರೇಮ್‌ಕುಮಾರ್‌, ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚಿಕ್ಕಬಸವಯ್ಯ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಿ.ಎಸ್‌.ರಾಮಸ್ವಾಮಿ ಹಾಗೂ ಸಮಿತಿ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್‌: ಎಸ್‌ಸಿ, ಎಸ್‌ಟಿ ಸಭೆಗೆ ಸರಿಯಾಗಿ ಅಧಿಕಾರಿಗಳು ಹಾಜರಾಗುತ್ತಿಲ್ಲ. ನಿರ್ಲಕ್ಷ್ಯ ತೋರುತ್ತಿದ್ದಾರೆ ಸಭೆ ಗೈರು ಹಾಜರಾದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹಿತರಕ್ಷಣಾ ಸಮಿತಿ ಸದಸ್ಯರು ಒತ್ತಾಯಿಸಿದಾಗ ತಹಶೀಲ್ದಾರ್‌ ಮಹೇಶ್‌, ಸಭೆಗೆ ಗೈರು ಹಾಜರಾಗಿರುವ ಅಧಿಕಾರಿಗಳಿಗೆ ನೋಟಿಸ್‌ ಜಾರಿಗೊಳಿಸಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.