ಚಾಮರಾಜನಗರದಲ್ಲಿ ಬಂದ್ ಸಂಪೂರ್ಣ ವಿಫಲ: ಪ್ರತಿಭಟನೆಗಷ್ಟೇ ಸೀಮಿತವಾದ ಕರ್ನಾಟಕ ಬಂದ್
Team Udayavani, Dec 5, 2020, 2:34 PM IST
ಚಾಮರಾಜನಗರ: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಇಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಚಾಮರಾಜನಗರದಲ್ಲಿ ಸಂಪೂರ್ಣ ವಿಫಲವಾಗಿ, ಪ್ರತಿಭಟನೆಗಷ್ಟೇ ಸೀಮಿತವಾಯಿತು.
ಚಾಮರಾಜನಗರದಲ್ಲಿ ಜನಜೀವನ ಸಹಜಸ್ಥಿತಿಯಲ್ಲಿದೆ. ನಗರದ ಭುವನೇಶ್ವರಿ ವೃತ್ತದಲ್ಲಿ ಕನ್ನಡ ಸಂಘಟನೆಗಳ ಕಾರ್ಯಕರ್ತರು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆಯ ಕಾವು ಹೆಚ್ಚಿಸಲು ಪ್ರಯತ್ನಿಸಿದರು. ಆದರೆ ಬೆಳ್ಳಂಬೆಳಿಗ್ಗೆ ಪ್ರತಿಭಟನೆ ನಡೆಸುತ್ತಿದ್ದ ಕನ್ನಡಪರ ಕಾರ್ಯಕರ್ತರನ್ನು ಬಂಧಿಸುವ ಮೂಲಕ ಪೊಲೀಸರು ಬಂದ್ ವಿಫಲಗೊಳಿಸಿದ್ದಾರೆ.
ಅಂಗಡಿ ಮುಂಗಟ್ಟುಗಳು, ಹೊಟೇಲ್ ಗಳು, ಪೆಟ್ರೋಲ್ ಬಂಕ್ ಗಳು ಎಂದಿನಂತೆ ತೆರೆದಿವೆ. ಕೆಎಸ್ಆರ್ ಟಿಸಿ ಹಾಗೂ ಖಾಸಗಿ ಬಸ್ ಸಂಚಾರ ಎಂದಿನಂತಿದೆ.
ಇದನ್ನೂ ಓದಿ:ಕೌರವನ ವಿರುದ್ಧ ಕೆರಳಿದ ಅನ್ನದಾತ : ರೈತ ಸಂಘಟನೆಯಿಂದ ಪ್ರತಿಕೃತಿ ದಹಿಸಿ ಪ್ರತಿಭಟನೆ
ಆಟೋ, ಕ್ಯಾಬ್, ಇನ್ನಿತರ ವಾಹನ ಸಂಚಾರ ಮಾಮೂಲಿನಂತಿದೆ. ಜನ ಸಂಚಾರಕ್ಕೂ ಯಾವುದೇ ರೀತಿಯ ತೊಂದರೆಯುಂಟಾಗಿಲ್ಲ.
ಮುನ್ನೆಚ್ಚರಿಕಾ ಕ್ರಮವಾಗಿ ನಗರದ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕನ್ನಡ ಸಂಘಟನೆಗಳು ಹೊರತಪಡಿಸಿದರೆ ಇತರೆ ಯಾವುದೇ ಸಂಘ ಸಂಸ್ಥೆಗಳು ಬಂದ್ ಗೆ ಬೆಂಬಲ ಸೂಚಿಸಿರಲಿಲ್ಲ. ಅಲ್ಲದೆ ಬೆಳಿಗ್ಗೆಯೇ ಕನ್ನಡ ಕಾರ್ಯಕರ್ತರನ್ನು ಬಂಧಿಸಿದ್ದರಿಂದ ಬಂದ್ ಗೆ ಹಿನ್ನಡೆಯುಂಟಾಯಿತು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅನುದಾನ, ಅಧಿಕಾರವಿಲ್ಲದ ತಾಪಂ ರದ್ದತಿಯೇ ಲೇಸು : ಮೂಲಸೌಲಭ್ಯಕ್ಕೆ ಅನುದಾನವೇ ಇಲ್ಲ
ವ್ಯಾಪಾರಿಯಿಂದ ಹಣ ದೋಚಿದ ಪ್ರಕರಣ : ಹನೂರು ಪೊಲೀಸರಿಂದ 4 ಮಂದಿ ಆರೋಪಿಗಳ ಬಂಧನ
ಸಾಲ ವಾಪಸ್ ಕೇಳಿದ ವೃದ್ಧೆಯನ್ನೇ ಕೊಂದು ಬಾವಿಗೆ ಎಸೆದ್ರು : ಇಬ್ಬರು ಆರೋಪಿಗಳು ಸೆರೆ
ಜಿಲ್ಲೆಯ 6 ಲಸಿಕಾ ಕೇಂದ್ರಗಳಲ್ಲಿ ಕೋವಿಡ್ ಲಸಿಕಾ ಅಭಿಯಾನ ಯಶಸ್ವಿ
ಭಯಪಡುವ ಅವಶ್ಯಕತೆ ಇಲ್ಲ: ಚಾಮರಾಜನಗರದಲ್ಲಿ ಮೊದಲ ಲಸಿಕೆ ಪಡೆದ ಮಂಜುನಾಥ್ ಅವರ ಅಭಿಪ್ರಾಯ