ಆರಂಭಕ್ಕೆ ವಿರೋಧ 30ಕ್ಕೆ ಅಂಗನವಾಡಿ ನೌಕರರ ಪ್ರತಿಭಟನೆ: ಸುಜಾತಾ

ಬೆಂಗಳೂರಲ್ಲಿನ ಪ್ರತಿಭಟನೆಗೆ ಜಿಲ್ಲೆಯಿಂದ 2 ಸಾವಿರ ಮಂದಿ ಭಾಗಿ

Team Udayavani, May 28, 2019, 8:18 AM IST

cn-tdy-1..

ಚಾಮರಾಜನಗರ: ರಾಜ್ಯ ಸರ್ಕಾರ ಪ್ರಾಥಮಿಕ ಶಾಲೆಗಳಲ್ಲೇ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಿರುವುದನ್ನು ವಿರೋಧಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಮೇ 30ರಂದು ಬೆಂಗಳೂರಿನ ವಿಧಾನಸೌಧದ ಮುಂಭಾಗ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಜಿಲ್ಲಾ ಸಮಿತಿ ವತಿಯಿಂದ 2000 ಮಂದಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಸಮಿತಿ ಅಧ್ಯಕ್ಷೆ ಕೆ.ಸುಜಾತಾ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪೂರ್ವ ಪ್ರಾಥಮಿಕ ತರಗತಿಗಳಾದ ಎಲ್ಕೆಜಿ, ಯುಕೆಜಿಗಳನ್ನು ಅಂಗನವಾಡಿ ಕೇಂದ್ರಗಳಲ್ಲಿಯೇ ಸ್ಥಾಪಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಹಲವಾರು ಬಾರಿ ಮನವಿ ನೀಡಿದ್ದರೂ ಸರ್ಕಾರ ಇದಕ್ಕೆ ಕಿವಿಗೊಟ್ಟಿಲ್ಲ. ಈಗ ಪ್ರಾಥಮಿಕ ಶಾಲೆಗಳಲ್ಲೇ ಯುಕೆಜಿ, ಎಲ್ಕೆಜಿ ಶಿಕ್ಷಣ ಪ್ರಾರಂಭಿಸಿದ್ದು ಪೊಷಕರು ಅಂಗನವಾಡಿ ಕೇಂದ್ರಗಳಿಗೆ ಮಕ್ಕಳನ್ನು ಕಳುಹಿಸದೇ ಯುಕೆಜಿ, ಎಲ್ಕೆಜಿ ಶಿಕ್ಷಣಕ್ಕೆ ದಾಖಲು ಮಾಡುತ್ತಿದ್ದಾರೆ. ಇದರಿಂದ ಅಂಗನವಾಡಿ ಕೇಂದ್ರಗಳಿಗೆ ಮಕ್ಕಳ ಹಾಜರಾತಿ ಕಡಿಮೆಯಾಗಿದೆ ಎಂದರು.

ಅಂಗನವಾಡಿ ಕೇಂದ್ರ ಖಾಲಿ ಖಾಲಿ: ರಾಜ್ಯ ಸರ್ಕಾರ, ಪ್ರಾಥಮಿಕ ಶಾಲೆಯಲ್ಲಿ ಯುಕೆಜಿ, ಎಲ್ಕೆಜಿ ಶಿಕ್ಷಣ ಪ್ರಾರಂಭಿಸಿ ಅಂಗನವಾಡಿ ಕೇಂದ್ರಗಳಿಗೆ ಮಕ್ಕಳು ಬಾರದಂತೆ ಮಾಡಿ ಅಂಗನವಾಡಿ ಕೇಂದ್ರಗಳನ್ನು ಕುಗ್ಗಿಸುತ್ತಿದೆ. ಯುಕೆಜಿ, ಎಲ್ಕೆಜಿ ಶಿಕ್ಷಣಕ್ಕೆ ಮಕ್ಕಳು ದಾಖಲಾಗುತ್ತಿರುವುದರಿಂದ ಅಂಗನವಾಡಿ ಕೇಂದ್ರಗಳು ಖಾಲಿ ಖಾಲಿಯಾಗುತ್ತಿದ್ದು, 3 ವರ್ಷದಿಂದ 6 ವರ್ಷದ ಮಕ್ಕಳು ಅಂಗನವಾಡಿಗೆ ದಾಖಲಾಗದೇ ಯುಕೆಜಿ ಎಲ್ಕೆಜಿ ಶಿಕ್ಷಣಕ್ಕೆ ದಾಖಲಾಗುತ್ತಿದ್ದಾರೆಂದರು.

ಸಂಘದಿಂದ ವಿರೋಧ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರನ್ನು ಹಾಗೂ ಶಿಕ್ಷಣ ಇಲಾಖೆ ಸಚಿವರನ್ನು ಕರೆದು ಸಭೆ ನಡೆಸದೇ ಮುಖ್ಯಮಂತ್ರಿಯವರು ಈ ತೀರ್ಮಾನ ಕೈಗೊಂಡಿರುವುದನ್ನು ರಾಜ್ಯ ಅಂಗನವಾಡಿ ನೌಕರರ ಸಂಘ ವಿರೋಧಿಸುತ್ತದೆ ಎಂದು ಹೇಳಿದರು.

ಶಿಶುಪಾಲನಾ ಕೇಂದ್ರವಾಗಿ ಪರಿವರ್ತಿಸಿ: ಅಂಗನವಾಡಿ ಕೇಂದ್ರಗಳಲ್ಲೇ ಯುಕೆಜಿ-ಎಲ್ಕೆಜಿ ಶಿಕ್ಷಣ ಪ್ರಾರಂಭಿಸಿ ಅಂಗನವಾಡಿ ಕೇಂದ್ರಗಳನ್ನು ಶಿಶುಪಾಲನಾ ಕೇಂದ್ರಗಳಾಗಿ ಪರಿವರ್ತಿಸಿ ಅಂಗನವಾಡಿ ಕೇಂದ್ರದಿಂದಲೇ ಮುಂದಿನ ತರಗತಿಗೆ ವರ್ಗಾವಣೆ ಪತ್ರ ರವಾನಿಸುವ ವ್ಯವಸ್ಥೆ ಮಾಡಬೇಕು. ಶಾಸನ ಬದ್ದವಾಗಿ ಕನಿಷ್ಠ ವೇತನ ನಿಗದಿ ಮಾಡಬೇಕು, ಕೊಥಾರಿ ಕಮಿಷನ್‌ ವರದಿ ಸಂಪೂರ್ಣವಾಗಿ ಜಾರಿಯಾಗಬೇಕು ಎಂದು ಒತ್ತಾಯಿಸಿದರು.

ಅಂಗನವಾಡಿ ನೌಕರರ ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ನಾಗಮಣಿ, ತಾಲೂಕು ಅಧ್ಯಕ್ಷೆ ರೇವಮ್ಮ, ತಾಲೂಕು ಕಾರ್ಯದರ್ಶಿ ಶಾಹಿದಾ ಬಾನು, ಖಜಾಂಚಿ ಯಶೋದಾ ಇದ್ದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-wr3

Record; ಮಲೆ ಮಹದೇಶ್ವರ ಬೆಟ್ಟ ಹುಂಡಿ ಎಣಿಕೆ: 25 ದಿನಗಳಲ್ಲಿ 3.13 ಕೋಟಿ!

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Chamarajanagar; ಆನೆ ದಾಳಿಗೆ ಬಲಿಯಾದ ಯುವಕ

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Election Boycott: ಮತದಾನ ಬಹಿಷ್ಕಾರದಿಂದ ಹಿಂದೆ ಸರಿಯಲ್ಲ; ಗ್ರಾಮಸ್ಥರು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.