ಉತ್ತಮ ಆರೋಗ್ಯಕ್ಕಾಗಿ ನಿತ್ಯ ಯೋಗಾಭ್ಯಾಸ ಮಾಡಿ


Team Udayavani, Feb 3, 2020, 3:00 AM IST

uttama-arog

ಚಾಮರಾಜನಗರ: ರಥ ಸಪ್ತಮಿ ಅಂಗವಾಗಿ ನಗರದ ಹೃದಯ ಭಾಗದಲ್ಲಿರುವ ಶ್ರೀಚಾಮರಾಜೇಶ್ವರ ಸ್ವಾಮಿ ದೇವಸ್ಥಾನದ ಮುಭಾಂಗ 1200ಕ್ಕೂ ಹೆಚ್ಚು ಮಂದಿಯಿಂದ ಸಾಮೂಹಿಕವಾಗಿ ಸೂರ್ಯ ನಮಸ್ಕಾರ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ನಗರದ ಪತಂಜಲಿ ಯೋಗ ಶಿಕ್ಷಣ ಸಮಿತಿ, ಸೇವಾ ಭಾರತಿ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ 10ನೇ ವರ್ಷದ ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಯೋಗದಿಂದ ಮಾನಸಿಕ ಒತ್ತಡ ಕಡಿಮೆ: ಕಾರ್ಯಕ್ರಮವನ್ನು ಉದ್ಘಾಟಿಸಿದ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಧೀಶ ವಿನಯ್‌ ಮಾತನಾಡಿ, ಪ್ರತಿನಿತ್ಯ ವಾಕಿಂಗ್‌ ಮಾಡುವುದಕ್ಕಿಂತ ಯೋಗಾಭ್ಯಾಸ ಮಾಡಿದರೆ ಉತ್ತಮ ಆರೋಗ್ಯವಂತ ಜೀವನ ನಡೆಸಲು ಸಾಧ್ಯವಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಾನಸಿಕ ಒತ್ತಡ ಹೆಚ್ಚಾಗುತ್ತಿದೆ. ಇದನ್ನು ಕಡಿಮೆ ಮಾಡಿಕೊಳ್ಳಲು ಯೋಗಾಭ್ಯಾಸ ಅತ್ಯಂತ ಪರಿಣಾಮಕಾರಿಯಾಗಿದೆ. 108 ಸಾಮೂಹಿಕ ಸೂರ್ಯ ನಮಸ್ಕಾರದಂತಹ ಕಾರ್ಯಕ್ರಮದಲ್ಲಿ ಕಳೆದ 3 ವರ್ಷದಿಂದ ನಾನು ಭಾಗಿಯಾಗುತ್ತಿರುವುದು ಸಂತಸ ತಂದಿದೆ ಎಂದು ಮೆಚ್ಚುಗೆಗೆ ವ್ಯಕ್ತ ಪಡಿಸಿದರು.

ಸಂಸ್ಕಾರಯುತ ಕಾರ್ಯಕ್ರಮ: ಜಿಲ್ಲಾ ಪೋಲೀಸ್‌ ವರಿಷ್ಠಾಧಿಕಾರಿ ಆನಂದ್‌ಕುಮಾರ್‌ ಮಾತನಾಡಿ, 108 ಸೂರ್ಯ ನಮಸ್ಕಾರದಂತಹ ಸಂಸ್ಕಾರಯುತ ಕಾರ್ಯಕ್ರಮ ಬಹಳ ಅರ್ಥಪೂರ್ಣವಾಗಿದೆ. ಒತ್ತಡ ಮುಕ್ತ ಜೀವನಕ್ಕೆ ಯೋಗ ಸಹಕಾರಿಯಾಗಲಿದೆ. ಪ್ರತಿ ನಿತ್ಯ ಯೋಗ, ಧ್ಯಾನ, ಆಧ್ಯಾತ್ಮವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಆರೋಗ್ಯವಂತ ಜೀವನ ನಡೆಸಲು ಸಾಧ್ಯವಿದೆ ಎಂದರು.

ಸೂರ್ಯ ಕಿರಣದಲ್ಲಿದೆ ವಿಟಮಿನ್‌ ಡಿ: ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾನಿಲಯದ ರಾಜಯೋಗಿನಿ ದಾನೇಶ್ವರಿಜೀ ಮಾತನಾಡಿ, ಸೂರ್ಯ ನಮಸ್ಕಾರ ಭಗವಂತನಿಗೆ ಪ್ರಿಯ. ಆತನಿಗೆ ತಾವುಗಳೆಲ್ಲರೂ ಸೇರಿ 108 ಸೂರ್ಯ ನಮಸ್ಕಾರ ಮಾಡುತ್ತಿರುವುದರಿಂದ ಆ ಸೂರ್ಯ ಭಗವಂತನ ಕೃಪೆ ಸದಾ ನಿಮ್ಮೆಲ್ಲರಿಗೂ ಲಭಿಸಲಿದೆ. ಸೂರ್ಯ ನಮಸ್ಕಾರ ಮಾಡುವುದರಿಂದ ದೇಹಕ್ಕೆ ಸೂರ್ಯ ಕಿರಣಗಳು ಸ್ಪರ್ಶಿಸಿದಾಗ ವಿಟಮಿನ್‌ ಡಿ ದೊರೆಯುತ್ತಿದೆ ಎಂದು ಹೇಳಿದರು.

ಸಾವಯವ ಆಹಾರ ಪದ್ಧತಿ ಅಳವಡಿಸಿಕೊಳ್ಳಿ: ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಕುಮಾರಸ್ವಾಮಿ ಮಾತನಾಡಿ, ನಾವು ಪ್ರತಿ ನಿತ್ಯ ಸೇವಿಸುವ ಆಹಾರವು ಕಲುಷಿತವಾಗಿದೆ. ಸಾವಯವ ಆಹಾರ ಪದ್ಧತಿ ಹಾಗೂ ಪ್ರತಿ ನಿತ್ಯ ಯೋಗಾಭ್ಯಾಸವನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ರೋಗಮುಕ್ತ ಜೀವನ ನಡೆಸಲು ಸಾಧ್ಯ ಎಂದು ತಿಳಿಸಿದರು.

ಆರೋಗ್ಯವಂತ ಸಮಾಜಕ್ಕೆ ಶ್ರಮ:
ಯೋಗ ಶಿಕ್ಷಣ ಸಮಿತಿಯ ಜಿಲ್ಲಾ ಸಂಚಾಲಕ ಯೋಗಪ್ರಕಾಶ್‌ ಮಾತನಾಡಿ, ಪತಂಜಲಿ ಯೋಗ ಶಿಕ್ಷಣ ಸಮಿತಿಯು ಸಂಸ್ಕಾರ, ಸಂಘಟನೆ ಮತ್ತು ಸೇವೆ ಎಂಬ 3 ಧ್ಯೇಯಗಳನ್ನಿಟ್ಟುಕೊಂಡು ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸುತ್ತಿದೆ. ಈ ಸಮಿತಿಯು 40 ವರ್ಷಗಳಿಂದ ಉಚಿತವಾಗಿ ಯೋಗ ಶಿಕ್ಷಣ ನೀಡುತ್ತಿದೆ.

ಎಲ್ಲರು ಪ್ರತಿ ನಿತ್ಯ ಯೋಗಭ್ಯಾಸವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಏನೆಲ್ಲಾ ಲಾಭಗಳು ಮನುಷ್ಯನಿಗೆ ದೊರಕುತ್ತವೆ ಎಂಬುದನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಂ.ಸಿ.ರವಿ, ಜಿಲ್ಲಾ ಲಸಿಕಾ ಅಧಿಕಾರಿ ಡಾ.ವಿಶ್ವೇಶ್ವರಯ್ಯ, ಭಾರತ್‌ ವಿಕಾಸ್‌ ಪರಿಷತ್‌ನ ಅಧ್ಯಕ್ಷ ಬಿ.ವಿ.ವೆಂಕಟನಾಗಪ್ಪ ಶೆಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.